ಕರ್ನಾಟಕ
Azadi Quest : ಮೊಬೈಲ್ ಆಟಗಳ ಸರಣಿಯ ಡಿಜಿಟಲ್ ಕಲಿಕೆಯ ಅನುಭವ
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಝಿಂಗಾ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಆನ್‌ಲೈನ್ ಶೈಕ್ಷಣಿಕ ಮೊಬೈಲ್ ಆಟಗಳ ಸರಣಿಯಾದ “ಆಜಾದಿ ಕ್ವೆಸ್ಟ್’ಗೆ ಇತ್ತೀಚೆಗೆ ಚಾಲನೆ ನೀಡಿದ್ದಾರೆ.
ನವ ದೆಹಲಿ : ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಝಿಂಗಾ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಆನ್‌ಲೈನ್ ಶೈಕ್ಷಣಿಕ ಮೊಬೈಲ್ ಆಟಗಳ ಸರಣಿಯಾದ “ಆಜಾದಿ ಕ್ವೆಸ್ಟ್’ಗೆ ಇತ್ತೀಚೆಗೆ ಚಾಲನೆ ನೀಡಿದರು.
ಭಾರತವು ಡಿಜಿಟಲ್ ಗೇಮಿಂಗ್‌ನಲ್ಲಿ ಸಾಕಷ್ಟು ವಿಷಯ ಮತ್ತು ಸಾಮರ್ಥ್ಯವನ್ನು ಹೊಂದಿದೆ.
ಪ್ರಧಾನಿ ನರೇಂದ್ರ ಮೋದಿ
ಭಾರತದ ಸ್ವಾತಂತ್ರ್ಯ ಹೋರಾಟದ ಮೈಲುಗಲ್ಲುಗಳು, ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಸಾಹಸ ಪ್ರದರ್ಶಿಸುವ ಆಟಗಳು ಮತ್ತು ಆಟಿಕೆಗಳನ್ನು ಅಭಿವೃದ್ಧಿಪಡಿಸಲು ಗೇಮಿಂಗ್ ಉದ್ಯಮಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಕರೆಯಿಂದ ಈ ವಿಶಿಷ್ಟ ರೀತಿಯ ಉಪಕ್ರಮವು ಸ್ಫೂರ್ತಿ ಪಡೆದಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಭಾರತದ ಸ್ವಾತಂತ್ರ್ಯ ಹೋರಾಟದ ಕುರಿತ ಕಾರ್ಯಕ್ರಮದಲ್ಲಿ ಯುವಕರು ಮತ್ತು ಹಿರಿಯರನ್ನು ಸಮಾನವಾಗಿ ತೊಡಗಿಸುವುದು, ಮನರಂಜನೆ ಮತ್ತು ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ. ಈ ಆಟಗಳು ಆನ್‌ಲೈನ್ ಗೇಮರ್‌ಗಳ ಬೃಹತ್ ಮಾರುಕಟ್ಟೆಯನ್ನು ಬಳಸಿಕೊಳ್ಳುವ ಮತ್ತು ಆಟಗಳ ಮೂಲಕ ಅವರಿಗೆ ಶಿಕ್ಷಣ ನೀಡುವ ಪ್ರಯತ್ನವಾಗಿವೆ.
ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಭಾರತ ಸ್ವಾತಂತ್ರ್ಯ ಹೋರಾಟದ ಕಥೆಗಳನ್ನು ಹೊರತರುವ ಸರ್ಕಾರದ ಪ್ರಯತ್ನಗಳ ಸರಣಿಯಲ್ಲಿ ಇದು ಮತ್ತೊಂದು ಉಪಕ್ರಮವಾಗಿದೆ ಎಂದರು.
ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಭಾರತದಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ (ಎವಿಜಿಸಿ) ವಲಯವನ್ನು ಅಭಿವೃದ್ಧಿಪಡಿಸಲು ಸ್ಥಿರವಾದ ಕ್ರಮಗಳನ್ನು ತೆಗೆದುಕೊಂಡಿದೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗೇಮಿಂಗ್ ವಲಯದಲ್ಲಿ ಅಗ್ರ ಐದು ರಾಷ್ಟ್ರಗಳಲ್ಲೊಂದಾಗಿದೆ. ಗೇಮಿಂಗ್ ಕ್ಷೇತ್ರವು ಕೇವಲ 2021ರಲ್ಲಿಯೇ ಶೇ. 28ರಷ್ಟು ಬೆಳೆದಿದೆ. ಆನ್‌ಲೈನ್ ಗೇಮರ್‌ಗಳ ಸಂಖ್ಯೆ 2020ರಿಂದ 2021ರವರೆಗೆ ಶೇ.ಎಂಟರಷ್ಟು ಹೆಚ್ಚಾಗಿದೆ ಮತ್ತು 2023ರ ವೇಳೆಗೆ ಅಂತಹ ಗೇಮರ್‌ಗಳ ಸಂಖ್ಯೆ 45 ಕೋಟಿಗೆ ತಲುಪುವ ನಿರೀಕ್ಷೆಯಿದೆ. ಈ ಆ್ಯಪ್‌ಗಳು ಭಾರತದ ಎವಿಜಿಸಿ ಕ್ಷೇತ್ರದ ಸಾಮರ್ಥ್ಯಗಳನ್ನು ಹೆಚ್ಚಿಸುತ್ತವೆ ಮತ್ತು ದೇಶದ ಅದ್ಭುತ ಇತಿಹಾಸವನ್ನು ವಿಶ್ವದ ಮೂಲೆಮೂಲೆಗೂ ತಲುಪಿಸುತ್ತವೆ ಎಂದು ಸಚಿವರು ಹೇಳಿದರು.
‘ಆಜಾದಿ ಕ್ವೆಸ್ಟ್’ ಗೇಮ್ಸ್‌ನ ಮುಖ್ಯಾಂಶಗಳೇನು?
ಈ ಅಪ್ಲಿಕೇಶನ್‌ಗಳಲ್ಲಿನ ಮಾಹಿತಿಯನ್ನು ಪ್ರಕಟಣಾ ವಿಭಾಗ ಮತ್ತು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ (ಐಸಿಹೆಚ್‌ಆರ್) ರೂಪಿಸಿದೆ. ಇದು ಭಾರತ ಸ್ವಾತಂತ್ರ್ಯ ಹೋರಾಟದ ಅಧಿಕೃತ ಮಾಹಿತಿಗೆ ಸುಲಭವಾಗಿ ಪ್ರವೇಶಿಸಬಹುದಾದ ಮಾಹಿತಿ ಕಣಜವಾಗಿದೆ.
-ಭಾರತದ ಸ್ವಾತಂತ್ರ್ಯದ ಪ್ರಯಾಣ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟಗಾರರ ಸಾಹಸದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಇದರಲ್ಲಿ ಭಾಗವಹಿಸುವ ಆಟಗಾರರಿಗೆ ವೇದಿಕೆಯನ್ನು ಕಲ್ಪಿಸುತ್ತದೆ. ಇದನ್ನು ಆಟದ ಮೋಜಿನೊಂದಿಗೆ ಹೆಣೆಯಲಾಗಿದೆ.
– ಆಜಾದಿ ಕ್ವೆಸ್ಟ್ ಗೇಮ್‌ಗಳು ಆಂಡ್ರಾಯ್ಡ್ ಮತ್ತು ಐಒಎಸ್ ಸಾಧನಗಳನ್ನು ಬಳಸುವ ಭಾರತದ ಜನರಿಗೆ ಇಂಗ್ಲಿಷ್, ಹಿಂದಿಯಲ್ಲಿ ಲಭ್ಯ ಇವೆ. ಸೆಪ್ಟೆಂಬರ್ 2022ರಿಂದ ವಿಶ್ವಾದ್ಯಂತ ಇವು ಲಭ್ಯ ಇರುತ್ತವೆ.
ಎರಡು ಆಟಗಳು ಲಭ್ಯ…
ಆಜಾದಿ ಕ್ವೆಸ್ಟ್: ಮ್ಯಾಚ್ 3 ಪಜಲ್ – ಆಟಗಾರನಿಗೆ ಪ್ರೀತಿಯ ಪಾತ್ರಗಳಾದ ಅಜ್ಜಿ (ದಾದಿ), ರೇಖಾ ಮತ್ತು ಛೋಟು ಮೂಲಕ ಮಾರ್ಗದರ್ಶನ ನೀಡಲಾಗುತ್ತದೆ. ಕುತೂಹಲಿಗಳಾದ ಮೊಮ್ಮಕ್ಕಳು ದಾದಿಯ ನೆನಪುಗಳನ್ನು ಕೇಳಲು ಅವಳ ಸುತ್ತ ನೆರೆಯುತ್ತಿದ್ದಂತೆ, ಭಾರತದ ಸ್ವಾತಂತ್ರ್ಯದ ವರ್ಣರಂಜಿತ ಪ್ರಯಾಣವು ಆಟಗಾರರಿಗೆ ತೆರೆದುಕೊಳ್ಳುತ್ತದೆ.
ಆಜಾದಿ ಕ್ವೆಸ್ಟ್: ಹೀರೋಸ್ ಆಫ್ ಭಾರತ್- ಇದು ಭಾರತ ಸ್ವಾತಂತ್ರ್ಯದ ಬಗ್ಗೆ 750 ಪ್ರಶ್ನೆಗಳನ್ನು ಒಳಗೊಂಡಿದೆ. ಇದನ್ನು ಭಾರತದ ಸ್ವಾತಂತ್ರ್ಯ ಚಳುವಳಿಯ ವ್ಯಕ್ತಿತ್ವಗಳ ಬಗ್ಗೆ ಆಟಗಾರರ ಜ್ಞಾನವನ್ನು ಪರೀಕ್ಷಿಸಲು ರಸಪ್ರಶ್ನೆ ಆಟವವನ್ನಾಗಿ ವಿನ್ಯಾಸಗೊಳಿಸಲಾಗಿದೆ. ಆಟಗಾರರು 75 “ಆಜಾದಿ ವೀರ್’ ಕಾರ್ಡ್‌ಗಳನ್ನು ಸಂಗ್ರಹಿಸಬಹುದು, ಪ್ರತಿಯೊಂದೂ ಭಾರತದ ಸ್ವಾತಂತ್ರ್ಯ ಹೋರಾಟದ ಅಜ್ಞಾತ ನಾಯಕನ ದಂತಕಥೆಯನ್ನು ಬಿಚ್ಚಿಡುತ್ತದೆ. ವಿಶೇಷ ಬೆಳ್ಳಿ ಮತ್ತು ಚಿನ್ನದ ಆವೃತ್ತಿಗಳನ್ನು ಪ್ರತಿ ಹಂತವನ್ನು ದಾಟುವ ಮೂಲಕ ಅನ್ಲಾಕ್ ಮಾಡಬಹುದು.
– ಪ್ರತಿಯೊಬ್ಬ ಆಟಗಾರರು ತಮ್ಮ ಆಟದ ಪ್ರಗತಿ ಮತ್ತು 75 ಟ್ರಿವಿಯಾ ಕಾರ್ಡ್‌ಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಬಹುದು.
– ಆಟಗಾರರು ತಮ್ಮ ಪ್ರಗತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ಅವಕಾಶವಿದೆ. ಆಟಗಳು ಆಟಗಾರರಿಗೆ ತಮ್ಮ ವರ್ಚುವಲ್ ಪ್ರಯಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಅವರ ಸಾಧನೆಯನ್ನು ಗುರುತಿಸುವ ಪ್ರಮಾಣಪತ್ರವನ್ನು ನೀಡಲಾಗುತ್ತದೆ.
ಡೌನ್ಲೋಡ್ ಮಾಡುವುದು ಹೇಗೆ?
ಹಂತ 1
ನಿಮ್ಮ ಮೊಬೈಲ್ ಸಾಧನದಲ್ಲಿ Google Play/App Store ನಲ್ಲಿ `Azadi Quest’ ಅನ್ನು ಹುಡುಕಿ.
ಆಜಾದಿ ಕ್ವೆಸ್ಟ್
ಮೊಬೈಲ್ ಗೇಮ್‌ಗಳ ಸರಣಿಯ ಮೂಲಕ ಡಿಜಿಟಲ್ ಕಲಿಕೆಯ ಅನುಭವ.
ಡೌನ್‌ಲೋಡ್ ಮಾಡುವುದು ಹೇಗೆ?
ಹಂತ 2
ಎರಡು ಆಟಗಳು ಲಭ್ಯ ಇವೆ.
ಆಜಾದಿ ಕ್ವೆಸ್ಟ್: ಮ್ಯಾಚ್ 3 ಪಝಲ್
ಆಜಾದಿ ಕ್ವೆಸ್ಟ್: ಹೀರೋಸ್ ಆಫ್ ಭಾರತ್
ನೀವು ಆಡಲು ಬಯಸುವ ಆಟವನ್ನು ಡೌನ್ಲೋಡ್ ಮಾಡಿ
Video Link
https://www.youtube.com/watch?v=HOoIe5wXqzc
Twitter Links
https://twitter.com/PIB_India/status/1562669233825128450
https://twitter.com/PIB_India/status/1562392234867118080
https://twitter.com/PIB_India/status/1562416956459868160
https://twitter.com/PIB_India/status/1562670147860516865
https://twitter.com/PMOIndia/status/1407950717629861890?s=20&t=P04tvOe5WkNuT02_SsuzAg
ಕರ್ನಾಟಕ
Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Koppal News: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಕೊಪ್ಪಳ: ರಾಯಚೂರು ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಜಿಲ್ಲೆಯಲ್ಲಿ (Koppal News) ನಡೆದಿದೆ. ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದಾರೆ. ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಿದ ಆರೋಪ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಟಯರ್ ಸಿಡಿದು ಪಲ್ಟಿ ಹೊಡೆದ ಕಾರು; ಐವರಿಗೆ ಗಾಯ
ಮಂಡ್ಯ: ಟಯರ್ ಸಿಡಿದು ಕಾರು ಪಲ್ಟಿಯಾಗಿದ್ದರಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಚಿಕ್ಕಮಂಡ್ಯ ಬಳಿ ಸೋಮವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಮೂಲದ ಅರ್ಜುನ್, ಮಂಜುನಾಥ್ ಜಿ.ಅಡಿಗ, ಶ್ರೀಕಾಂತ್, ಕೃಷ್ಣ, ಮೂರ್ತಿ ಗಾಯಗೊಂಡವರು.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಚಿಕ್ಕಮಂಡ್ಯ ಸಮೀಪಿಸುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕರ್ನಾಟಕ
World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.
ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.
ಆರ್‌ಎಸ್‌ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.
ಉತ್ತರ ಕನ್ನಡ
Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
Uttara Kannada News: ಶಿರಸಿಯ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದ್ದಾರೆ.
ಶಿರಸಿ: ಪರಿಸರ ಸಂರಕ್ಷಣೆಗೆ (Environmental protection) ಪ್ರತಿಯೊಬ್ಬರೂ (Everyone) ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷಾರೋಪಣ ನಡೆಸಿ ಮಾತನಾಡಿದ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರೂ ಸ್ವಚ್ಛ ಭಾರತ, ಕಸ ಮುಕ್ತ ಭಾರತದ ಕನಸು ಕಂಡಿದ್ದಾರೆ. ಹುಕ್ಕೇರಿ ಮಠದಿಂದಲೂ ಪ್ಲಾಸ್ಟಿಕ್ ಚೀಲ ಮುಕ್ತ ಮಾಡುವಲ್ಲಿ ನಮ್ಮದೇ ಕೊಡುಗೆ ಕೊಡಬೇಕು ಎಂದು 2.80 ಲಕ್ಷ ಬಟ್ಟೆ ಚೀಲಗಳನ್ನು ಹೊಲಿಸಿ ವಿತರಣೆ ಮಾಡಿದ್ದೆವು ಎಂದರು.
ಇದನ್ನೂ ಓದಿ: Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
ಒಂದು ವೃಕ್ಷವು ಸ್ವಚ್ಛ ಮನದಿಂದ ಎಷ್ಟೆಲ್ಲ ನೆರವಾಗುತ್ತದೆ. ಹಾಗೆ ಪರಿಸರದ ಉಳಿವಿಗೆ ಸರ್ವರೂ ಕಂಕಣ ಬದ್ಧರಾಗಬೇಕು. ಇಲ್ಲವಾದರೆ ಭವಿಷ್ಯಕ್ಕೆ ದೊಡ್ಡ ಕಂಟಕ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, 1974 ರಿಂದ ಪರಿಸರದ ದಿನ ಆಚರಣೆ ಮಾಡುತ್ತಿದ್ದೇವೆ. ಈ ಬಾರಿಯ ಘೋಷ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ತಡೆಯಬೇಕು. ಎಲ್ಲರಿಗೂ ವೈಯಕ್ತಿಕ, ಸಾಮಾಜಿಕ, ಕೌಟುಂಬಿಕ, ಸಂಘಟಿತ ಜೀವನದಲ್ಲಿ ಪರಿಸರದ ಮಹತ್ವ ಅರಿವಿದೆ. ಆದರೆ, ಈ ಅರಿವನ್ನು ವೈಯಕ್ತಿಕ ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು ಎಂದರು.
ಭವಿಷ್ಯದ ಜನಾಂಗದ ಭವಿಷ್ಯ ಅಂಧಕಾರಕ್ಕೆ ಹೋಗದಂತೆ ಪರಿಸರ ಸಂರಕ್ಷಿಸಬೇಕು. ಯಾರೂ ಉದಾಸೀನ ಮಾಡದೇ ಪರಿಸರ ಸಂರಕ್ಷಣೆ ಮಾಡಬೇಕು ಎಂದೂ ಹೇಳಿದರು.
ಇದನ್ನೂ ಓದಿ: Eco friendly Fashion: ಪರಿಸರ ಸ್ನೇಹಿ ಉಡುಪುಗಳಿಗೂ ಸಿಕ್ತು ಗ್ಲಾಮರ್ ಟಚ್
ಪ್ರಸಿದ್ಧ ವೈದ್ಯ ಡಾ. ವೆಂಕಟ್ರಮಣ ಹೆಗಡೆ ಮಾತನಾಡಿ, ಪ್ರಕೃತಿ ಸಂರಕ್ಷಣೆ ಎಲ್ಲರ ಜವಾಬ್ದಾರಿ. ನಿಸರ್ಗದ ಉಳಿದರೆ ಮಾತ್ರ ಎಲ್ಲ ಜೀವಿಗಳ ಉಳಿವು. ಈ ಸತ್ಯ ಅರಿತರೆ ಮಾತ್ರ ಪರಿಸರ ಉಳಿಸುವ ಜವಬ್ದಾರಿ ಹೃದಯದಿಂದ ಆರಂಭವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಗೀತಾ ಹೆಗಡೆ, ನಾರಾಯಣ ಹೆಗಡೆ ಸೇರಿದಂತೆ ಇತರರು ಇದ್ದರು.
ಕರ್ನಾಟಕ
Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸಾವು
Bike Accident: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಅಪಘಾತ ನಡೆದಿದೆ. ನಿಯಂತ್ರಣ ತಪ್ಪಿ ಸ್ಕೂಟರ್ ಸವಾರ ಬಸ್‌ನಡಿ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ (ಕೆಕೆಆರ್‌ಟಿಸಿ) ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಸೋಮವಾರ ನಡೆದಿದೆ. ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟರ್ ಸವಾರ ಬಸ್ ಕೆಳಗೆ ಬಿದ್ದಿದ್ದರಿಂದ ದುರಂತ (Bike Accident) ಸಂಭವಿಸಿದೆ.
ಮಾಗುಂಡಿ ಗ್ರಾಮದ ಇರ್ಫಾನ್ (29) ಮೃತ ಸವಾರ, ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟ್‌ನಲ್ಲಿ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ವೇಳೆ ಸ್ಕೂಟರ್‌ನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಸವಾರ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಬಸ್ ಹಿಂಬದಿ ಚಕ್ರ ಹರಿದಿದ್ದರಿಂದ ಗಂಭೀರವಾಗಿ ಗಾಯಗೊಂಡು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು – ದಕ್ಷಿಣಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ತೆರಳುತ್ತಿದ್ದ ಬಸ್‌ನಡಿ ಸಿಲುಕಿ ಸವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ತುಮಕೂರು: ನಗರದ ಅಂತಸರನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ಬಳಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಬಿಹಾರ ಮೂಲದ ಲಖನ್ ಮಾಂಜಿ (36) ಮೃತ ವ್ಯಕ್ತಿ. 6 ತಿಂಗಳಿಂದ ಮಾರುಕಟ್ಟೆಯಲ್ಲಿ ಟಾಯ್ಲೆಟ್ ಕೀಪರ್ ಆಗಿದ್ದ ಲಖನ್ ಮಾಂಜಿ ಕೆಲಸ ಮಾಡುತ್ತಿದ್ದ. ಸಾರ್ವಜನಿಕ ಟಾಯ್ಲೆಟ್‌ನಲ್ಲಿ ಶವ ಪತ್ತೆಯಾಗಿದೆ. ತುಮಕೂರು ನಗರ ಠಾಣೆ ಇನ್ ಸ್ಪೆಕ್ಟರ್ ದಿನೇಶ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲಿಸಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಸುವಚನ19 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ17 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ14 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ8 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ಕರ್ನಾಟಕ12 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ದೇಶ13 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ16 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ8 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ