ಚಿಕ್ಕಬಳ್ಳಾಪುರ: ಗಾಳಿಗೆ ಊಟದ ಪೆಂಡಾಲ್ ಕಳಚಿ ಬಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (Bangalore North University) ನೂತನ ಕ್ಯಾಂಪಸ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಶಿಲಾನ್ಯಾಸ ಕಾರ್ಯಕ್ರಮದ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಪೆಂಡಾಲ್ ಕೆಳಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಏಕಾಏಕಿ ಜೋರಾಗಿ ಗಾಳಿ ಬಂದಿದ್ದರಿಂದ ಕಬ್ಬಿಣದ ರಾಡ್‌ಗಳು ಬಿದ್ದು ಪೆಂಡಾಲ್ ಕುಸಿದಿದೆ. ಇದರಿಂದ ಅಲ್ಲಿದ್ದ ವಿದ್ಯಾರ್ಥಿಗಳು ಗಾಬರಿಗೊಂಡು ಓಡಿಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಜ್ಞಾನ ನಗರಿ ಕ್ಯಾಂಪಸ್‌ಗೆ ಶಿಲಾನ್ಯಾಸ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನೂತನ ಜ್ಞಾನ ನಗರಿ (knowledge city) ಕ್ಯಾಂಪಸ್‌ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.