ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರು ಮಾರ್ಚ್ ೧ರಿಂದ ನಡೆಸಲಿರುವ ಮಹಾ ಮುಷ್ಕರ ರಾಜ್ಯದಲ್ಲಿ ಎಲ್ಲ ಸರ್ಕಾರಿ ವ್ಯವಸ್ಥೆಗಳನ್ನು ಅಲ್ಲೋಲಕಲ್ಲೋಲಗೊಳಿಸುವುದು ಖಚಿತವಾಗಿದೆ. ಶಾಲೆ, ಕಾಲೇಜು, ಆಸ್ಪತ್ರೆ, ಕಚೇರಿಗಳು ಸೇರಿದಂತೆ ಎಲ್ಲ ಸರ್ಕಾರಿ ಸಿಸ್ಟಮ್ ಸ್ಥಗಿತಗೊಳ್ಳಲಿದೆ. ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (7th Pay commission) ಅವರು ಒಂದು ಸಂದೇಶವನ್ನು ರವಾನಿಸಿದ್ದಾರೆ. ಈ ಸಂದೇಶ ಕೆಲಸ ಮಾಡುವುದೇ ಎಂದು ಕಾದು ನೋಡಬೇಕಾಗಿದೆ.
ಇತ್ತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಏಳನೇ ವೇತನ ಆಯೋಗದ ವರದಿ ಅನುಷ್ಠಾನ ಭರವಸೆಗೆ ಆಗ್ರಹಿಸಿ ಮಾರ್ಚ್ ಒಂದರಿಂದ ಸರ್ಕಾರಿ ನೌಕರರು ಮುಷ್ಕರ ನಡೆಸುವುದು ಖಚಿತ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಹೇಳಿದ್ದೇನು?
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯಲ್ಲಿ ಮಾತನಾಡಿ, 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿದೆ. ನಾವು ಕೂಡಲೇ 7 ನೇ ಆಯೋಗಕ್ಕೆ ಸೂಚನೆ ನೀಡಿ ಮಧ್ಯಂತರ ವರದಿ ಪಡೆದು ಅದರ ಅನುಷ್ಠಾನಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು. ಸಿ.ಎ.ಆರ್ ಸಿಬ್ಬಂದಿ ಬಲ ಪಡಿಸುವ ಬಗ್ಗೆ ಡಿ.ಜಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : 7th pay commission : ವದಂತಿಗಳನ್ನು ನಂಬಬೇಡಿ, ಸರ್ಕಾರಿ ಸೇವೆ ಬಂದ್ ಹೋರಾಟ ನಿಲ್ಲದು ಎಂದ ಸಿ. ಎಸ್. ಷಡಾಕ್ಷರಿ