ಬೆಂಗಳೂರು: 2024ರ ದ್ವಿತೀಯ ಪಿಯುಸಿ ಪರೀಕ್ಷೆ-2, ಏಪ್ರಿಲ್ 29ರಿಂದ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ (2nd PUC Exam) ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು (Admission Ticket) ಮಂಡಲಿಯ ವೆಬ್‌ಸೈಟ್ https://kseab.karnataka.gov.inನಲ್ಲಿ ಪಡೆಯಬಹುದಾಗಿದೆ.
ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷೆ ಎನ್.ಮಂಜುಶ್ರೀ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ
ಪತ್ರವನ್ನು (Admission Ticket) online ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರವನ್ನು (Admission Ticket) ಪಡೆದುಕೊಳ್ಳುವುದು ಎಂದು ತಿಳಿಸಿದ್ದಾರೆ.
ಏ.29ರಿಂದ ಮೇ 16ರವರೆಗೆ ತೀಯ ಪಿಯುಸಿ ಪರೀಕ್ಷೆ-2
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ. ಅಂತಹವರಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಸಲಾಗುತ್ತಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು ನಡೆಸಲಾಗುವುದು.
ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:
- karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್ಗೆ ಭೇಟಿ ನೀಡಿ.
- ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
- ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
- ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.
2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:
- ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ
- ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
- ಮೇ 9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
- ಮೇ 11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ
- ಮೇ 13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ
- ಮೇ 16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.