ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್-ಮೇ ತಿಂಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಲ್ಲೇಶ್ವರಂನಲ್ಲಿರುವ ಪಿಯು ಬೋರ್ಡ್‌ನಲ್ಲಿ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಇಂದು ಅವರೆಲ್ಲರ ಭವಿಷ್ಯ ನಿರ್ಧಾರವಾಗಲಿದೆ.
ಇದನ್ನೂ ಓದಿ |ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು ಸುದ್ದಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಈ ಲಿಂಕ್ ಓಪನ್ ಮಾಡಿ ನಿಮ್ಮ ಹಾಲ್ ಟಿಕೆಟ್ ನಂಬರ್ ನಮೂದಿಸಿ ಕೂಡಲೇ ಫಲಿತಾಂಶ ಸಿಗಲಿದೆ. SATsನಲ್ಲಿ ನೊಂದಾಯಿತವಾಗಿರುವ ಎಲ್ಲ ವಿದ್ಯಾರ್ಥಿಗಳಿಗೂ ತಮ್ಮ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ದೊರೆಯಲಿದೆ.
ಇದನ್ನೂ ಓದಿ | 2nd PU Exam: ಪಿಯುಸಿ ಪರೀಕ್ಷೆಗೂ ಹಿಜಾಬ್ ಧರಿಸುವಂತಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ