ಕರ್ನಾಟಕ
7th pay commission : ಎಸ್ಮಾ ಹೇರಿದರೂ ಹೆದರಲ್ಲ, ಹೋರಾಟ ನಿಲ್ಲಲ್ಲ ಎಂದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ
7ನೇ ವೇತನ ಆಯೋಗದ (7th pay commission) ಶಿಫಾರಸು ಮತ್ತು ಒಪಿಎಸ್ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಮಾ.1 ರಿಂದ ನಡೆಸಲುದ್ದೇಶಿಸಿರುವ ಪ್ರತಿಭಟನೆ ನಿಲ್ಲದು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : ನಮ್ಮ ಎರಡು ಬೇಡಿಕೆಗಳನ್ನೂ (7th pay commission) ಈಡೇರಿಸುವವರೆಗೂ ನಮ್ಮ ಮುಷ್ಕರ ನಿಲ್ಲದು, ಸರ್ಕಾರ ಹೋರಾಟ ಹತ್ತಿಕ್ಕಲು ʻಎಸ್ಮಾ ʼ ಕಾಯ್ದೆ ಜಾರಿಗೆ ತಂದರೂ ಹೆದರುವುದಿಲ್ಲ. ನಾವು ಜೈಲಿಗೆ ಹೋಗಲೂ ಸಿದ್ಧವಾಗಿಯೇ ಈ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಂಗಳವಾರ ಮತ್ತೆ ಗುಡುಗಿದ್ದಾರೆ.
ಮಾತುಕತೆಗೆ ಕರೆಯುವುದು, ಭರವಸೆ ನೀಡುವುದು, ಲಿಖಿತ ಪತ್ರ ನೀಡುವುದು ಬೇಡ. ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಬೇಕು ಅಲ್ಲಿಯವರೆಗೂ ಹೋರಾಟ ನಡೆಸುತ್ತೇವೆ. ಮೊದಲಿಗೆ ಒಂದು ವಾರ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲಾಗುವುದು, ನಂತರ ಸಂಘ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ತೀರ್ಮಾನಿಸಲಿದೆ. ಆದರೆ ಸರ್ಕಾರ ಎರಡೂ ಭರವಸೆಗಳನ್ನು ಈಡೇರಿಸುವವರೆಗೆ ನಮ್ಮ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.
ಕಳೆದ 22 ವರ್ಷಗಳಿಂದ ಸರ್ಕಾರಿ ನೌಕರರು ಈ ರೀತಿಯ ಹೋರಾಟಕ್ಕೆ ಮುಂದಾಗಿರಲಿಲ್ಲ. ಆದರೆ ಅನಿವಾರ್ಯವಾಗಿ ಈಗ ನಮ್ಮ ಜೀವನಕ್ಕಾಗಿ ಈ ಹೋರಾಟ ನಡೆಸಬೇಕಾಗಿದೆ. ಇದನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿ, ಯಾವುದೇ ತೀರ್ಮಾನ ತೆಗೆದುಕೊಂಡರೂ ಹೆದರುವುದಿಲ್ಲ. ನಾನು ಮಾತ್ರವಲ್ಲ, ಹತ್ತು ಲಕ್ಷ ಸರ್ಕಾರಿ ನೌಕರರೂ ಜೈಲಿಗೆ ಹೋಗಲು ಸಿದ್ಧರಾಗಿಯೇ ಈ ಹೋರಾಟಕ್ಕಿಳಿದಿದ್ದೇವೆ. ಎಸ್ಮಾ ಜಾರಿಗೆ ತಂದಿದ್ದ ತಮಿಳುನಾಡಿನ ಜಯಲಲಿತಾ ಸರ್ಕಾರದ ಕತೆ ಏನಾಗಿತ್ತು ಎಂಬುದನ್ನು ಸರ್ಕಾರ ನೆನಪಿಸಿಕೊಳ್ಳಲಿ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ಬಜೆಟ್‌ನಲ್ಲಿ ಎಲ್ಲಿದೆ ತೋರಿಸಿ…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಎಸ್. ಷಡಾಕ್ಷರಿ, ಬಜೆಟ್‌ನಲ್ಲಿ ಎಲ್ಲಿ ಇದಕ್ಕಾಗಿ ಹಣ ತೆಗೆದಿರಿಸಲಾಗಿದೆ ಎಂದು ತಿಳಿಸಲಾಗಿದೆ ಎಂಬುದನ್ನು ತೋರಿಸಿ ಎಂದು ಸವಾಲೊಡ್ಡಿದರು.
ಕಳೆದ ಎಂಟು ತಿಂಗಳಿನಿಂದ ನಾವು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಲೇ ಬಂದಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳ ಬಗ್ಗೆ ಉದಾಸೀನತೆ ತೋರುತ್ತಾ ಬಂದಿದೆ. ನಾವು ಸರ್ಕಾರವನ್ನು ಟೀಕಿಸುವುದಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಮನವಿ ಮಾಡಿಕೊಳ್ಳುತ್ತೇವೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸದೇ ಇರುವುದರಿಂದ ಅನಿವಾರ್ಯವಾಗಿ ಈ ಹೋರಾಟಕ್ಕಿಳಿದಿದ್ದೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ
ಎರಡೂ ಬೇಡಿಕೆ ಈಡೇರಬೇಕು
ನಾವು ಸರ್ಕಾರದ ಮುಂದೆ ಪ್ರಮುಖವಾಗಿ ಎರಡು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ಆರಂಭಿಸುತ್ತಿದ್ದೇವೆ. ಇವುಗಳನ್ನು ಈಡೇರಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಸಂಘ ಸಭೆ ನಡೆಸಿ ಮುಂದೇನು ಎಂಬುದರ ಕುರಿತು ತೀರ್ಮಾನಿಸುತ್ತದೆ. ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ. ಒಂದು ವೇಳೆ ಸರ್ಕಾರ ವೇತನ ಹೆಚ್ಚಳದ ಕುರಿತು ಮಾತ್ರ ತೀರ್ಮಾನ ತೆಗೆದುಕೊಂಡರೆ ಹೋರಾಟದಿಂದ ಹಿಂದೆ ಸರಿಯುತ್ತೇವೆಂದೇನೂ ಇಲ್ಲ. ಎನ್‌ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೆ ತರಬೇಕೆಂಬುದು ಕೂಡ ನಮ್ಮ ಪ್ರಬಲ ಬೇಡಿಕೆಯಾಗಿದ್ದು, ಇದನ್ನೂ ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸುತ್ತೇವೆ ಎಂದರು.
ಒಂದು ವೇಳೆ ಈ ಹೋರಾಟದ ಸಂದರ್ಭದಲ್ಲಿ ಸರ್ಕಾರ ಎನ್‌ಪಿಎಸ್ ರದ್ದಿಗೆ ಮುಂದಾಗದಿದ್ದಲ್ಲಿ, ಆಗ ಮುಂದೇನು ಎಂಬುದರ ಕುರಿತು ಸಂಘದ ಪದಾಧಿಕಾರಿಗಳೆಲ್ಲರೂ ಸಭೆ ನಡೆಸಿ ತೀರ್ಮಾನಿಸುತ್ತೇವೆ. ಸದ್ಯದ ನಮ್ಮ ಬೇಡಿಕೆ ನಮ್ಮ ಎರಡೂ ಬೇಡಿಕೆಗಳನ್ನು ಈಡೇರಿಸಬೇಕೆಂದಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹೋರಾಟಕ್ಕೆ ಬೆಂಬಲ ನೀಡಿ
ಕಳೆದ ಎಂಟು ತಿಂಗಳಿನಿಂದ ನಾವು ಮನವಿ ಮಾಡಿದರೂ ಸರ್ಕಾರ ನಮ್ಮ ಬೇಡಿಕೆಗಳ ಈಡೇರಿಸುವತ್ತ ಗಮನ ನೀಡದೇ ಇದ್ದುದ್ದರಿಂದ ಅನಿವಾರ್ಯವಾಗಿ ಸೇವೆ ಬಹಿಷ್ಕರಿಸುವ ಈ ಹೋರಾಟವನ್ನು ನಾವು ಕೈಗೆತ್ತಿಕೊಂಡಿದ್ದೇವೆ. ಇದರಿಂದ ಶಾಲಾ-ಕಾಲೇಜುಗಳಲ್ಲಿ ಪರೀಕ್ಷೆ ನಡೆಯದೇ ಇರಬಹುದು, ಕುಡಿಯುವ ನೀರು, ಕಸ ವಿಲೇವಾರಿ ಹೀಗೆ ಅನೇಕ ಸಮಸ್ಯೆಗಳು ಸೃಷ್ಟಿಯಾಗಬಹುದು. ಇದಕ್ಕಾಗಿ ನಾವು ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸುತ್ತೇವೆ ಜತೆಗೆ ಸಾರ್ವಜನಿಕರೆಲ್ಲರೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿ, ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ಸಿ. ಎಸ್. ಷಡಾಕ್ಷರಿ ಹೇಳಿದ್ದಾರೆ.
ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ಆದಷ್ಟು ಬೇಗ ತೀರ್ಮಾನ ತೆಗೆದುಕೊಂಡರೆ ಸಾರ್ವಜನಿಕರಿಗೆ ತೊಂದರೆಯಾಗುವುದೂ ತಪ್ಪುತ್ತದೆ ಎಂದು ಹೇಳಿದ ಅವರು, ಚುನಾವಣೆ ಮತ್ತು ಪರಿಕ್ಷೆಯ ಈ ಹೊತ್ತನ್ನು ನಾವು ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ. ಬಜೆಟ್‌ನಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ಪ್ರಸ್ತಾಪ ಇಲ್ಲದೇ ಇದ್ದುದ್ದರಿಂದ ಈ ಹೋರಾಟವನ್ನು ಈಗ ಕೈಗೆತ್ತಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಬುಧವಾರದಿಂದ ಯಾವ ಸರ್ಕಾರಿ ನೌಕರರೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಒಂದು ವೇಳೆ ಯಾರಾದರೂ ಕರ್ತವ್ಯಕ್ಕೆ ಹಾಜರಾಗಲು ಮುಂದಾದರೆ ಅವರ ಮನವೊಲಿಸಿ, ಈ ಮುಷ್ಕರವನ್ನು ಯಶಸ್ವಿಗೊಳಿಸಲಾಗುವುದು. ಇದಕ್ಕಾಗಿ ಸಂಘದ ವತಿಯಿಂದ ವಿಜೆಲೆನ್ಸ್ ಟೀಮ್ ಸಿದ್ಧಪಡಿಸಲಾಗಿದ್ದು, ಅವರು ಈ ಮುಷ್ಕರವು ಸಂಪೂರ್ಣ ಯಶಸ್ವಿಯಾಗುವಂತೆ ನೋಡಿಕೊಳ್ಳಲಿದ್ದಾರೆ ಎಂದು ಸಿ. ಎಸ್. ಷಡಾಕ್ಷರಿ ವಿವರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿವಿಧ ಸರ್ಕಾರಿ ನೌಕರರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತಿರಿದ್ದು, ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.
ಇದನ್ನೂ ಓದಿ : 7th pay commission : ವದಂತಿಗಳನ್ನು ನಂಬಬೇಡಿ, ಸರ್ಕಾರಿ ಸೇವೆ ಬಂದ್ ಹೋರಾಟ ನಿಲ್ಲದು ಎಂದ ಸಿ. ಎಸ್. ಷಡಾಕ್ಷರಿ
ಕರ್ನಾಟಕ
Bangalore rain : ಮನೆ ಮುಂದೆ ವಾಕ್ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ
Bangalore rain: ಬೆಂಗಳೂರಿನಲ್ಲಿ ಸಂಭವಿಸಿದ ಮಳೆ ದುರಂತದಲ್ಲಿ ತಾಯಿ ಮೃತಪಟ್ಟು, ಪುಟ್ಟ ಕಂದಮ್ಮ ಗಾಯಗೊಂಡಿದ್ದಾಳೆ. ಮರ ಬಿದ್ದು ಈ ದುರಂತ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ (Bangalore rain) ಮರವೊಂದು ಧರೆಗುರುಳಿ (Tree Falls on mother and daughter) ವಾಕ್ ಮಾಡುತ್ತಿದ್ದ ತಾಯಿ ಮತ್ತು ಮಗುವನ್ನು ಗಾಯಗೊಳಿಸಿದೆ. ತಾಯಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆ (Mothrer dead at Hospital), ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್ ಗಾರ್ಡನ್ (Wilson garden) ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್ ಕಂಬವೂ ಅವರ ಮೇಲೆ ಬಿದ್ದಿದೆ.
ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ಸಾವು
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರಾಗಿದ್ದು, ಮೃತರಾದವರ ಗುರುತು ಪತ್ತೆಯಾಗಿಲ್ಲ.
ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ಕಡೆಗೆ ಬರುವ ರಸ್ತೆಗೆ ನುಗ್ಗಿ ಸ್ಯಾಂಟ್ರೋ ಕಾರು ಮತ್ತು ಇತರ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೋ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಅವರು ಆಸ್ಪತ್ರೆಗೆ ಸಾಗಿಸುವ ಪ್ರಾಣ ಕಳೆದುಕೊಂಡರು.
ಸಂಜೆ ಸುಮಾರು 5.30ರ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಮೃತರು ಹಾಸನ ಮೂಲದವರೆಂದು ಹೇಳಲಾಗುತ್ತಿದೆ. ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೂ ಹಾನಿಯಾಗಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ತುಂಬಾ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು.
ಕರ್ನಾಟಕ
VISTARA TOP 10 NEWS: ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ಎಐಎಡಿಎಂಕೆ-ಬಿಜೆಪಿ ಮೈತ್ರಿಯೂ ಬಂದ್
VISTARA TOP 10 NEWS : ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಬಂದ್! ಇನ್ನು ಪ್ರಧಾನಿ ಮೋದಿ ಅವರು ಅ. 1ರಂದು ಎಲ್ಲರೂ ಸೇರಿ ಕಸ ಗುಡಿಸೋಣ ಅಂದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್.
1. ಕಾವೇರಿ ಕಿಚ್ಚು: ರಾಜ್ಯಕ್ಕೆ ಡಬಲ್ ಬಂದ್ ಶಾಕ್; ನಾಳೆ ಬೆಂಗಳೂರು, ಸೆ. 29 ಕರ್ನಾಟಕ ಬಂದ್
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಸೆ. 26ರ ಬೆಂಗಳೂರು ಬಂದ್ ಬೆನ್ನಿಗೇ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೆ. 29ರಂದು ಅಖಿಲ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಹೀಗಾಗಿ ವಾರದಲ್ಲಿ ಎರಡು ಬಂದ್ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
2. ನಾಳೆ ಬೆಂಗಳೂರು ಬಂದ್: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ; ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಹಾಗಿದ್ದರೆ ಏನಿರುತ್ತೆ? ಏನಿರಲ್ಲ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1: ಬಲವಂತದಿಂದ ಬಂದ್ ಮಾಡಿಸುವಂತಿಲ್ಲ; ಮೆರವಣಿಗೆಗೆ ಅವಕಾಶವಿಲ್ಲ ಎಂದ ಕಮಿಷನರ್
ಪೂರಕ ಸುದ್ದಿ2: ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್‌ವೈ
ಪೂರಕ ಸುದ್ದಿ3: ಯಾವ ಬಂದ್‌ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
3 .ಜಲಶಕ್ತಿ ಇಲಾಖೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಲಿ, ಮೋದಿ ಮಧ್ಯಪ್ರವೇಶಿಸಲಿ: ದೇವೇಗೌಡ
ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್‌ನಿಂದ ರಾಜಕೀಯ: ಸಿದ್ದರಾಮಯ್ಯ ಆರೋಪ
4. ಏಕಕಾಲಕ್ಕೆ ರಾಜ್ಯಾದ್ಯಂತ ದಾಖಲೆ ಬರೆದ ಜನತಾ ದರ್ಶನ: ಸಿದ್ದರಾಮಯ್ಯ ಚಿಂತನೆ ಕ್ಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಏಷ್ಯನ್ ಗೇಮ್ಸ್: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ; ಲಂಕಾ ವಿರುದ್ಧ ರೋಚಕ ಜಯ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪ್ರಯತ್ನದಲ್ಲೇ ಐತಿಹಾಸಿಕ ಚಿನ್ನದ ಪದಕ ಜಯಿಸಿ ಮರೆದಾಡಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಲಂಕಾ ವಿರುದ್ಧ ರೋಚಕ 19 ರನ್ಗಳ ಗೆಲುವು ಸಾಧಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ: ಎಲ್ಲರೂ ಬನ್ನಿ ಎಂದು ಆಹ್ವಾನಿಸಿದ ಪ್ರಧಾನಿ ಮೋದಿ
ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಂದು ಒಂದು ಗಂಟೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಎಲ್ಲ ಗ್ಯಾರಂಟಿಗಳಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ
7. ಭಾರತ ವಿಭಜಿಸಿ ಹಲವು ದೇಶ ಸೃಷ್ಟಿಸುವುದು ಖಲಿಸ್ತಾನಿ ಉಗ್ರ ಪನ್ನುನ್ ಗುರಿ; ಷಡ್ಯಂತ್ರ ಬಯಲು
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ತಿಗಳನ್ನು ಎನ್‌ಐಎ ಜಪ್ತಿ ಮಾಡಿದ ಬೆನ್ನಲ್ಲೇ ಉಗ್ರನ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ಭಾರತವನ್ನು ವಿಭಜಿಸಿ, ಹಲವು ದೇಶಗಳನ್ನಾಗಿ ಸೃಷ್ಟಿಸುವುದು ಗುರುಪತ್ವಂತ್ ಸಿಂಗ್ ಪನ್ನುನ್ ಗುರಿಯಾಗಿದೆ” ಎನ್ನುವುದೇ ಆ ಮಾಹಿತಿ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಬಿಜೆಪಿ ಜತೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. 9 ತಿಂಗಳೊಳಗೆ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್; ಜವಾನ್ ಹೊಸ ದಾಖಲೆ
ಶಾರುಖ್ ಖಾನ್ ಪ್ರಧಾನ ಪಾತ್ರದಲ್ಲಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection).ಪಠಾಣ್ ಸಿನಿಮಾವೂ 1000 ಕೋಟಿ ದಾಟಿತ್ತು. ಹೀಗಾಗಿ ಒಂಬತ್ತು ತಿಂಗಳ ಅವಧಿಯಲ್ಲಿ ಶಾರುಖ್ 2000 ಕೋಟಿ ಕೊಳ್ಳೆ ಹೊಡೆದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ದೇಶಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿ(Ganesh Chaturthi) ಹಬ್ಬವನ್ನು ಹ್ಯಾವಲ್ಸ್ ಕಂಪೆನಿ(Havells) ಕ್ರಿಯಾತ್ಮಕವಾಗಿ ಬರಮಾಡಿಕೊಂಡಿದೆ. 100 ಫ್ಯಾನ್‌ಗಳನ್ನು ಬಳಸಿಕೊಂಡು ಗಣೇಶನನ್ನು ರಚಿಸಿ ಗಮನ ಸೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ತುಮಕೂರು
Tumkur News: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಪಾವಗಡದಲ್ಲಿ ಪ್ರತಿಭಟನೆ
Tumkur News: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಪಾವಗಡ ತಾಲೂಕು ಸಮಿತಿ ವತಿಯಿಂದ ಪಾವಗಡದ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪಾವಗಡ: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ (Building Construction Labors) ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಪಾವಗಡ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ (Protest) ನಡೆಸಲಾಯಿತು.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನಾ ಮೆರವಣಿಗೆ ಮೂಲಕ ಕೆಬಿ ಕಚೇರಿ ಮುಂಭಾಗದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಾರ್ಮಿಕ ಇಲಾಖೆ ಅಧಿಕಾರಿ ರವೋಫ್ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪಾವಗಡ ಸಿ.ಐ.ಟಿ.ಯು. ತಾಲೂಕು ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಕಾನೂನು ಪ್ರಕಾರ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ. 2022-23ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಈವರೆಗೂ ಸಹಾಯಧನ ಬಿಡುಗಡೆ ಮಾಡಿಲ್ಲ.
ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ
2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ, ಅರ್ಧ ವರ್ಷ ಕಳೆಯುತ್ತಿದ್ದರೂ ಈವರೆಗೂ ಸಹಾಯಧನಕ್ಕಾಗಿ ಅರ್ಜಿಯನ್ನೇ ಆಹ್ವಾನಿಸಿಲ್ಲ. ಹಾಗೆಯೇ 2021-22ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು ಒಂದೂವರೆ ಲಕ್ಷ ಜನ ಕಾರ್ಮಿಕರಿಗೆ ಸಹಾಯಧನ ಕೊಡದೇ, ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವಾ ಷರತ್ತುಗಳ ಕಾಯ್ದೆ – 1996 ರ ನಿಯಮ 45ರ ಅಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಇಬ್ಬರು ಮಕ್ಕಳಿಗೆ ‘ಕಲಿಕಾ ಭಾಗ್ಯ’ ಯೋಜನೆಯಡಿ ಶೈಕ್ಷಣಿಕ ಸಹಾಯಧನ ನೀಡಬೇಕೆಂದು ಕಾನೂನು ಹೇಳುತ್ತದೆ. ನೋಂದಾಯಿತ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆದರೆ ಇದೀಗ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಲು ‘ಹಣದ ಕೊರತೆ ಇದೆ’ ಎಂದು ಹೇಳಲಾಗುತ್ತಿದೆ ಎಂದು ದೂರಿದರು.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಪದಾಧಿಕಾರಿಗಳಾದ ರಾಮಾಂಜಿನಪ್ಪ, ಮಮತ, ನಾಗರಾಜ್ ಹಾಗೂ ದುರ್ಗಪ್ಪ, ಶಿವಗಂಗಮ್ಮ, ಕೆಂಚಮ್ಮ, ನವಿನ್ ಕುಮಾರ್, ಜಬಿವುಲ್ಲಾ, ಈಶ್ವರಪ್ಪ, ಚಾಂದ್ ಬಾಷ, ಮಲೇಶಪ್ಪ, ಕಾಮಕ್ಕ, ಹನಮಂತರಾಯಪ್ಪ, ಕಮಲಮ್ಮ, ದೇವಿ, ನಂಜಪ್ಪ ಹಾಗೂ ಇತರರು ಪಾಲ್ಗೊಂಡಿದ್ದರು.
ಉತ್ತರ ಕನ್ನಡ
Uttara Kannada News: ಮಠಕ್ಕೆ ಗುರು ಎಷ್ಟು ಮುಖ್ಯವೋ ಸಮಾಜಕ್ಕೆ ಗುರಿಕ್ಕಾರರು ಅಷ್ಟೇ ಮುಖ್ಯ: ಶ್ರೀರಾಘವೇಶ್ವರಭಾರತೀ ಸ್ವಾಮೀಜಿ
Uttara Kannada News: ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಚಾತುರ್ಮಾಸ್ಯ ಅಂಗವಾಗಿ ಗುರಿಕ್ಕಾರರ ಬೃಹತ್ ಸಮಾವೇಶ ಜರುಗಿತು.
ಗೋಕರ್ಣ: ಮಠದಲ್ಲಿ ಗುರುಗಳು ಹೇಗೆ ಮುಖ್ಯವೋ ಸಮಾಜದಲ್ಲಿ ಗುರಿಕ್ಕಾರರು ಅಷ್ಟೇ ಮುಖ್ಯ. ಗುರಿಕ್ಕಾರರು ಇಡೀ ಸಮಾಜ (Society) ವ್ಯವಸ್ಥೆಯ ಬೆನ್ನೆಲುಬು (Backbone) ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ತಿಳಿಸಿದರು.
ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಚಾತುರ್ಮಾಸ್ಯ ಅಂಗವಾಗಿ ಆಯೋಜಿಸಿದ್ದ ಗುರಿಕ್ಕಾರರ ಬೃಹತ್ ಸಮಾವೇಶದಲ್ಲಿ ಶ್ರೀಸಂದೇಶ ನೀಡಿದ ಶ್ರೀಗಳು, “ರಾಮನಿಗೆ ಮುಖ್ಯಪ್ರಾಣನ ಸೇವೆ ಹೇಗೆ ಸಂದಿದೆಯೋ ಗುರಿಕ್ಕಾರರು ಸಮಾಜಕ್ಕೆ ಅಂಥ ಸೇವೆ ಸಲ್ಲಿಸಬೇಕು. ಆ ಸ್ಥಾನ ನೀಡುವ ಗೌರವ ದೊಡ್ಡದು. ಗುರಿಕ್ಕಾರ ಗೌರವದ ಜತೆಗೆ ಹಲವು ಜವಾಬ್ದಾರಿಗಳೂ ಹೆಗಲಿಗೇರುತ್ತವೆ” ಎಂದು ಕಿವಿಮಾತು ಹೇಳಿದರು.
ಸಮಾಜದಲ್ಲಿ ನಿಮಗಿಂತ ಶ್ರೀಮಂತರು ಅಥವಾ ಪ್ರಭಾವಿಗಳು ಇರಬಹುದು. ಆದರೆ ಸಮಾಜದಲ್ಲಿ ಗುರುಪೀಠ ಮಾತ್ರ ನಿಮಗಿಂತ ದೊಡ್ಡದು. ಇಡೀ ಸಮಾಜದ ಭಾವ ಗಮನಿಸಿ ಗುರುಪೀಠ ನಿಮ್ಮನ್ನು ನೇಮಕ ಮಾಡಿದೆ. ಇಡೀ ಪೀಠದ ಶಕ್ತಿ ನಿಮ್ಮ ಹಿಂದಿರುತ್ತದೆ. ಸಮಾಜಸೇವೆಗಾಗಿ ಆತ್ಮವಿಶ್ವಾಸದಿಂದ ಮುನ್ನುಗ್ಗಿ ಎಂದು ಕರೆ ನೀಡಿದರು.
ಸಮಾಜ ನೀಡುವ ಗೌರವಕ್ಕೆ ತಕ್ಕಂತೆ ನೀವು ಕೂಡಾ ಜವಾಬ್ದಾರಿಯುತವಾಗಿ ಕೆಲಸ ಮಾಡಿ, ಆ ಗೌರವ ಉಳಿಸಿಕೊಳ್ಳಬೇಕು. ಗುರುಗಳ, ಶ್ರೀರಾಮನ, ಸಮಾಜದ ಪ್ರತಿನಿಧಿಗಳು ನೀವು. ಇಡೀ ಶಿಷ್ಯಸಮಾಜದ ಅಭಿವ್ಯಕ್ತಿ ನೀವು. ಸಮಾಜದ ಎಲ್ಲರನ್ನೂ ಮಮತೆಯಿಂದ ಕಾಣಬೇಕು, ಕಾಳಜಿ ವಹಿಸಬೇಕು. ದಾರಿ ತಪ್ಪಿದರೆ ಎಚ್ಚರಿಸಿ ಅವರನ್ನು ಸರಿದಾರಿಗೆ ತರುವ ಕರ್ತವ್ಯ ನಿಮ್ಮದು ಎಂದು ಸೂಚಿಸಿದರು.
ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ
ಸಂಘಟನೆಯನ್ನು ತಳಮಟ್ಟದಿಂದ ಬೆಳೆಸುವಲ್ಲಿ ನಿಮ್ಮ ಪಾತ್ರ ಅತ್ಯಂತ ದೊಡ್ಡದು. ಭಾವ ರಾಮಾಯಣದ ಮೂಲಕ ಗುರುಭಾವವನ್ನು ಪ್ರತಿಯೊಬ್ಬ ಶಿಷ್ಯರ ಮನೆಗೆ ತಲುಪಿಸುವ ರಾಯಭಾರಿಗಳು ನೀವು. ಸಮಾಜವನ್ನು ಸನ್ಮಾರ್ಗಕ್ಕೆ ಒಯ್ಯುವ ದೊಡ್ಡ ಅಭಿಯಾನ ನಿಮ್ಮಿಂದ ಆಗುತ್ತಿದೆ. ಇದು ಜ್ಞಾನ ಜಾಗರಣ. ನೀವು ಸಮಾಜದ ನೇತಾರರಾಗಿ ನಿಂತು ಬೇರು ಮಟ್ಟದಲ್ಲಿ ಸಂಘಟನೆಯನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.
ಶ್ರೀರಾಮ ತನ್ನ ಸೇವೆ ಮಾಡಿದ ಕಪಿಸೇನೆಯನ್ನು ಕಾಪಾಡಿದಂತೆ ಶ್ರೀಸಂಸ್ಥಾನದವರ ಸಾಕ್ಷಾತ್ ಪ್ರತಿನಿಧಿಗಳಾದ ನಿಮ್ಮನ್ನು ಶ್ರೀಪೀಠ ರಕ್ಷಿಸುತ್ತದೆ. ಯಾವ ಪ್ರತಿಫಲಾಪೇಕ್ಷೆಯೂ ಇಲ್ಲದೇ ನೀವು ಸಲ್ಲಿಸುತ್ತಿರುವ ಸೇವೆ ಅಮೂಲ್ಯ. ನಮ್ಮ ಸಂಘಟನೆ, ಶಿಸ್ತು, ಬದ್ಧತೆ, ಇಡೀ ಜಗತ್ತಿಗೆ ಮಾದರಿ. ಇದನ್ನು ಮತ್ತಷ್ಟು ಬಲಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀಮಠದ ಧರ್ಮಕರ್ಮ ವಿಭಾಗ ಸಿದ್ಧಪಡಿಸಿ, ಭಾರತಿ ಪ್ರಕಾಶನ ಹೊರತಂದ ಗುರಿಕ್ಕಾರರ ಗುರುಮಾರ್ಗ ಕೈಪಿಡಿಯನ್ನು ಶ್ರೀಗಳು ಲೋಕಾರ್ಪಣೆ ಮಾಡಿದರು.
ಇದನ್ನೂ ಓದಿ: Ganesh Chaturthi: 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ಮುಳ್ಳೇರಿಯಾ ಮಂಡಲ ಪ್ರಧಾನ ಗುರಿಕ್ಕಾರ ಎಂ.ಜಿ.ಸತ್ಯನಾರಾಯಣ ಅವರು ಕೃತಿ ಬಗ್ಗೆ ಮಾತನಾಡಿದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಹವ್ಯಕ ಮಹಾಮಂಡಲದ ನಿಕಟಪೂರ್ವ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮೂಲೆ, ಮಂಡಲ ಪ್ರಧಾನ ಗುರಿಕ್ಕಾರರಾದ ಉದಯ ಕುಮಾರ್ ಖಂಡಿಗ, ಲಕ್ಷ್ಮೀನಾರಾಯಣ ಕೌಲಕೈ, ಸುಬ್ರಹ್ಮಣ್ಯ ಚಿಪ್ಲಿ, ಕೆ.ಎಸ್.ಮಂಜುನಾಥ ಭಟ್ಟ ಕೌಲಮನೆ, ಶಂಭು ಎಸ್.ಭಟ್ ಕಡತೋಕ, ಬಾಲ್ಯ ಶಂಕರನಾರಾಯಣ ಭಟ್, ಪ್ರಕಾಶ ಮಳಲಗದ್ದೆ, ಜೆಡ್ಡು ರಾಮಚಂದ್ರ ಭಟ್, ಮಹಾಮಂಡಲದ ಪ್ರಾಂತ ಉಪಾಧ್ಯಕ್ಷ ಜಿ.ಎಸ್.ಹೆಗಡೆ, ಪದಾಧಿಕಾರಿಗಳಾದ ಹೇರಂಬ ಶಾಸ್ತ್ರಿ, ಗಣೇಶ್ ಜೋಶಿ, ಕೇಶವಪ್ರಕಾಶ್ ಎಂ, ಗೀತಾ ಮಂಜಪ್ಪ ಮತ್ತಿತರರು ವೇದಿಕೆಯಲ್ಲಿದ್ದರು.
ಶ್ರೀಮಠದ ಇತಿಹಾಸ, ಪರಂಪರೆ ಮಹತ್ವ ಹಾಗೂ ಗುರಿಕ್ಕಾರರ ಕರ್ತವ್ಯಗಳ ಬಗ್ಗೆ ವಿದ್ವಾನ್ ಸತ್ಯನಾರಾಯಣ ಶರ್ಮಾ ಮಾತನಾಡಿದರು. ಗುರಿಕ್ಕಾರರ ಸಮಾವೇಶದ ಅಂಗವಾಗಿ ಡಾ.ಗೌತಮ್ ಅವರಿಂದ ದಾನ ಧಾರಾ ಪ್ರಸ್ತುತಿ ನಡೆಯಿತು. ಶ್ರೀಸಂಸ್ಥಾನದವರು ಅನುಗ್ರಹಿಸುವ ಭಾವರಾಮಾಯಣದ ಎಂಟನೇ ಸಂಚಿಕೆಯನ್ನು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ.ಜಿ.ಎಲ್.ಹೆಗಡೆ ಲೋಕಾರ್ಪಣೆ ಮಾಡಿದರು. ಆರ್.ಎಸ್.ಹೆಗಡೆಯವರ ಆಯತನ ಕೃತಿಯ ಎರಡನೇ ಭಾಗವನ್ನು ಇದೇ ಸಂದರ್ಭದಲ್ಲಿ ಶ್ರೀಗಳು ಲೋಕಾರ್ಪಣೆ ಮಾಡಿದರು.
ಇದನ್ನೂ ಓದಿ: Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚು ಮಂದಿ ಗುರಿಕ್ಕಾರರು, ಶ್ರೀಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು. ಗುರಿಕ್ಕಾರರ ಯೋಗಕ್ಷೇಮವನ್ನು ಪ್ರಾರ್ಥಿಸಿ ಪರಮೇಶ್ವರ ಮಾರ್ಕಂಡೆ ನೇತೃತ್ವದಲ್ಲಿ ನವಗ್ರಹ ಹವನ, ಆಂಜನೇಯ ಹವನ ನಡೆಯಿತು. ಶ್ರೀಮಠದ ಧರ್ಮಕರ್ಮ ವಿಭಾಗದ ಸಂಯೋಜಕ ಕೇಶವ ಪ್ರಸಾದ್ ಕೂಟೇಲು, ಚಾತುರ್ಮಾಸ ಸಮಿತಿ ಅಧ್ಯಕ್ಷ ಯು.ಎಸ್.ಜಿ.ಭಟ್, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಕಾರ್ಯಾಲಯ ಕಾರ್ಯದರ್ಶಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ್ ಉಪಸ್ಥಿರಿದ್ದರು.
-
ವಿದೇಶ15 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಸುವಚನ24 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ13 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ8 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಅಂಕಣ15 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ಕರ್ನಾಟಕ8 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
ದೇಶ13 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
South Cinema11 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ