Site icon Vistara News

Soraba News: ಮೌಲ್ಯಯುತ ಸಂಸ್ಕಾರದಿಂದ ಉಜ್ವಲ ಭವಿಷ್ಯ ಸಾಧ್ಯ: ಶಂಕರ್ ಶೇಟ್

Prajapita Brahma Kumari Ishwariya Vishwa Vidyalaya soraba

#image_title

ಸೊರಬ: ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ ಜತೆಗೆ ರಾಷ್ಟ್ರ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರು ಮೌಲ್ಯಯುತ ಸಂಸ್ಕಾರವನ್ನೂ ಕಲಿಸಬೇಕಿದೆ ಎಂದು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಹೇಳಿದರು.

ಪಟ್ಟಣದ‌ (Soraba News) ಚಾಮರಾಜಪೇಟೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇವಲ ಶಿಕ್ಷಣ ನೀಡಿದರೆ ಸಾಲದು, ಮೌಲ್ಯಯುತ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಿದಾಗ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯವಿದೆ. ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸುವುದು ಸಲ್ಲದು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಕೈಲಾದಷ್ಟು ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಆನವಟ್ಟಿಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ನೃತ್ಯ ತರಬೇತಿ ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಶಿಲ್ಪಾ ಅನೂಪ್ ಅವರು ಸಾಧನೆ ಮಾಡಿರುವುದು ತಾಲೂಕಿನ ಹೆಮ್ಮೆಯ ವಿಷಯವಾಗಿದೆ ಎಂದರು.

ಇದನ್ನೂ ಓದಿ | Teacher Transfer : ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್‌; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ಟಿವಿ, ಮೊಬೈಲ್ ಗೀಳಿಗೆ ಒಳಗಾಗದೆ ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು. ನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಂಡಲ್ಲಿ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಮತ್ತು ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಪೋಷಕರು ಸಹ ಮಕ್ಕಳ ಚಲನವಲನಗಳ ಮೇಲೆ ನಿಗಾವಹಿಸಬೇಕು ಎಂದು ತಿಳಿಸಿದರು.

ವಿಶ್ವದಾಖಲೆ ಬರೆದ ಪಾಂಡಿಚೇರಿಯಲ್ಲಿ ನಡೆದ ಆನಂದ ತಾಂಡವ ಭರತನಾಟ್ಯದಲ್ಲಿ ಪಾಲ್ಗೊಂಡ ನೃತ್ಯಗಾರ್ತಿ ಶಿಲ್ಪಾ ಅನೂಪ್, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ, ವಿಜ್ಞಾನ ವಿಭಾಗ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ ಕೀರ್ತಿ ಚಂದ್ರಪ್ಪ ಬೆಳಗಲದ, ಜೆ.ಡಿ. ದೊರೆ ಪಾಟೀಲ್ ಮತ್ತು ಎಸ್.ಬಿ. ತರುಣ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇದನ್ನೂ ಓದಿ | Brand story : ತಂದೆ ನಡೆಸುತ್ತಿದ್ದ ಸಣ್ಣ ಡಯಾಗ್ನಸ್ಟಿಕ್ಸ್ ಸೇರಿ ದೇಶ-ವಿದೇಶಗಳಲ್ಲಿ 1,500ಕ್ಕೆ ವಿಸ್ತರಿಸಿದ ಮಗಳ ಯಶೋಗಾಥೆ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಚೇತನಕ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ನಾಗರಾಜ ಗುತ್ತಿ, ಕನ್ನಡ ಸಾಂಸ್ಕøತಿಕ ಜಗಲಿ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ಉಪನ್ಯಾಸಕರಾದ ಡಾ. ಉಮೇಶ್ ಭದ್ರಾಪುರ, ವಿಜಯಕುಮಾರ್ ದಟ್ಟೇರ್, ನಮ್ಮೂರು ಸಂಸ್ಥೆಯ ಎಸ್. ರಾಘವೇಂದ್ರ, ಯುವಾ ಬ್ರಿಗೇಡ್ ತಾಲೂಕು ಸಂಚಾಲಕ ಮಹೇಶ್ ಖಾರ್ವಿ, ಅಕ್ಕನ ಬಳಗದ ಅಧ್ಯಕ್ಷೆ ರೇಣುಕಮ್ಮ ಗೌಳಿ, ಪ್ರಾಂಶುಪಾಲ ಮಂಜುನಾಥ್, ರಮೇಶ್ ಕಲ್ಲಂಬಿ, ವಿನೋದ್ ವಾಲ್ಮೀಕಿ ಇದ್ದರು.

Exit mobile version