ಕರ್ನಾಟಕ
Land Auditing : ಬೆಂಗಳೂರಲ್ಲಿ 75000 ಎಕರೆ ಸರ್ಕಾರಿ ಭೂ ಒತ್ತುವರಿ; ಲ್ಯಾಂಡ್ ಆಡಿಟಿಂಗ್‌ಗೆ ಸಿಎಂ ಸೂಚನೆ
Land Auditing : ಬೆಂಗಳೂರು ಒಂದರಲ್ಲಿಯೇ ಸುಮಾರು 75 ಸಾವಿರ ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಕೂಡಲೇ ಲ್ಯಾಂಡ್ ಆಡಿಟಿಂಗ್‌ಗೆ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಂಗಳೂರು ಸುತ್ತಮುತ್ತಲು ಸುಮಾರು 75000 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ (Encroachment of government land) ಎಂಬ ಆರೋಪ ಕೇಳಿ ಬಂದಿದೆ. 5-6 ಸಾವಿರ ಎಕರೆ ತಂಗುದಾಣಗಳ ಭೂಮಿಯನ್ನು (Land of shelters) ಕಾನೂನು ಬಾಹಿರವಾಗಿ ಸ್ವಾಧೀನ (Illegal possession) ಪಡಿಸಿಕೊಳ್ಳಲಾಗಿದೆ ಎಂಬ ವಿಚಾರವನ್ನು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಲ್ಯಾಂಡ್ ಆಡಿಟಿಂಗ್ (Land Auditing) ವಿಚಾರವಾಗಿ ಕ್ರಮವಹಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ (Chief Secretary to Government) ಸಿಎಂ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಜಿ ಎಂಎಲ್‌ಸಿ ರಮೇಶ್ ಬಾಬು (Former MLC Ramesh Babu) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಸಮಸ್ಯೆಯ ತೀವ್ರತೆಯನ್ನು ಅವರು ಪತ್ರದಲ್ಲಿ ವಿವರಿಸಿದ್ದರು. ಅಲ್ಲದೆ, ಬೆಂಗಳೂರು ಮತ್ತು ಸುತ್ತಮುತ್ತ ಭೂಮಿಯ ಬೆಲೆ ಏರಿಕೆ ಆಗಿರುವುದರಿಂದ ಸ್ವಂತ ಲಾಭಕ್ಕೋಸ್ಕರ ಕೆಲವರು ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪತ್ರದಲ್ಲಿ ರಮೇಶ್ ಬಾಬು ಉಲ್ಲೇಖಿಸಿದ್ದರು. ಈಗ ಈ ಪತ್ರದ ಆಧಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕ್ರಮ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Drought in Karnataka : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ಹಾನಿ; 6 ಸಾವಿರ ಕೋಟಿಗಾಗಿ ಕೇಂದ್ರಕ್ಕೆ ಮೊರೆ
ಸೂಚನೆ ನೀಡಿ ಸಿಎಂ ಬರೆದ ಪತ್ರದಲ್ಲಿ ಏನಿದೆ?
ಬೆಂಗಳೂರು ಮತ್ತು ಸುತ್ತಮುತ್ತ ಭೂಮಿಯ ಬೆಲೆ ಬಹಳಷ್ಟು ಏರಿಕೆಯಾಗಿದೆ. ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಲಾಗುತ್ತಿದೆ. ನಗರದ ಸುತ್ತಮುತ್ತ ಒಂದು ನೂರು ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಿತವಾಗಿರುವ ರೆಸಾರ್ಟ್ ಮತ್ತು ಅತಿಥಿ ತಂಗುದಾಣಗಳು ಸಹ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿರುತ್ತವೆ.
ನಗರದ ಸುತ್ತಮುತ್ತ ಸುಮಾರು 75000 ಎಕರೆ ಭೂಮಿ ಒತ್ತುವರಿಯಾಗಿದೆ. ತಂಗುದಾಣಗಳು 5-6 ಸಾವಿರ ಎಕರೆ ಭೂಮಿ ಕಾನೂನು ಬಾಹಿರವಾಗಿ ಸ್ವಾಧೀನ ಪಡೆದಿರುವ ಮಾಹಿತಿ ಇದೆ. ಮಾಹಿತಿ ಅಂಕಿ – ಅಂಶಗಳ ಮೂಲಕ ಬಹಿರಂಗವಾಗಿರುವುದಾಗಿ ತಿಳಿಸಲಾಗಿದೆ.
ಇದನ್ನೂ ಓದಿ: Plastic Ban : ಸರ್ಕಾರಿ ಸಭೆ – ಸಮಾರಂಭ, ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬ್ಯಾನ್!
ಸಾರ್ವಜನಿಕ ಹಿತದೃಷ್ಟಿ ಹಾಗೂ ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ದೃಷ್ಟಿಯಿಂದ ತಂಗುದಾಣಗಳ ಅಕ್ರಮ ಭೂಮಿ ಸ್ವಾಧೀನ ಕುರಿತು ಲ್ಯಾಂಡ್ ಆಡಿಟಿಂಗ್ ಮಾಡಬೇಕು. ಈ ಬಗ್ಗೆ ಮಾಜಿ ಎಂಎಲ್‌ಸಿ ರಮೇಶ್ ಬಾಬು ಕೋರಿಕೆ ಸಲ್ಲಿಸಿದ್ದು, ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆಯನ್ನು ನೀಡಿದ್ದಾರೆ.
ಕಲೆ/ಸಾಹಿತ್ಯ
Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ
Yakshagana Show: ಮದರ್ ಫೌಂಡೇಶನ್ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಬೆಂಗಳೂರು: ರಾಜ್ ಭಟ್ ಜಕ್ಕೂರು ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.
ಮದರ್ ಫೌಂಡೇಶನ್ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್, ಶಶಾಂಕ್, ಶ್ರೀನಿವಾಸ್ ಪ್ರಭು, ಸುಜನ್ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.
ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್ ವಿಶ್ವನಾಥ್, ಹಾಸ್ಯ ಪಾತ್ರಗಳಲ್ಲಿ ರಮೇಶ್ ಭಂಡಾರಿ, ಸಿತಾರಾಮ ಕುಮಾರ್ ಅಭಿನಯಿಸಲಿದ್ದಾರೆ.
ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!
ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್, ರುಚಿಮತಿಯಾಗಿ ಸಂತೋಷ್ ಹಿಲಿಯಾಣ, ದೂತನಾಗಿ ಸೀತಾರಾಮ್ ಕುಮಾರ್, ಬ್ರಾಹ್ಮಣನಾಗಿ ಶ್ರೀಧರ್ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್, ಪಾಸ್ತಿಯಾಗಿ ಹರೀಶ್ ಜಪ್ತಿ, ದೃಮಿಳ ಆಗಿ ಕಾರ್ತಿಕ್ ಕಣ್ಣಿ ಬಣ್ಣ ಹಚ್ಚಲಿದ್ದಾರೆ.
ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್ ಭಂಡಾರಿ, ಪ್ರಕಾಶ್ ಕಿರಾಡಿ, ವಿಶ್ವನಾಥ್ ಹೆನ್ನಾಬೈಲ್ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್ ಹೆಗಡೆ, ಶ್ರೀಕಾಂತ್ ರಟ್ಟಾಡಿ, ನಾಗರಾಜ್ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.
ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್ ಬುಕಿಂಗ್‌ಗಾಗಿ ರಾಜ್ ಭಟ್ ಮೊ.9019776411 ಸಂಪರ್ಕಿಸಿ.
ವಿಜಯನಗರ
Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ
Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.
ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ (Foot and Mouth Disease Vaccination campaign) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಶುಪಾಲನೆ ಭಾಗವಾದ ಆಕಳು ಎತ್ತು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಆರೋಗ್ಯದ ಸಮಸ್ಯೆ ಕಂಡುಬಂದ ವೇಳೆ ತಾಲೂಕಿನ ರೈತರು ಕರೆ ಮಾಡಿದಾಗ ವೈದ್ಯಕೀಯ ತಂಡ ತಕ್ಷಣ ಭೇಟಿ ನೀಡಿ, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ
ಇದೇ ವೇಳೆ ಕೂಡ್ಲಿಗಿ ತಾಲೂಕಿನ ವೈದ್ಯರ ಸಿಬ್ಬಂದಿ, ಔಷಧಿ ಗುಣಮಟ್ಟ, ವೈದ್ಯಕೀಯ ಸೇವೆ, ಲಸಿಕೆ ವಿಧಾನ, ಆಸ್ಪತ್ರೆ ಕಟ್ಟಡಗಳ ಸ್ಥಿತಿ ಹಾಗೂ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಕಾರ್ಯ ನಿರ್ವಹಣೆ ಇತ್ಯಾದಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಹಿರಿಗುಂಬಳಗುಂಟೆ ಪಶುವೈದ್ಯಾಧಿಕಾರಿ ಡಾ. ಮಂಜುಶ್ರೀ, ಚಿರತಗುಂಡು ಪಶುವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಜಬೀಉಲ್ಲ, ಡಾ. ಲೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶಿವಮೊಗ್ಗ
Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ
Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸೊರಬ: ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ (80) ಮಂಗಳವಾರ ಬೆಳಿಗ್ಗೆ ನಿಧನರಾದರು. (Death News)
ಕೇವಲ ನಾಲ್ಕನೇ ತರಗತಿ ಓದಿ, ಸಂಸ್ಕೃತ, ಇಂಗ್ಲೀಷ್, ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದ ಅವರು ತಮ್ಮ ಇಳಿ ವಯಸ್ಸಿನಲ್ಲಿ ಮೂರು ಕೃತಿಗಳನ್ನು ರಚಿಸಿದ್ದರು.
ಕಾವ್ಯಗಳನ್ನು ರಾಗದ ಮೂಲಕ ರಚಿಸಿ ಮನ್ನಣೆ ಪಡೆದ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಭಾರತ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇವರ ವಯೋಸಹಜ ನಿಧನಕ್ಕೆ ಅಭಾಸಾಪ ಸೇರಿದಂತೆ ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ, ಕಸಾಪ, ಕಜಾಪ, ಕಸಾಸಾಂವೇ ಸಾಹಿತ್ಯ ಘಟಕಗಳು ಕಂಬನಿ ಮಿಡಿದಿವೆ.
ಕ್ರೈಂ
Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!
Vijayanagara News: ಎಮ್ಮೆಯೊಂದು ಬೆದರಿ ಗುದ್ದಿದ ಹಿನ್ನೆಲೆಯಲ್ಲಿ ಗೋಡೆ ಕಲ್ಲು ಮುರಿದು ಮಗುವಿನ ಮೇಲೆ ಬಿದ್ದು ದುರಂತ ನಡೆದಿದೆ.
ವಿಜಯನಗರ: ಮನೆಯ ಗೋಡೆ ಕಲ್ಲು ಬಿದ್ದು ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ (Vijayanagara News) ಕೂಡ್ಲಿಗಿ ತಾಲೂಕಿನ ರಾಯಪುರದಲ್ಲಿ ನಡೆದಿದೆ. ಎಮ್ಮೆಯೊಂದು ಬೆದರಿ ಗುದ್ದಿದ್ದರಿಂದ ಗೋಡೆ ಕಲ್ಲು ಮುರಿದು ಬಿದ್ದಿದೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿ ಮಲಗಿದ್ದ ಮಗು ಮೃತಪಟ್ಟಿದೆ.
ಶಾಂತಕುಮಾರ್, ಮಲ್ಲೇಶ್ವರಿ ದಂಪತಿಯ ಪುತ್ರ ತೇಜಸ್ (4) ಎಂಬಾತ ಮೃತ ಬಾಲಕ. ಮನೆ ಪಕ್ಕದಲ್ಲಿ ತೆಂಗಿನ ಮರಕ್ಕೆ ಎಮ್ಮೆಯನ್ನು ಕಟ್ಟಿ ಹಾಕಲಾಗಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಎಮ್ಮೆ ಬೆದರಿ ಚಪ್ಪಡಿ ಕಲ್ಲಿನ ಮನೆಗೆ ಡಿಕ್ಕಿ ಹೊಡೆದಿದೆ. ಕಡಪ ಕಲ್ಲಾಗಿದ್ದರಿಂದ ಗೋಡೆ ಕಲ್ಲು ಮುರಿದು ಬಿದ್ದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ.
ಸಚಿವ ಜಮೀರ್ ಅಹ್ಮದ್ ಸಾಂತ್ವನ
ಘಟನಾ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್, ಕೂಡ್ಲಿಗಿ ಶಾಸಕ ಶ್ರೀನಿವಾಸ್ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಜಮೀರ್ ಅಹ್ಮದ್ ಅವರು 2 ಲಕ್ಷ ರೂ. ವೈಯಕ್ತಿಕ ಧನ ಸಹಾಯ ಮಾಡಿದ್ದಾರೆ. ಜತೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ನೆರವು ಕೊಡಿಸುವುದಾಗಿ ತಿಳಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮದಿಂದ ಅಂಬೇಡ್ಕರ್ ಆವಾಸ್ ಯೋಜನೆಯಡಿ ಬಾಲಕನ ಕುಟುಂಬಸ್ಥರಿಗೆ ಮನೆ ಕಟ್ಟಿಕೊಡುವ ಭರವಸೆ ನೀಡಿದರು.
ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
ರಾಯಪುರ ಗಣಿ ಬಾಧಿತ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಗ್ರಾಮದಲ್ಲಿ ಸುಸಜ್ಜಿತ ಮನೆಯಿಲ್ಲದರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಸಚಿವರು ಭರವಸೆ ನೀಡಿದರು.
ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು
ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).
ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Live News17 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ7 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ24 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
South Cinema10 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕ್ರಿಕೆಟ್24 hours ago
Babar Azam: ಆಡಿ ಕಾರ್ ಓವರ್ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!
-
ಕರ್ನಾಟಕ11 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್7 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ7 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!