Site icon Vistara News

Students Fall Sick: ಶಿಗ್ಗಾವಿಯಲ್ಲಿ ಬಿಸಿಯೂಟ ಸೇವಿಸಿ 34 ಶಾಲಾ ಮಕ್ಕಳು ಅಸ್ವಸ್ಥ

Students admitted to hospital

ಹಾವೇರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 34 ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಕ್ಕಳನ್ನು (Students Fall Sick) ಶಿಗ್ಗಾವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ.

ಇದನ್ನೂ ಓದಿ | Tractor accident : ಉಳುಮೆ ವೇಳೆ ಟ್ರ್ಯಾಕ್ಟರ್‌ ಪಲ್ಟಿ; ನಿವೃತ್ತ ಶಿಕ್ಷಕ ಸಾವು

ಮಾವು ತುಂಬಿದ್ದ ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿ; ಕಾರ್ಮಿಕ ಸಾವು, ಮೂವರಿಗೆ ಗಾಯ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿರುವ ಮಾವು ಮಾರುಕಟ್ಟೆ ಸಮೀಪ ಮಾವು ತುಂಬಿದ್ದ ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿ (Tractor Accident) ಕಾರ್ಮಿಕನೊಬ್ಬ ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕ ಇಂದಿರಾನಗರ ನಿವಾಸಿ ಶಫಿ (35) ಮೃತ ದುರ್ದೈವಿ.

ಮಾವು ತುಂಬಿದ್ದ ಟ್ರ್ಯಾಕ್ಟರ್‌ ಟ್ರಾಲಿ ಮೇಲೆ ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಕುಳಿತಿದ್ದರು. ಮಾರುಕಟ್ಟೆಗೆ ಆಗಮಿಸಿದ ವೇಳೆ ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿದ್ದು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮಹಿಳೆಗೂ ಗಾಯವಾಗಿದ್ದು ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್‌ ತಂತಿ ತಗುಲಿ ರೈತ- ಜಾನುವಾರು ಸಾವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ರೈತ ಹಾಗೂ ಎತ್ತು ಮೃತಪಟ್ಟಿವೆ. ಬಸವರಾಜ್ ಹೆಗಲೇರಿ (24) ಮೃತ ದುರ್ದೈವಿ. ಜಮೀನಿನಲ್ಲಿ ಜೋತುಬಿದ್ದ ವಿದ್ಯುತ್ ತಂತಿಗೆ ಬಾರುಕೋಲು ತಗುಲಿ ಬಸವರಾಜ್‌ ಹಾಗೂ ಜತೆಗೆ ಇದ್ದ ಎತ್ತು ಜೀವ ಬಿಟ್ಟಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Self Harming : ತಾಳಗುಪ್ಪ ರೈಲಿಗೆ ತಲೆವೊಡ್ಡಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ!

ಹಾವು ಕಚ್ಚಿ ಯುವಕ ಸಾವು

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೈಚಬಾಳ ಗ್ರಾಮದಲ್ಲಿ ಜಮೀನು ಕೆಲಸಕ್ಕೆ ಹೋಗಿದ್ದ ಯುವಕನಿಗೆ ಹಾವು ಕಚ್ಚಿದೆ. ಬೆಳಗ್ಗೆ ಜಮೀನು ಕೆಲಸಕ್ಕೆ ಹೋಗಿದ್ದ ದೇವರಾಜ್ (25) ಎಂಬುವವರಿಗೆ ಹಾವು ಕಚ್ಚಿದೆ. ಕೂಡಲೇ ದೇವರಾಜ್‌ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version