Site icon Vistara News

ಮಗುವಿಗೆ ಅಪರೂಪದ ಕಾಯಿಲೆ; ಇಂಜೆಕ್ಷನ್‌ಗೆ ಆಮದು ಸುಂಕ ವಿನಾಯಿತಿ ನೀಡಲು ಮೋದಿಗೆ ಸಿಎಂ ಮನವಿ

PM Narendra Modi and Siddaramaiah

ಬೆಂಗಳೂರು: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ 15 ತಿಂಗಳ ಮಗುವಿನ ಚಿಕಿತ್ಸೆಗಾಗಿ ವಿದೇಶದಿಂದ ತರಿಸುವ ಇಂಜೆಕ್ಷನ್‌ಗೆ ಆಮದು ಸುಂಕ ವಿನಾಯಿತಿ ನೀಡಿ, ಪುಟ್ಟ ಕಂದನ ಪ್ರಾಣ ಉಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಕಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ | Karnataka Rajyotsava : ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ನೀರು – ವಿದ್ಯುತ್: ಸಿಎಂ ಸಿದ್ದರಾಮಯ್ಯ

ಝೋಲ್ಗೆನ್‌ಸ್ಮ ಚುಚ್ಚುಮದ್ದಿಗೆ ಆಮದು ಸುಂಕ ವಿನಾಯಿತಿ ನೀಡಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಹಾಗೂ ಪಿಎಂ ಕೇರ್ಸ್‌ ನಿಧಿಯಲ್ಲಿ ಮಗುವಿನ ಚಿಕಿತ್ಸೆಗೆ ನೆರವು ನೀಡಬೇಕು ಎಂದು ಸಿಎಂ ಕೋರಿದ್ದಾರೆ.

ಈ ಸಂಗತಿಯ ಕುರಿತು ಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version