ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಪ್ರಕಟಗೊಂಡಿದ್ದು, ಒಟ್ಟು 61.88% ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಫಲಿತಾಂಶದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಿಯು ಬೋರ್ಡ್‌ನಲ್ಲಿ ಫಲಿತಾಂಶ ಪ್ರಕಟಿಸಿದ ನಾಗೇಶ್, ಹೊಸದಾಗಿ ಪರೀಕ್ಷೆ ಬರೆದ 67.44% ಹಾಗೂ ಪುನರಾವರ್ತಿತ 23.29% ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ 48.71%, ವಾಣಿಜ್ಯ ವಿಭಾಗದಲ್ಲಿ 64.97% ಹಾಗೂ ವಿಜ್ಞಾನ ವಿಭಾಗದಲ್ಲಿ 72.53% ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಲಿಂಗವಾರು ಫಲಿತಾಂಶದಲ್ಲಿ ಒಟ್ಟು 55.22% ಬಾಕರು ತೇರ್ಗಡೆ ಹೊಂದಿದ್ದರೆ ೬೮.೭೨% ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.
2020ರ ಫಲಿತಾಂಶದಲ್ಲಿ ನಗರ ಪ್ರದೇಶದ 62.60% ನಗರ ವಿದ್ಯಾರ್ಥಿಗಳು ಹಾಗೂ 58.99% ಗ್ರಾಮೀಣ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಆದರೆ ಈ ವರ್ಷ ನಗರ ಪ್ರದೇಶದ 61.78% ತೇರ್ಗಡೆಯಾಗಿದ್ದರೆ ಗ್ರಾಮೀಣ ವಿದ್ಯಾರ್ಥಿಗಳು 62.18% ತೇರ್ಗಡೆಯಾಗಿ ಮುನ್ನಡೆ ಸಾಧಿಸಿದ್ದಾರೆ.
ಏಪ್ರಿಲ್-ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. ರಾಜ್ಯಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಯ ಮೌಲ್ಯಮಾಪನ ಕಾರ್ಯವೂ ಮೇ ಕಡೆ ವಾರದಂದು ಆರಂಭವಾಗಿ ಮುಗಿದಿತ್ತು. ಜೂನ್ ನಾಲ್ಕನೇ ವಾರದಲ್ಲಿ 2nd PUC Result ಪ್ರಕಟಿಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದರು.
ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪಿಯು ಬೋರ್ಡ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.puc.kar.nic.in ಹಾಗೂ karresults.nic.in ಮೂಲಕ ಪಡೆಯಬಹುದಾಗಿದೆ. ಜತೆಗೆ SATS ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಅವರ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಬರಲಿದೆ.
ಇದನ್ನೂ ಓದಿ | ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?