Site icon Vistara News

ಶಿಕ್ಷಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಎ.ಜೆ. ರಾಮಚಂದ್ರ; ಸೆ.6ರಂದು ಅಭಿನಂದನಾ ಕಾರ್ಯಕ್ರಮ

ramachandhra

ಶಿವಮೊಗ್ಗ: ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಸಾಧಕ ಎ.ಜೆ.ರಾಮಚಂದ್ರ (ಅಮರಗೊಳ್ಳ ಜಯರಾಮಾಚಾರ ರಾಮಚಂದ್ರ) ಅವರ 70ನೇ ಸಂವತ್ಸರಗಳ ಸಂದರ್ಭದಲ್ಲಿ ಎಜೆಆರ್‌ಗೆ ಅಭಿನಂದನೆ ಕಾರ್ಯಕ್ರಮ ಸೆ.6ರಂದು ಸಂಜೆ 6 ಗಂಟೆಗೆ ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಭಿನಂದನಾ ಸಮಿತಿ ಅಧ್ಯಕ್ಷ ಬಿ.ಸಿ.ನಂಜುಂಡಶೆಟ್ಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸತತ ನಾಲ್ಕು ದಶಕಗಳ ಕಾಲ ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಅವರು ಚಿಕ್ಕ ವಯಸ್ಸಿನಿಂದಲೇ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಸಹೃದಯಿ, ಸರಳ ಜೀವಿಯೂ ಆಗಿರುವ ಎಜಿಆರ್ ನಿಖರವಾದಿಗಳೂ, ಚಿಂತನಾಶೀಲರೂ ಆಗಿದ್ದಾರೆ. ಅವರ ಅಭಿಮಾನಿ ಮತ್ತು ಗೆಳೆಯರ ಬಳಗದಿಂದ ವಿಶಿಷ್ಟವಾಗಿ ಅಭಿನಂದನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

18ನೇ ವಯಸ್ಸಿನಲ್ಲೇ ಜನಸಂಘದ ಸಂಪರ್ಕ, 20ನೇ ವಯಸ್ಸಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದರು. 1977ರ ವೇಳೆಗೆ ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿಯಾಗಿ, 1989ರಲ್ಲಿ ವಿಕಾಸ ವಿದ್ಯಾ ಸಮಿತಿಯ ಪ್ರಾಥಮಿಕ ಶಾಲೆಯ ಕಾರ್ಯದರ್ಶಿಯಾಗಿ ಮೂರು ದಶಕ ದುಡಿದು 1,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆಗೆ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸಮಿತಿ ಉಪಾಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್ ಮಾತನಾಡಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಎಜಿಆರ್ ಅವರನ್ನು ಅಭಿನಂದಿಸಲಿದ್ದಾರೆ. ಶಾಸಕ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಲ್‌ಸಿಗಳಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Bengaluru Rain | ಮುಳುಗಡೆಯಾದ ಬೆಂಗಳೂರು: ದೇಶದ ರಾಜಧಾನಿವರೆಗೂ ಚರ್ಚೆ

Exit mobile version