ಬೆಂಗಳೂರು: ವಿಶೇಷಚೇತನರು ಸಮಾಜಕ್ಕೆ ಹೊರೆ ಅಲ್ಲ. ಅವರೂ ಕೂಡ ಬೇರೆಯವರಂತೆ ಈ ಸಮಾಜದಲ್ಲಿ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಬದುಕಿಗೆ ಹಕ್ಕುಗಳನ್ನು ಪಡೆದಿದ್ದಾರೆ. ವಿಶೇಷಚೇತನರಿಗೆ ಶಿಕ್ಷಣ ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ. 2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ವಿಶೇಷಚೇತನರ ದಿನಾಚರಣೆ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ | Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ
ಇಂದು ವಿಶ್ವ ವಿಶೇಷಚೇತನರ ದಿನ. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ. ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ವಿಶ್ವ ವಿಶೇಷಚೇತನರು ಆಗಮಿಸಿದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಪಟ್ಟ ಇಲಾಖೆಯು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ | Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್. ಅಶೋಕ್
ಪ್ರಸಕ್ತ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು 2 ಕೋಟಿ ವೆಚ್ಚದಲ್ಲಿ ಏಳು ಜಿಲ್ಲೆಗಳಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಶೇಷಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 284.27ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಶೇಷಚೇತನರಿಗೆ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿಶೇಷಚೇತನರು ಕ್ರೀಡೆ ಸೇರಿದಂತೆ ಎಲ್ಲ ರಂಗಗಳಲ್ಲಿ ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಆದ್ದರಿಂದ ಅವರು ಸಮಾಜಕ್ಕೆ ಹೊರೆ ಎನ್ನುವ ಸಮಾಜದಲ್ಲಿರುವ ಭಾವನೆಯನ್ನು ದೂರ ಮಾಡಬೇಕಿದೆ ಎಂದರು.
ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ, ಸನ್ಮಾನ
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಭಾನುವಾರ ನಡೆದ ‘ವಿಶ್ವ ವಿಕಲಚೇತನರ ದಿನಾಚರಣೆ-2023’ ಅಂಗವಾಗಿ ತೆರೆಯಲಾಗಿದ್ದ ವಿವಿಧ ಇಲಾಖೆಗಳ ಕಾರ್ಯ ಯೋಜನೆ ಮಾಹಿತಿಗಳ ಪ್ರದರ್ಶನದ ಮಳಿಗೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಇದನ್ನೂ ಓದಿ | Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್. ಅಶೋಕ್
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಶ್ವ ವಿಶೇಷಚೇತನರಿಗೆ, ಸಂಸ್ಥೆಗಳಿಗೆ ಹಾಗೂ ವಿಶೇಷ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ಕರ್ನಾಟಕ ಬೌದ್ಧಿಕ ವಿಕಲಚೇತನ ಮಕ್ಕಳ ಪಾಲಕರ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಗಡ್ಕರಿ.ಜೆ.ಪಿ ಉಪಸ್ಥಿತರಿದ್ದರು.
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: