Site icon Vistara News

ವಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಮೂವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಬೊಮ್ಮಾಯಿ

Ballary VIMS

ಬೆಂಗಳೂರು: ಬಳ್ಳಾರಿಯ ವಿಜಯನಗರ ಇನ್‌ಸ್ಟಿಟ್ಯೂಟ್ ಆಫ್‌ ಮೆಡಿಕಲ್‌ ಸೈನ್ಸಸ್‌ (ವಿಮ್ಸ್‌) ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಮೂವರು ರೋಗಿಗಳ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದ್ದರಿಂದ ಆಸ್ಪತ್ರೆಯ ಹಳೆ ಐಸಿಯುನಲ್ಲಿದ್ದ ಮೂವರು ರೋಗಿಗಳು ವೆಂಟಿಲೇಟರ್ ಸಮಸ್ಯೆ ಉಂಟಾಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ತೀವ್ರ ಅನಾರೋಗ್ಯದಿಂದ ರೋಗಿಗಳು ಮೃತಪಟ್ಟಿದ್ದಾರೆಯೇ ಹೊರತು, ವೆಂಟಿಲೇಟರ್‌ ಸಮಸ್ಯೆಯಿಂದ ಅಲ್ಲ ಎಂದು ಆಸ್ಪತ್ರೆ ನಿರ್ದೇಶಕ ತಿಳಿಸಿದ್ದರು. ಆದರೂ, ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.

ಇದನ್ನೂ ಓದಿ | ವಿಮ್ಸ್‌ ಆಸ್ಪತ್ರೆ ಸಾವಿನ ಹೊಣೆ ಹೊರದ ಸರ್ಕಾರ: ಆಕಸ್ಮಿಕವಲ್ಲ, ಕೊಲೆ ಎಂದ ಸಿದ್ದರಾಮಯ್ಯ

Exit mobile version