ಬೆಂಗಳೂರು: ಜನವರಿ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್‌ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ (GST Collection record) ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಜಿಎಸ್ ಟಿ ತೆರಿಗೆ ಸಂಗ್ರಹ ಣೆಯಲ್ಲಿ ಕರ್ನಾಟಕ ಶೇ. 30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ ಎಂದಿದ್ದಾರೆ.
ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬೊಮ್ಮಾಯಿ ಟ್ವೀಟ್, ಮೋದಿ ರಿಟ್ವೀಟ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವಿಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
“ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ’ ಎಂದಿರುವ ಸಿಎಂ ಅವರ ಟ್ವೀಟ್ ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ‘ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ” ಎಂದಿದ್ದಾರೆ.
ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಮತ್ತು ವಂದೇ ಭಾರತ್ ರೈಲು ಸಂಚಾರವನ್ನು ಏಕಕಾಲದಲ್ಲಿ ಸೆರೆ ಹಿಡಿದಿರುವ ವಿಡಿಯೊವನ್ನು ಸಿಎಂ ಬೊಮ್ಮಾಯಿ ಅವರು ಹಂಚಿಕೊಂಡಿದ್ದರು.
ಇದನ್ನೂ ಓದಿ : Lakkundi Utsava 2023: ಹಂಪಿ ಸರ್ಕಿಟ್‌ನಲ್ಲಿ ಲಕ್ಕುಂಡಿ ಸೇರ್ಪಡೆ ಮಾಡುತ್ತೇವೆ: ಸಿಎಂ ಬೊಮ್ಮಾಯಿ