Site icon Vistara News

Land Auditing : ಬೆಂಗಳೂರಲ್ಲಿ 75000 ಎಕರೆ ಸರ್ಕಾರಿ ಭೂ ಒತ್ತುವರಿ; ಲ್ಯಾಂಡ್‌ ಆಡಿಟಿಂಗ್‌ಗೆ ಸಿಎಂ ಸೂಚನೆ

CM Siddaramaiah infront of vidhanasoudha

ಬೆಂಗಳೂರು: ಬೆಂಗಳೂರು ಸುತ್ತಮುತ್ತಲು ಸುಮಾರು 75000 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ (Encroachment of government land) ಎಂಬ ಆರೋಪ ಕೇಳಿ ಬಂದಿದೆ. 5-6 ಸಾವಿರ ಎಕರೆ ತಂಗುದಾಣಗಳ ಭೂಮಿಯನ್ನು (Land of shelters) ಕಾನೂನು ಬಾಹಿರವಾಗಿ ಸ್ವಾಧೀನ (Illegal possession) ಪಡಿಸಿಕೊಳ್ಳಲಾಗಿದೆ ಎಂಬ ವಿಚಾರವನ್ನು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಲ್ಯಾಂಡ್‌ ಆಡಿಟಿಂಗ್ (Land Auditing) ವಿಚಾರವಾಗಿ ಕ್ರಮವಹಿಸಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ (Chief Secretary to Government) ಸಿಎಂ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಜಿ ಎಂಎಲ್‌ಸಿ ರಮೇಶ್ ಬಾಬು (Former MLC Ramesh Babu) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಸಮಸ್ಯೆಯ ತೀವ್ರತೆಯನ್ನು ಅವರು ಪತ್ರದಲ್ಲಿ ವಿವರಿಸಿದ್ದರು. ಅಲ್ಲದೆ, ಬೆಂಗಳೂರು ಮತ್ತು ಸುತ್ತಮುತ್ತ ಭೂಮಿಯ ಬೆಲೆ ಏರಿಕೆ ಆಗಿರುವುದರಿಂದ ಸ್ವಂತ ಲಾಭಕ್ಕೋಸ್ಕರ ಕೆಲವರು ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪತ್ರದಲ್ಲಿ ರಮೇಶ್‌ ಬಾಬು ಉಲ್ಲೇಖಿಸಿದ್ದರು. ಈಗ ಈ ಪತ್ರದ ಆಧಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕ್ರಮ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ‌

ಇದನ್ನೂ ಓದಿ: Drought in Karnataka : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ಬೆಳೆ ಹಾನಿ; 6 ಸಾವಿರ ಕೋಟಿಗಾಗಿ ಕೇಂದ್ರಕ್ಕೆ ಮೊರೆ

ಸೂಚನೆ ನೀಡಿ ಸಿಎಂ ಬರೆದ ಪತ್ರದಲ್ಲಿ ಏನಿದೆ?

ಬೆಂಗಳೂರು ಮತ್ತು ಸುತ್ತಮುತ್ತ ಭೂಮಿಯ ಬೆಲೆ ಬಹಳಷ್ಟು ಏರಿಕೆಯಾಗಿದೆ. ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಲಾಗುತ್ತಿದೆ. ನಗರದ ಸುತ್ತಮುತ್ತ ಒಂದು ನೂರು ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಿತವಾಗಿರುವ ರೆಸಾರ್ಟ್ ಮತ್ತು ಅತಿಥಿ ತಂಗುದಾಣಗಳು ಸಹ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿರುತ್ತವೆ.

ನಗರದ ಸುತ್ತಮುತ್ತ ಸುಮಾರು 75000 ಎಕರೆ ಭೂಮಿ ಒತ್ತುವರಿಯಾಗಿದೆ. ತಂಗುದಾಣಗಳು 5-6 ಸಾವಿರ ಎಕರೆ ಭೂಮಿ ಕಾನೂನು ಬಾಹಿರವಾಗಿ ಸ್ವಾಧೀನ ಪಡೆದಿರುವ ಮಾಹಿತಿ ಇದೆ. ಮಾಹಿತಿ ಅಂಕಿ – ಅಂಶಗಳ ಮೂಲಕ ಬಹಿರಂಗವಾಗಿರುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: Plastic Ban : ಸರ್ಕಾರಿ ಸಭೆ – ಸಮಾರಂಭ, ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬ್ಯಾನ್!

ಸಾರ್ವಜನಿಕ ಹಿತದೃಷ್ಟಿ ಹಾಗೂ ಸರ್ಕಾರದ ಸಂಪನ್ಮೂಲ ಕ್ರೋಢೀಕರಣ ದೃಷ್ಟಿಯಿಂದ ತಂಗುದಾಣಗಳ ಅಕ್ರಮ ಭೂಮಿ ಸ್ವಾಧೀನ ಕುರಿತು ಲ್ಯಾಂಡ್ ಆಡಿಟಿಂಗ್ ಮಾಡಬೇಕು. ಈ ಬಗ್ಗೆ ಮಾಜಿ ಎಂಎಲ್‌ಸಿ ರಮೇಶ್ ಬಾಬು ಕೋರಿಕೆ ಸಲ್ಲಿಸಿದ್ದು, ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆಯನ್ನು ನೀಡಿದ್ದಾರೆ.

Exit mobile version