Site icon Vistara News

2nd Puc Exam 2023: ಎಕ್ಸಾಂ ಹಾಲ್‌ನಲ್ಲೇ ಸೆಲ್ಫಿ ತೆಗೆದುಕೊಂಡ ಸ್ಪೆಷಲ್ ಅಬ್ಸರ್ವರ್; ವಿಜಯಪುರದಲ್ಲಿ ಪರೀಕ್ಷಾ ನಿಯಮ ಉಲ್ಲಂಘಿಸಿ ಎಡವಟ್ಟು

Special Observer who took a selfie in the exam hall, Vijayapura violates exam rules

Special Observer who took a selfie in the exam hall, Vijayapura violates exam rules

ವಿಜಯಪುರ: ದ್ವಿತೀಯ ಪಿಯುಸಿ (2nd Puc Exam 2023) ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಎಡವಟ್ಟು ಮಾಡಿಕೊಂಡಿದ್ದಾರೆ. ಪರೀಕ್ಷಾ ಕೊಠಡಿಗೆ ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ದೇವಣಗಾಂವ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಸಿಂದಗಿ ಸಮಾಜ ಕಲ್ಯಾಣ ಇಲಾಖೆ ಎಡಿ ನಿರ್ಮಲಾ ಭೂಸಗೊಂಡ ಪರೀಕ್ಷಾ ನಿಯಮ ಉಲ್ಲಂಘಿಸಿದ್ದಾರೆ. ದೇವಣಗಾಂವ ಪರೀಕ್ಷಾ ಕೇಂದ್ರಕ್ಕೆ ಸ್ಪೆಷಲ್‌ ಅಬ್ಸರ್ವರ್ ಆಗಿದ್ದರು. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾಗ ತಮ್ಮ ಸ್ಮಾರ್ಟ್‌ಫೋನ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಸಮಾಜ ಕಲ್ಯಾಣ ಇಲಾಖೆಯ ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಸೆಲ್ಫಿ ತೆಗೆದುಕೊಂಡ ನಿರ್ಮಲಾ

ದ್ವಿತೀಯ ಪಿಯುಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆಯಲ್ಲಿ ಎಡಿ ನಿರ್ಮಲಾ ಈ ಎಡವಟ್ಟು ಮಾಡಿಕೊಂಡಿದ್ದು, ಸದ್ಯ ಹಿರಿಯ ಅಧಿಕಾರಿಗಳು ನೋಟಿಸ್ ಕೊಡಲು ಮುಂದಾಗಿದ್ದಾರೆ.

ಬೇಸಿಕ್‌ ಸೆಟ್‌ಗಷ್ಟೇ ಅನುಮತಿ

ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಕಾರಣಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಪರೀಕ್ಷಾ ಕರ್ತವ್ಯದಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗೂ ಸ್ಮಾರ್ಟ್‌ ಮೊಬೈಲ್ ಫೋನ್‌ಗಳ ಬಳಕೆಯನ್ನು ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಕೇವಲ ಬೇಸಿಕ್ ಸೆಟ್‌ ಮೊಬೈಲ್‌ ಫೋನ್ ಅನ್ನು ಬಳಕೆ ಮಾಡಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: Suicide Case: ವಿಜಯಪುರದ ಉಪ್ಪಲಿಬುರ್ಜ್‌ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಹೀಗಿರುವಾಗ ಸ್ಮಾರ್ಟ್‌ ಮೊಬೈಲ್‌ ಅನ್ನು ಎಕ್ಸಾಂ ಹಾಲ್‌ ತೆಗೆದುಕೊಂಡು ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಪರೀಕ್ಷಾ ನಿಯಮವನ್ನು ನಿರ್ಮಲಾ ಅವರು ಉಲ್ಲಂಘಿಸಿದ್ದಾರೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version