Site icon Vistara News

ಅರಬೈಲ್ ಘಟ್ಟದಲ್ಲಿ ಕಂದಕಕ್ಕೆ ಉರುಳಿದ ಲಾರಿ; ಚಾಲಕ, ಕ್ಲೀನರ್‌ ಸ್ಥಳದಲ್ಲೇ ಸಾವು

ಉರುಳಿದ ಲಾರಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೈಲ್ಸ್ ಸಾಗಿಸುತ್ತಿದ್ದ ಲಾರಿಯೊಂದು ಆಳವಾದ ಕಂದಕಕ್ಕೆ ಬಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್‌ ಪೇಟ ಗ್ರಾಮದ ಲಾರಿ ಚಾಲಕನನ್ನು ಸೈದಾ ಸಾಹೇಬ್ ಹಾಗೂ ಕ್ಲೀನರ್‌ನನ್ನು ಶೇಖ್ ಬುಡಾ ಎಂದು ಗುರುತಿಸಲಾಗಿದೆ. ಯಲ್ಲಾಪುರದಿಂದ ಮಂಗಳೂರು ಕಡೆಗೆ ಟೈಲ್ಸ್ ಸಾಗಿಸುತ್ತಿದ್ದಾಗ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣ ಜಖಂ ಆಗಿದ್ದು, ಚಾಲಕ ಹಾಗೂ ಕ್ಲೀನರ್ ಇಬ್ಬರೂ ಸ್ಥಳದಲ್ಲೇ ಮೃತಪಟ್ಟದ್ದಾರೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಆಳವಾದ ಕಂದಕಕ್ಕೆ ಉರುಳಿದ್ದ ಹಿನ್ನೆಲೆಯಲ್ಲಿ ಕ್ರೇನ್ ಮೂಲಕ ಸ್ಥಳೀಯರ ಸಹಾಯದಿಂದ ಮೃತರ ಶವಗಳನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ | Cheetah In India | ಭಾರತಕ್ಕೆ 8 ಚೀತಾ ತರುವುದರ ಹಿಂದಿದೆ ಪುತ್ತೂರು ವೈದ್ಯ ಸನತ್‌ ಕೃಷ್ಣ ಪರಿಶ್ರಮ!

Exit mobile version