ಚಿಕ್ಕೋಡಿ: ಮಗಳನ್ನು ಸಾಕಿ ಬೆಳೆಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಕತ್ತು ಹಿಸುಕಿ ಕೊಲೆ ಮಾಡಿದ ತಂದೆಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಮಲ್ಲಾರವಾಡಿಯಲ್ಲಿ 2021ರ ಸೆಪ್ಟೆಂಬರ್ 6ರಂದು ಬಸವರಾಜ್ ಮುಗದಮ್ ಎಂಬಾತ ಸಂಗೀತಾ ಎಂಬ ತನ್ನ 7 ವರ್ಷದ ಮಗಳನ್ನು ಕೊಲೆ ಮಾಡಿದ್ದ. ಮಗಳನ್ನು ಸಾಕಲು ಆಗುತ್ತಿಲ್ಲ ಎಂಬ ಕನಿಷ್ಠ ಕಾರಣ ನೀಡಿ ಈತ ಮಗಳ ಪ್ರಾಣವನ್ನೇ ಬಲಿ ಪಡೆದುಕೊಂಡಿದ್ದ.
ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತನನ್ನು ಬಂಧಿಸಿದ್ದ ಪೋಲಿಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಇದೀಗ ತೀರ್ಪು ಪ್ರಕಟಿಸಿದ್ದು, ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಜತೆಗೆ 10,000 ರೂ. ದಂಡ ನೀಡುವಂತೆ ಆದೇಶಿಸಿದೆ.
ಇದನ್ನೂ ಓದಿ: Rajasthan Murder | ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ರಾಜ್ಯದಲ್ಲಿ ಮುಂದುವರಿದ ಪ್ರತಿಭಟನೆ