Site icon Vistara News

5 ರೂಪಾಯಿ ಡಾಕ್ಟರ್‌ಗೆ ಹೃದಯಾಘಾತ

5 ರೂಪಾಯಿ ಡಾಕ್ಟರ್

ಮಂಡ್ಯ: ಮಂಡ್ಯದ ಖ್ಯಾತ ಚರ್ಮ ರೋಗ ತಜ್ಞ ಡಾ. ಶಂಕರೇಗೌಡರಿಗೆ ಹೃದಯಾಘಾತವಾಗಿದೆ. ಇವರು 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಗೊಂಡಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಇವರು ಅತಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಮೂಲಕ ಜನಾನುರಾಗಿ ವೈದ್ಯರೆಂದು ಖ್ಯಾತಿ ಪಡೆದಿದ್ದಾರೆ.

ಇದನ್ನೂ ಓದಿ: ತ್ರಿಪುರ ಹೊಸ ಮುಖ್ಯಮಂತ್ರಿ ಮಾಣಿಕ್‌ ಸಾಹಾ ಮೂಲತಃ ಹಲ್ಲಿನ ಡಾಕ್ಟರ್

Exit mobile version