ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. ಈಗ ಕಂದಾಯ ಇಲಾಖೆಯ (Revenue Department) ಸರದಿಯಾಗಿದ್ದು, ಮೇಜರ್ ಸರ್ಜರಿಯನ್ನು ಮಾಡಲಾಗಿದೆ. ಶುಕ್ರವಾರ (ಜುಲೈ 28) ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಒಂದೇ ದಿನದಲ್ಲಿ ಒಟ್ಟು 46 ತಹಸೀಲ್ದಾರ್‌ಗಳನ್ನು ವರ್ಗಾವಣೆ (Tahsildar Transfer) ಮಾಡಲಾಗಿದೆ.
ಕಂದಾಯ ಇಲಾಖೆಯ ತಹಸೀಲ್ದಾರ್ ಗ್ರೇಡ್-1 ಮತ್ತು ತಹಸೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ವರ್ಗಾವಣೆ ಆದೇಶದ ಪಟ್ಟಿ ಇಲ್ಲಿದೆ
ಇದನ್ನೂ ಓದಿ: Shadow CM : ಸಿಎಂ ಸಿದ್ದರಾಮಯ್ಯಗೆ ಯತೀಂದ್ರ ಶ್ಯಾಡೊ ಸಿಎಂ; ಸಿಕ್ಕಿತು ದಾಖಲೆ!
ವರ್ಗಾವಣೆಗೊಂಡ ಅಧಿಕಾರಿಗಳು ವರ್ಗಾಯಿಸಿ ನೇಮಿಸಲಾದ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಸಿಟಿಸಿ ಪ್ರತಿಯನ್ನು ಇ-ಮೇಲ್ ಮೂಲಕ ಕಂದಾಯ ಇಲಾಖೆಗೆ ಕಳುಹಿಸುವಂತೆ ಸೂಚಿಸಲಾಗಿದೆ.
ಮೇಲಿನ ವರ್ಗಾವಣೆಯಿಂದ ಸ್ಥಳ ನಿರೀಕ್ಷಣೆಗಾಗಿ ಬರಲಿರುವ ಅಧಿಕಾರಿಗಳು ಮುಂದಿನ ಸ್ಥಳನಿಯುಕ್ತಿಗಾಗಿ ಕಂದಾಯ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಇಬ್ಬರು ಪಿಡಿಒಗಳ ವರ್ಗಾವಣೆ; ಪ್ರಿಯಾಂಕ್ ಖರ್ಗೆ ವಿರುದ್ಧ ನಿಯಮ ಉಲ್ಲಂಘನೆ ಆರೋಪ
ಸಾರ್ವತ್ರಿಕ ವರ್ಗಾವಣೆ ಅವಧಿಯ ಕೊನೇ ದಿನ ಮುಕ್ತಾಯವಾದ ಬಳಿಕವೂ ಇಬ್ಬರು ಪಿಡಿಒಗಳನ್ನು ವರ್ಗಾವಣೆ (PDO Transfer) ಮಾಡಿರುವುದು ಕಂಡುಬಂದಿತ್ತು. ಈ ಮೂಲಕ ಸರ್ಕಾರದ ವರ್ಗಾವಣೆ ನಿಯಮವನ್ನು (PDO Transfer) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕಳೆದೆರಡು ದಿನದ ಹಿಂದೆ ಕೇಳಿಬಂದಿತ್ತು.
ಜುಲೈ 3ನೇ ತಾರೀಕು ಸಾರ್ವತ್ರಿಕ ವರ್ಗಾವಣೆಗೆ ಕೊನೆಯ ದಿನವಾಗಿತ್ತು. ಆದರೆ, ಸಚಿವ ಪ್ರಿಯಾಂಕ್ ಖರ್ಗೆ ಅವರು, ಜುಲೈ 5ರಂದು ಇಬ್ಬರು ಪಿಡಿಒಗಳನ್ನು ವರ್ಗಾವಣೆ ಆದೇಶ ಮಾಡಿದ್ದಾರೆ. ಹೀಗಾಗಿ ಸರ್ಕಾರದ ವರ್ಗಾವಣೆ ನಿಯಮವನ್ನು ಸಚಿವರೇ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: Karnataka Politics : ಸಚಿವರಿಂದ 6 ಪರ್ಸೆಂಟ್ ವರ್ಗಾವಣೆ, ಬಾಕಿಯದ್ದು ಸಿಎಂಗೆ: ಸತೀಶ್ ಜಾರಕಿಹೊಳಿ
ಸಚಿವ ಪ್ರಿಯಾಂಕ್ ಖರ್ಗೆ ಅವರು ಒಟ್ಟು 208 ಪಿಡಿಒಗಳನ್ನು ವರ್ಗಾವಣೆ ಮಾಡಿದ್ದರು. ಇದರಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿತ್ತಾಮಂಗಲ ಗ್ರಾಮ ಪಂಚಾಯತಿಗೆ ಇಬ್ಬರು ಪಿಡಿಒಗಳನ್ನು ವರ್ಗಾವಣೆ ಮಾಡಲಾಗಿತ್ತು. ಕೆ.ಎಂ ವೆಂಕಟೇಶ್ ಹಾಗೂ ಪ್ರತಿಭಾ ಎನ್ನುವ ಇಬ್ಬರಿಗೂ ಒಂದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿರುವುದರಿಂದ ಯಾರು ಅಧಿಕಾರ ತೆಗೆದುಕೊಳ್ಳಬೇಕು ಎಂಬ ಗೊಂದಲ ಸೃಷ್ಟಿಯಾಗಿತ್ತು.