ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರ ಅಳವಡಿಕೆ: ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು, ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆಗಳನ್ನು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು (Dialysis Service) ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ. ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಲ್ಲೇಶ್ವರಂ ಕೆ .ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಶನಿವಾರ ಉದ್ಘಾಟಿಸಿದ ಮಾತನಾಡಿದ ಅವರು, ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದರು.

ಇದನ್ನೂ ಓದಿ | BJP Karnataka : ಲೋಕಸಭಾ ಪ್ರಚಾರಕ್ಕೆ ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ ರೆಡಿ, ಕಾರ್ಯಕಾರಿಣಿ ಒಪ್ಪಿಗೆ

ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೂ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದರು.

ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ

ಏಕಬಳಕೆ ಮಾಡುವ ಡಯಾಲೈಸರ್‌ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿವೆ. ರಾಜ್ಯ ಸರ್ಕಾರ ಶೇ.60 ರಷ್ಟು ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ. ಶಕ್ತಿ ಯೋಜನೆಯಡಿ 141 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದರು.

5 ಗ್ಯಾರಂಟಿ ಅನುಷ್ಠಾನ

  1. 18 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ, ಪ್ರತಿ ತಿಂಗಳು 5 ಕೆಜಿ ಅಕ್ಕಿಗೆ 170 ರೂ., 200 ಯೂನಿಟ್‌ವರೆಗೆ ಉಚಿತ ವಿದ್ಯುತ್, ನಿರುದ್ಯೋಗಿ ಯುವಕರಿಗೆ ಯುವನಿಧಿ ಕಾರ್ಯಕ್ರಮ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.

150 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದರು.

ಇದನ್ನೂ ಓದಿ | Union Budget 2024:‌ ಕೇಂದ್ರ ಬಜೆಟ್‌; ತೆರಿಗೆದಾರರಿಗೆ ಗುಡ್‌ನ್ಯೂಸ್‌? ಏನೇನಿದೆ ನಿರೀಕ್ಷೆ?

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪರಿಷತ್ ಚುನಾವಣೆ ಹಿನ್ನೆಲೆ: ʼಕೈʼ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌?

VISTARANEWS.COM


on

ಪರಿಷತ್‌ ಚುನಾವಣೆ

ಪರಿಷತ್ ಚುನಾವಣೆ: ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ CLP ಸಭೆ

ರಾಜ್ಯದಲ್ಲಿ ಪರಿಷತ್ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಮತ್ತೆ ರೆಸಾರ್ಟ್ ರಾಜಕಾರಣದ ಚರ್ಚೆ ಜೋರಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ವಿಶೇಷ ತಂತ್ರ ರೂಪಿಸಿದ್ದು, ಜೂನ್ 16ರಿಂದ ಅಧಿಕೃತವಾಗಿ ‘ರೆಸಾರ್ಟ್ ಪಾಲಿಟಿಕ್ಸ್’ ಆರಂಭಿಸಲಿದೆ ಎಂಬ ಮಾಹಿತಿಯಿದೆ.

ಈ ಹಿನ್ನೆಲೆಯಲ್ಲಿ ನಾಳೆ ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆ ಇದಾಗಿರುವುದು ವಿಶೇಷ.

ಬಿಡದಿ ಬಳಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಸಭೆ ಆಯೋಜನೆಗೊಂಡಿದೆ. ಈ ಚುನಾವಣೆಯ ವೇಳೆ ಯಾವುದೇ ರೀತಿಯ ಅಸಮಾಧಾನ ಅಥವಾ ಅಡ್ಡ ಮತದಾನದಿಂದ ಉಂಟಾಗಬಹುದಾದ ಮುಜುಗರವನ್ನು ತಪ್ಪಿಸಲು ಕಾಂಗ್ರೆಸ್ ನಾಯಕತ್ವ ಈ ತಂತ್ರವನ್ನು ಅನುಸರಿಸುತ್ತಿದೆ ಎಂದು ತಿಳಿದುಬಂದಿದೆ.

ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ, ಅಂದರೆ ಜೂನ್ 16 ಮತ್ತು 17ರಂದು ಕಾಂಗ್ರೆಸ್‌ನ ಎಲ್ಲಾ ಶಾಸಕರು ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಜೂನ್ 18ರಂದು ಮತದಾನದ ದಿನ ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ಮತ ಚಲಾಯಿಸಲಿದ್ದಾರೆ.

Also Read: ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

VISTARANEWS.COM


on

ಬಿಡದಿ ಟೌನ್‌ಶಿಪ್‌

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಬೃಹತ್ ಪ್ರತಿಭಟನೆ ರೈತ ಸಂಘಟನೆಗಳ ತೀರ್ಮಾನ

ಬಿಡದಿ ಟೌನ್‌ಶಿಪ್ ಯೋಜನೆಯ ಅಂತಿಮ ಅಧಿಸೂಚನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ, ಯೋಜನೆ ವಿರೋಧಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಯೋಜನೆಗಾಗಿ ಭೂಮಿ ನೀಡದಿರಲು ರೈತರು ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದು, ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಮನಗರ ಎಪಿಎಂಸಿ ಆವರಣದ ರೈತಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಗ್ರಾಮಗಳ ರೈತರು, ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಭೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆದು ಯೋಜನೆ ವಿರುದ್ಧದ ರೈತರ ಅಸಮಾಧಾನವನ್ನು ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ.

ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ರೈತರ ಬದುಕು ಮತ್ತು ಕೃಷಿ ಭೂಮಿಗೆ ಧಕ್ಕೆ ತರುವ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರ ರೈತರ ಅಭಿಪ್ರಾಯವನ್ನು ಗೌರವಿಸಿ ಯೋಜನೆ ಕುರಿತು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ರೈತರ ಹೋರಾಟಕ್ಕೆ ವಿಪಕ್ಷಗಳು ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ. ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕೂಡಾ ಪ್ರತಿಭಟನೆಗೆ ಸಾಥ್ ನೀಡಲು ಮುಂದಾಗಿವೆ ಎನ್ನಲಾಗಿದೆ.

ಜೂನ್ 22ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಸಿದ್ಧತೆ ನಡೆಸಿವೆ.

Also Read: ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

VISTARANEWS.COM


on

ಸಿಎಂ ಡಿಕೆಶಿ

ಸಿಎಂ ಡಿಕೆಶಿ: ಲಂಚ ಕೇಳಿದ್ರೆ ದೂರು ನೀಡಲು ಪೋನ್ ನಂಬರ್ ಡಿಸ್ ಪ್ಲೇ

ಭ್ರಷ್ಟಾಚಾರ ಮುಕ್ತ ಸರ್ಕಾರದ ನಿರ್ಮಾಣವೇ ನನ್ನ ಮೊದಲ ಆದ್ಯತೆ” ಎಂದು ಹೇಳುವ ಮೂಲಕ ಸಿಎಂ ಡಿ.ಕೆ.ಶಿವಕುಮಾರ್‌ ಭ್ರಷ್ಟಾಚಾರದ ವಿರುದ್ಧ ತಮ್ಮ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕರಿಗೆ ಸೇವೆ ನೀಡುವ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ ಲಂಚಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಸಹಾಯಕ ಆಯುಕ್ತರು (ಎಸಿ) ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಡಿಕೆಶಿ ಆಡಳಿತದ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.

ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಲಂಚ ಕೇಳಿದರೆ ಸಾರ್ವಜನಿಕರು ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಸರ್ಕಾರಿ ಕಚೇರಿಯಲ್ಲಿ ದೂರು ಸಲ್ಲಿಸಲು ಅಗತ್ಯವಿರುವ ಫೋನ್ ನಂಬರ್‌ಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಿದರು.

“ನನಗೆ ಯಾವುದೇ ವೈಯಕ್ತಿಕ ನಿರೀಕ್ಷೆಗಳಿಲ್ಲ. ಜನರಿಗೆ ಸ್ವಚ್ಛ, ಪಾರದರ್ಶಕ ಮತ್ತು ಜನಸ್ನೇಹಿ ಆಡಳಿತ ನೀಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಸಿಎಂ ಹೇಳಿದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ತಂಡದಂತೆ ಕೆಲಸ ಮಾಡಬೇಕು. “ನಾವೆಲ್ಲ ಕರ್ನಾಟಕ ಟೀಂ ಆಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗಳ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಸಮನ್ವಯ ಅತ್ಯಗತ್ಯ” ಎಂದು ತಿಳಿಸಿದರು.

ಇದೇ ವೇಳೆ, ರಾಜ್ಯದ ಎಲ್ಲ ಜಿಲ್ಲೆಗಳ ಸಮಸ್ಯೆಗಳನ್ನು ಆಲಿಸಲು ತಾವೇ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಸಿಎಂ ಭರವಸೆ ನೀಡಿದರು. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Also Read: ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲಿರುವ ಜೋಸೆಫ್ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Also Read: ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಪರಿಷತ್‌ ಚುನಾವಣೆ
Latest7 hours ago

ಪರಿಷತ್ ಚುನಾವಣೆ ಹಿನ್ನೆಲೆ: ʼಕೈʼ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌?

ಬಿಡದಿ ಟೌನ್‌ಶಿಪ್‌
Latest2 days ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest2 days ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest3 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest4 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌