Site icon Vistara News

ಪ್ಲಾಸ್ಟಿಕ್‌ ಬುಟ್ಟಿಯಲ್ಲಿತ್ತು 10 ದಿನದ ಗಂಡು ಮಗು; ನಡುರಸ್ತೆಯಲ್ಲಿ ಬಿಟ್ಟು ಹೋದ ಮಹಾತಾಯಿ

ಮಂಡ್ಯ: ಇಲ್ಲಿನ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗೇಟ್ ಬಳಿ ಪ್ಲಾಸ್ಟಿಕ್ ಬುಟ್ಟಿಯಲ್ಲಿ ಮಗುವೊಂದು ಪತ್ತೆ ಆಗಿದೆ. ಮಂಡ್ಯ‌ ಪಾಂಡವಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಪಕ್ಕದಲ್ಲಿ ಹತ್ತು ದಿನದ ಗಂಡು ಮಗುವನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಬಿಟ್ಟು ಹೋಗಿದ್ದಾರೆ.

ಮಗುವಿನ ಅಳು ಕೇಳಿ ಪ್ಲಾಸ್ಟಿಕ್‌ ಬುಟ್ಟಿಯನ್ನು ತೆರೆದು ನೋಡಿದಾಗ ಮಗು ಪತ್ತೆಯಾಗಿದೆ. ಕೂಡಲೇ ಗ್ರಾಮಸ್ಥರು ಪಾಂಡವಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬುಟ್ಟಿಯಲ್ಲಿದ್ದ ಮಗುವನ್ನು ಕೊಂಡೊಯ್ದು ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಮಗುವನ್ನು ಹೀಗೆ ನಡುರಸ್ತೆಯಲ್ಲಿ ಬಿಟ್ಟುಹೋದ ಪೋಷಕರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಮಂಡ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version