Site icon Vistara News

ಹಳೆ ಹುಬ್ಬಳ್ಳಿ ಗಲಭೆ | ನಾಲ್ಕು ಸಾವಿರ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

old hubli

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ನಾಲ್ಕು ಸಾವಿರ ಪುಟಗಳ ಚಾರ್ಜ್‌‌ಶೀಟ್ ಸಲ್ಲಿಸಲಾಗಿದೆ.

ಎನ್‌ಐಎ ನ್ಯಾಯಾಲಯದಲ್ಲಿ ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಈ ಕುರಿತು ಚಾರ್ಚ್‌ಶೀಟ್ ಸಲ್ಲಿಸಿದ್ದಾರೆ. ಯುವಕನ ವಾಟ್ಸ್‌ಆ್ಯಪ್ ಸ್ಟೇಟಸ್‌ ವಿರುದ್ಧ ಆಕ್ರೋಶಗೊಂಡ ಒಂದು ಕೋಮಿನ ಮಂದಿ ಸೇರಿ ಗಲಭೆ ಎಬ್ಬಿಸಿದ್ದರು. ಏಪ್ರಿಲ್ 16ರಂದು ರಾತ್ರಿ ಹಳೇ ಹುಬ್ಬಳ್ಳಿ ಠಾಣೆ ಎದುರು ಜಮಾಯಿಸಿದ್ದ ಸಾವಿರಾರು ಜನರು ಯುವಕನನ್ನು ತಮಗೆ ಒಪ್ಪಿಸುವಂತೆ ಕೂಗಿ ಕಿರುಚಾಡಿ ಠಾಣೆ ಮೇಲೆ ಕಲ್ಲಿನ ಸುರಿಮಳೆಗೈದಿದ್ದರು. ಆಸ್ಪತ್ರೆ, ದೇವಸ್ಥಾನ, ಮನೆಗಳ ಮೇಲೂ ಕಲ್ಲು ಎಸೆದು ಗಲಭೆ ಉಂಟುಮಾಡಿದ್ದರು.

ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿ ಎಂಟು ಪೊಲೀಸರಿಗೆ ಗಾಯಗಳಾಗಿದ್ದವು. ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಬೇಕಾಗಿ ಬಂದಿತ್ತು. ಈ ಕುರಿತು ಪೊಲೀಸರು 12 ಪ್ರಕರಣ ದಾಖಲಿಸಿ 158 ಆರೋಪಿಗಳನ್ನು ಬಂಧಿಸಿದ್ದರು. ಆ ಆರೋಪಿಗಳು ಬಳ್ಳಾರಿ ಹಾಗೂ ಕಲಬುರಗಿ ಜೈಲಿನಲ್ಲಿದ್ದಾರೆ. ಎಸಿಪಿ ಆರ್.ಕೆ. ಪಾಟೀಲ, ಹಳೇ ಹುಬ್ಬಳ್ಳಿ ಠಾಣೆ ಇನ್ಸ್‌ಪೆಕ್ಟರ್ ಅಶೋಕ ಚವ್ಹಾಣ ತಂಡದಿಂದ ಬೆಂಗಳೂರಿನಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಇದನ್ನೂ ಓದಿ | ಹುಬ್ಬಳ್ಳಿ ಗಲಭೆ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್‌: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

Exit mobile version