ದಾವಣಗೆರೆ: ನಗರದ ಬಾತಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸರಣಿ ಅಪಘಾತ ನಡೆದಿದೆ. ಲಾರಿ, ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ (Road Accident) ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ.
ಮೊದಲಿಗೆ ಟ್ರ್ಯಾಕ್ಟರ್‌ಗೆ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಅಡ್ಡಲಾಗಿ ಟ್ರ್ಯಾಕ್ಟರ್ ನಿಂತಿದೆ. ಈ ವೇಳೆ ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಕಾರು ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ರಸ್ತೆ ಬದಿಯ ಜಮೀನಿಗೆ ಬಿದ್ದಿದೆ. ಈ ವೇಳೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಬಳ್ಳಾರಿ ಮೂಲದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ; ಸವಾರನಿಗೆ ಗಾಯ
ಕಾರವಾರ: ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದಿದ್ದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಎಲ್‌ಐಸಿ ಕ್ರಾಸ್ ಬಳಿ ನಡೆದಿದೆ.
ಎಲ್‌ಐಸಿ ಪ್ರತಿನಿಧಿ ಸಂದೇಶ ನಾಯ್ಕ ಗಾಯಾಳು. ಈತ ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಕುಮಟಾದಿಂದ ಭಟ್ಕಳ ಕಡೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಬೈಕ್‌ಗೆ ಹಿಂಬದಿಯಿಂದ ಗುದ್ದಿದೆ. ಡಿಕ್ಕಿ ಬಳಿಕ ಡಿವೈಡರ್ ಮೇಲೆ ಬಸ್ ಹತ್ತಿ ನಿಂತಿದೆ. ಈ ವೇಳೆ ಬಸ್ ಕೆಳಗೆ ದ್ವಿಚಕ್ರ ಸವಾರನ ಬೈಕ್ ಸಿಕ್ಕಿಕೊಂಡಿದ್ದು, ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಂತರ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | Love case : ಕೈ ಕೊಟ್ಟ ಪ್ರಿಯಕರನಿಗೆ ಮೈಮುಟ್ಟಿ ನೋಡುವಂತೆ ಹೊಡೆದಳು ಪ್ರಿಯತಮೆ!
ಮೈಸೂರಿನಲ್ಲಿ ವೀಲಿಂಗ್ ಪುಂಡರ ಅಟ್ಟಹಾಸ; ಶಿಕ್ಷಕಿಗೆ ಗಂಭೀರ ಗಾಯ
ಮೈಸೂರು: ಹಿಂದೆ ಬೆಂಗಳೂರಿಗೆ ಸೀಮಿತವಾಗಿದ್ದ ಬೈಕ್ ವೀಲಿಂಗ್ (Bike Wheeling) ಪುಂಡಾಟಿಕೆ ಈಗ ರಾಜ್ಯದ ನಾನಾ ಭಾಗಗಳಿಗೆ ಹರಡಿದ್ದು, ಇವರ ಅಟ್ಟಹಾಸಕ್ಕೆ ಜನ ನಡುಗುವಂತಾಗಿದೆ. ಮೈಸೂರಿನಲ್ಲಿ (Wheeling in Mysore) ಮುಂದುವರಿದ ಪುಂಡ ಯುವಕರ ವೀಲಿಂಗ್ ಅಬ್ಬರಕ್ಕೆ ಒಬ್ಬ ಶಿಕ್ಷಕಿ (School teacher injured) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರಿನಲ್ಲಿ ಇತ್ತೀಚೆಗೆ ವೀಲಿಂಗ್ ಮಾಡುವ ಯುವಕರನ್ನು ಹುಡುಕಿ ಹುಡುಕಿ ಕೇಸು ಜಡಿಯಲಾಗಿತ್ತು. ಆದರೂ ಈ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಮೈಸೂರಿನ ವಿವಿಧ ರಸ್ತೆಗಳಲ್ಲಿ ವೀಲಿಂಗ್ ಮಾಡುವ ಮೂಲಕ ಜೀವಾಪಾಯ, ಆತಂಕ ತಂದಿಡುವ ಘಟನೆಗಳು ನಡೆಯುತ್ತಲೇ ಇವೆ.
ಜುಲೈ 18ರಂದು ಮೈಸೂರಿನಲ್ಲಿ ನಡೆದ ಒಂದು ಘಟನೆಯಲ್ಲಿ ಒಬ್ಬ ಶಿಕ್ಷಕಿ ಗಾಯಗೊಂಡಿದ್ದಾರೆ. ಗಾಯತ್ರಿಪುರಂ ಚರ್ಚ್ ಬಳಿ ಕೆಟಿಎಂ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ಮಾಡಿಕೊಂಡು ಬಂದ ಮೂವರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಶಿಕ್ಷಕಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ಬಳಿಕವೂ ನಿಲ್ಲಿಸದೆ ಅಲ್ಲಿಂದ ವೇಗವಾಗಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ | Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಬಲಿ
ಜುಲೈ 18ರಂದು ಸಂಜೆ ಹೊತ್ತಿಗೆ ಈ ಶಿಕ್ಷಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ತ್ರಿಬಲ್ ರೈಡಿಂಗ್ ಮೂಲಕ ವೀಲಿಂಗ್ ಮಾಡುತ್ತಾ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ಶಿಕ್ಷಕಿಯ ತಲೆಗೆ ಗಾಯವಾಗಿದ್ದು ಅವರು ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿದ್ದರು.
ರಕ್ತದ ಮಡುವಿನಲ್ಲಿದ್ದ ಶಿಕ್ಷಕಿಯನ್ನು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಈಗಲೂ ಶಿಕ್ಷಕಿ ತೀವ್ರ ನಿಗಾ ಘಟಕದಲ್ಲಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸಿದ್ದಾರ್ಥ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.