A T Ramaswamy says to hd revanna that Hassan ticket confusion has not been resolved, what will you solve the problem of the stateKarnataka Election: ಹಾಸನ ಟಿಕೆಟ್ಟೇ ಬಗೆಹರಿದಿಲ್ಲ, ರಾಜ್ಯದ ಸಮಸ್ಯೆ ಏನು ಪರಿಹರಿಸುತ್ತೀರಿ: ರೇವಣ್ಣ ವಿರುದ್ಧ ಎ.ಟಿ. ರಾಮಸ್ವಾಮಿ ಕಿಡಿ - Vistara News

ಕರ್ನಾಟಕ

Karnataka Election: ಹಾಸನ ಟಿಕೆಟ್ಟೇ ಬಗೆಹರಿದಿಲ್ಲ, ರಾಜ್ಯದ ಸಮಸ್ಯೆ ಏನು ಪರಿಹರಿಸುತ್ತೀರಿ: ರೇವಣ್ಣ ವಿರುದ್ಧ ಎ.ಟಿ. ರಾಮಸ್ವಾಮಿ ಕಿಡಿ

Karnataka Election: ಇಡೀ ಹಾಸನ ಜಿಲ್ಲೆಯನ್ನು ಇವರ ಕುಟುಂಬದ ಆಸ್ತಿ ಮಾಡಿಕೊಳ್ಳಲು ಹೊರಟಿದ್ದಾರಾ? ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಹೊರಟಿದ್ದೀರಾ? ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಹರಿಹಾಯ್ದಿದ್ದಾರೆ.

VISTARANEWS.COM


on

A T Ramaswamy says to hd revanna that Hassan ticket confusion has not been resolved, what will you solve the problem of the state
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನ ಕ್ಷೇತ್ರದ (Karnataka Election 2023) ಟಿಕೆಟ್ ಸಮಸ್ಯೆಯನ್ನೇ ಬಗೆಹರಿಸಲು ಆಗಿಲ್ಲ, ಇನ್ನು ರಾಜ್ಯದ ಸಮಸ್ಯೆ ಏನು ಬಗೆಹರಿಸುತ್ತೀರಿ. ಜಿಲ್ಲೆಯಲ್ಲಿ ಗೊಂದಲ ಮಾಡುತ್ತಿರುವವರು ಯಾರು? ಬಿಜೆಪಿ ಮಾಡುತ್ತಿದೆಯಾ, ಬೇರೆ ಪಕ್ಷ ಮಾಡುತ್ತಿದೆಯಾ? ನಿಮ್ಮ ಸ್ವಾರ್ಥಕ್ಕಾಗಿ, ಕುಟುಂಬಕ್ಕಾಗಿ ಇಷ್ಟೆಲ್ಲ ಮಾಡುತ್ತಿದ್ದೀರಿ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ವಿರುದ್ಧ ಅರಕಲಗೂಡು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಕಿಡಿಕಾರಿದ್ದಾರೆ.

ಬಿಜೆಪಿ ಸೇರ್ಪಡೆಯಾದ ಬಳಿಕ ಮೊದಲ ಬಾರಿಗೆ ಹಾಸನ ಬಿಜೆಪಿ ಕಚೇರಿಗೆ ಬುಧವಾರ ಆಗಮಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಲೂರು ಜಾತ್ರೆಯಲ್ಲಿ ದೇವರ ಬಳಿ ರೈತರಿಗೆ, ನಾಡಿಗೆ ಒಳ್ಳೆಯದಾಗಲಿ ಎಂದು ಕೇಳಿರುವುದಾಗಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳುತ್ತಾರೆ. ಆದರೆ, ನಾನು ಬಗರ್‌ಹುಕುಂ ಸಾಗುವಳಿ ಪತ್ರ ವಿತರಣೆ ಬಗ್ಗೆ ಸಭೆ ನಡೆಸಿ ಹಕ್ಕುಪತ್ರ ನೀಡಲು ಹೋದರೆ ಮೀಟಿಂಗ್‌ಗೆ ಹೋಗಬೇಡಿ ಎಂದು ತಹಸೀಲ್ದಾರ್‌ಗೆ ಫೋನ್ ಮಾಡುತ್ತಾರೆ. ರೈತರಿಗೆ ಅನ್ನ ಕೊಡುವ ಬದಲು ಕಲ್ಲು ಹಾಕುತ್ತಾರೆ ಎಂದು ಹರಿಹಾಯ್ದರು.

ಡಿಸಿಸಿ ಬ್ಯಾಂಕ್‌ನಲ್ಲಿ ರೈತರ ಹೆಸರಿನಲ್ಲಿ ನಕಲಿ ಸಾಲ ಕೊಟ್ಟಿದ್ದಾರೆ. ರೈತರ ಹೆಸರು ಹೇಳುತ್ತಾರೆ ಆದರೆ, ಮಾಡುವುದು ಅನಾಚಾರ ಎಂದ ಅವರು, ಡಿಸಿಸಿ ಬ್ಯಾಂಕ್‌ ಬಗ್ಗೆ ಕೆಡಿಪಿ‌ ಮೀಟಿಂಗ್‌ನಲ್ಲಿ ಮಾತನಾಡಿದೆ. ರೇವಣ್ಣ ಅವರು ಮಾತನಾಡಬೇಡಿ ಅಂದರು, ಆದರೂ ಪ್ರಶ್ನೆ ಮಾಡಿದೆ. ಹಾಸನದಲ್ಲಿ ಇವತ್ತು ಏನು ನಡೆಯುತ್ತಿದೆ. ಇಡೀ ಜಿಲ್ಲೆಯನ್ನು ಇವರ ಕುಟುಂಬದ ಆಸ್ತಿ ಮಾಡಿಕೊಳ್ಳಲು ಹೊರಟಿದ್ದಾರಾ? ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಹೊರಟಿದ್ದೀರಾ? ಯಾರಿಗೋಸ್ಕರ ಕಿತ್ತಾಟ, ಅವರ ಕುಟುಂಬಕ್ಕಾಗಿ, ಸ್ವಂತಕ್ಕಾಗಿಯೇ ಎಂದು ಹರಿಹಾಯ್ದರು.

ಇದನ್ನೂ ಓದಿ: Border Dispute: ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ವಿಮೆ ಜಾರಿ ಮಾಡಬೇಕಾಗುತ್ತದೆ ಹುಷಾರ್‌ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರಿದ್ದೇನೆ

ನಾನು ಬಹಳ ಸಂತೋಷದಿಂದ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ. ಯಾವುದೇ ಷರತ್ತು, ಆಸೆ, ಆಕಾಂಕ್ಷೆ ಇಲ್ಲದೇ ಬಿಜೆಪಿ ಸೇರಿದ್ದೇನೆ. ನಾನು ಟಿಕೆಟ್ ಆಕಾಂಕ್ಷಿ ಕೂಡ ಅಲ್ಲ ಎಂಬುವುದನ್ನು ವರಿಷ್ಠರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟಪಡಿಸುತ್ತೇನೆ. ನಾನು ಬಡಜನರ ಸೇವೆ ಮಾಡಿ, ಅವರ ಪರ ಧ್ವನಿ ಎತ್ತಿದವನು. ಲೂಟಿಕೋರರು, ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ ಬಂದವನು. ವರಿಷ್ಠರು ನೀವು ದೆಹಲಿಗೆ ಬಂದೇ ಪಕ್ಷ ಸೇರ್ಪಡೆಯಾಗಬೇಕೆಂದು ಹೇಳಿದ್ದಕ್ಕೆ ಅಲ್ಲಿಗೆ ಹೋಗಿ ಬಿಜೆಪಿ ಸೇರ್ಪಡೆಯಾದೆ ಎಂದು ರಾಮಸ್ವಾಮಿ ತಿಳಿಸಿದರು.

ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯವರು ಅತ್ಯಂತ ಪ್ರೀತಿ ಗೌರವದಿಂದ ಸ್ವಾಗತ ಮಾಡಿಕೊಂಡಿದ್ದಾರೆ. ಅವರಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ ಎಂದ ಅವರು, ಎಸ್‌ಸಿ ಒಳ ಮೀಸಲಾತಿಗಾಗಿ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಎಲ್ಲರೂ ಒತ್ತಾಯ ಮಾಡಿದರು. ಜಾರಿ ಆದ ಮೇಲೆ ಜನರನ್ನು ಎತ್ತಿಕಟ್ಟುವ ಕೆಲಸ‌ವನ್ನು ವಿರೋಧ ಪಕ್ಷಗಳು ಮಾಡುತ್ತಿವೆ. ಆದರೆ, ಈ ಬಗ್ಗೆ ವಿರೋಧ ಪಕ್ಷದವರ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು. ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿ ರಾಜಕೀಯ ಪಿತೂರಿ ಮಾಡುತ್ತಿರುವುದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: Kiccha Sudeepa: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಿಚ್ಚ ಸುದೀಪ್‌ ಮೆಚ್ಚುಗೆ: ಸುದ್ದಿಗೋಷ್ಠಿಯಲ್ಲಿ ಕಿಚ್ಚ ಹೇಳಿದ್ದೇನು?

ರಾಹುಲ್‌ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹವಾಗಿದ್ದು, ಈಗ ಹೋರಾಟ ಮಾಡುತ್ತಿದ್ದಾರೆ. ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಯಾಕೆ ಹೇರಿದರು. ಜಯಪ್ರಕಾಶ್ ನಾರಾಯಣ್, ದೇವೇಗೌಡರು, ರಾಮಕೃಷ್ಣ ಹೆಗಡೆ ಅವರು ಜೈಲಿಗೆ ಹೋದರು. ಆಗ ಪ್ರಜಾಪ್ರಭುತ್ವ ಸಮಾಧಿ ಆಗಿರಲಿಲ್ಲವೇ? ಜಯಲಲಿತಾ, ಲಾಲೂ ಪ್ರಸಾದ್ ಯಾದವ್ ಅವರನ್ನು ಜೈಲಿಗೆ ಹಾಕಿದ್ದರಲ್ಲಾ ಆಗ ಪ್ರಜಾಪ್ರಭುತ್ವ ಸತ್ತಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, 2013ರಲ್ಲಿ ರಾಹುಲ್‌ ಗಾಂಧಿ ಸುಗ್ರೀವಾಜ್ಞೆ ಪತ್ರವನ್ನು ಹರಿದು ಬಿಸಾಕಿದ್ದರು. ಈಗ ಅವರ ಬುಡಕ್ಕೆ ಬಂದ ಮೇಲೆ, ನ್ಯಾಯಾಲಯದ ತೀರ್ಪು ಒಪ್ಪಿಕೊಳ್ಳದೆ ಹೋರಾಟ ಮಾಡುತ್ತಿರುವುದು ನಾಚಿಕೆಗೇಡಿನ ವಿಷಯ ಎಂದು ಹೇಳಿದರು.

ಬಿಜೆಪಿಯವರು ಅತ್ಯಂತ ಪ್ರೀತಿ, ವಿಶ್ವಾಸದಿಂದ, ಗೌರವಯುತವಾಗಿ ಆಹ್ವಾನ ಮಾಡಿದ್ದಾರೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನರೇಂದ್ರ ಮೋದಿ ಅವರು ಭಾರತವನ್ನು ಇಡೀ ವಿಶ್ವದಲ್ಲಿಯೇ ಮಾದರಿ ರಾಷ್ಟ್ರವನ್ನಾಗಿ ರೂಪಿಸುತ್ತಿದ್ದಾರೆ. ಭಾರತ ದೇಶದ ಘನತೆ, ಗೌರವವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಪಕ್ಷ ಏನು ಹೇಳುತ್ತದೋ ನಾನು ಅದನ್ನು ಮಾಡುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ವಿಷಯದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Road Accident : ಪ್ರತ್ಯೇಕ ಮೂರು ಕಡೆ ರಸ್ತೆ ಅಪಘಾತ ಸಂಭವಿಸಿದ್ದು, ಸಾವು-ನೋವು ಸಂಭವಿಸಿದೆ. ಮೈಸೂರಿನಲ್ಲಿ ದಂಪತಿ ಮೃತಪಟ್ಟರೆ, ಕೊಪ್ಪಳದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ಎಎಸ್‌ಐ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಮೈಸೂರು/ಕೊಪ್ಪಳ: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮೈಸೂರಿನ ಹೊರ ವಲಯದ ರಿಂಗ್ ರಸ್ತೆಯಲ್ಲಿ ಅಪಘಾತ ನಡೆದಿದೆ. ಚಂದ್ರು ಮತ್ತು ಪ್ರೇಮಾ ಮೃತ ದಂಪತಿ.

ಮೈಸೂರಿನ ಕೂರ್ಗಳ್ಳಿ ಗ್ರಾಮದ ನಿವಾಸಿಯಾದ ಈ ದಂಪತಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಗ್ಯಾಸ್‌ ಟ್ಯಾಂಕರ್‌ ಬೈಕ್‌ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ದಂಪತಿ ಮೇಲೆ ಹರಿದಿದೆ. ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ರಸ್ತೆ ಪೂರ್ತಿ ರಕ್ತಸಿಕ್ತವಾಗಿತ್ತು. ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಕೊಪ್ಪಳದಲ್ಲಿ ಅಪರಿಚಿತ ವಾಹನಕ್ಕೆ ಎಎಸ್‌ಐ ಸಾವು

ಅಪರಿಚಿತ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ರಾಮಣ್ಣ(55) ಮೃತ ದುರ್ದೈವಿ.

ಮುನಿರಾಬಾದ ಪೊಲೀಸ್ ಠಾಣೆಯಲ್ಲಿ‌ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಣ್ಣ ಅವರು ಹೆದ್ದಾರಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಕರ್ತವ್ಯ‌ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಿಂದ ರಾಮಣ್ಣ ಮೃತಪಟ್ಟಿದ್ದಾರೆ. ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ಮಾಡಿ ಪರಾರಿ ಆಗಿರುವವರಿಗಾಗಿ ಹುಡುಕಾಟ ನಡೆದಿದೆ.

ಬ್ರೇಕ್‌ ಫೇಲ್‌ ಆಗಿ ಹೊಲಕ್ಕೆ ನುಗ್ಗಿದ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್‌ವೊಂದು ಹೊಲಕ್ಕೆ ನುಗ್ಗಿದೆ. ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿ ಘಟನೆ ನಡೆದಿದೆ. ಧಾರವಾಡದಿಂದ ಕರಡಿಗುಡ್ಡದ ಗ್ರಾಮಕ್ಕೆ ಹೊರಟಿದ್ದ ಬಸ್‌ನ ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ ಗ್ರೇಟ್‌ ಎಸ್ಕೇಪ್‌

ಚಿಕ್ಕಮಗಳೂರಿನಲ್ಲಿ ಲಾರಿ ಚಾಲಕರೊಬ್ಬರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಪ್ರಪಾತಕ್ಕೆ ಬಿದ್ದರೂ ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾರೆ. ನಿರಂತರ ಮಳೆಗೆ ನೆಮ್ಮಾರು ಸಮೀಪದ ರಸ್ತೆ ಕುಸಿದು, ಲಾರಿಯೊಂದು ಸುಮಾರು 50 ಅಡಿ ಆಳದಲ್ಲಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಶೃಂಗೇರಿ ನೆಮ್ಮಾರು ಬಳಿ ರಸ್ತೆ ಕುಸಿದ ಪರಿಣಾಮ ಲಾರಿಯು ಪ್ರಪಾತಕ್ಕೆ ಬಿದ್ದಿದೆ. ನೆಮ್ಮಾರು ವ್ಯಾಪ್ತಿಯ ಹೊಸದೇವರಹಡ್ಳು ಸಮೀಪದಲ್ಲಿ ಘಟನೆ ನಡೆದಿದೆ.

ಕರೆಂಟ್‌ ಶಾಕ್‌ಗೆ ಕೋತಿಗಳು ಸಾವು

ವಿದ್ಯುತ್ ಸ್ಪರ್ಸ್‌ದಿಂದ ಕೋತಿಗಳು ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಎರಡು ಕೋತಿಗಳು ಸಾವನ್ನಪ್ಪಿವೆ. ಇತ್ತ ಗ್ರಾಮಸ್ಥರು ಕೋತಿಗಳಿಗೆ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ ನಡೆಸಿದರು. ಇದಕ್ಕೂ ಮೊದಲು ಆಟೋದಲ್ಲಿ ಮೆರವಣಿಗೆ ಮಾಡಿ ಜೈ ಭಜರಂಗಿ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಬಳಿಕ ಹಳೇ ಕುಂದುವಾಡದಲ್ಲಿ ಅಂತ್ಯಕ್ರಿಯೆ ನಡೆಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Self Harming : ಆನೇಕಲ್‌ನಲ್ಲಿ ಸರ್ಕಾರಿ ಆಸ್ಪತ್ರೆಯ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self Harming
Koo

ಆನೇಕಲ್: ಸರ್ಕಾರಿ ಆಸ್ಪತ್ರೆಯ ಮಹಡಿ ಮೇಲಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಜಿಗಣಿ ನಿವಾಸಿ ಮುನಿಯಲ್ಲಪ್ಪ (46) ಮೃತ ದುರ್ದೈವಿ,.

ಮುನಿಯಲ್ಲಪ್ಪ ಅಸ್ತಮಾ, ಹೊಟ್ಟೆನೋವು, ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಜು. 16ರಂದು ಸರ್ಕಾರಿ ಆಸ್ಪತ್ರೆಗೆ ಹೋದವರು ದಾಖಲಾಗದ್ದರು. ಆದರೆ ಅಡ್ಮಿಟ್ ಆದ ಒಂದೇ ದಿನಕ್ಕೆ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಇದಾದ ಬಳಿಕ ಅನಾರೋಗ್ಯ ಮತ್ತಷ್ಟು ಬಿಗಾಡಯಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ ಆಸ್ಪತ್ರೆಗೆ ಮುನಿಯಲ್ಲಪ್ಪ ಬಂದಿದ್ದರು.

ಈ ವೇಳೆ ಆಸ್ಪತ್ರೆಯ ಎರಡನೇ ಮಹಡಿಗೆ ಬಂದು ಏಕಾಏಕಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ತುಮಕೂರು: ಗಂಡ ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಪರ ಪುರುಷನೊಂದಿಗೆ (Illicit relationship) ಓಡಿ ಹೋಗಿದ್ದಾಳೆ. ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ದೇವರಾಜ್ ಮೃತ ದುರ್ದೈವಿ. ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ.

ದೇವರಾಜ್‌ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಮೇಲೆ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಟ್ಟಿಗೆ ಪರಾರಿ ಆಗಿದ್ದಾಳೆ.

ಪರ ಪುರುಷನೊಂದಿಗೆ ಪತ್ನಿ ಓಡಿ ಹೋದ ಸುದ್ದಿ ತಿಳಿದ ದೇವರಾಜ್‌ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿ ಮೋದಿ, ಕುಮಾರಸ್ವಾಮಿ, ಡಿಸಿ-ಎಸ್ಪಿಗೆ ನನ್ನ ಸಾವಿಗೆ ನ್ಯಾಯಕೊಡಿಸಿ ಎಂದು ದೇವರಾಜ್‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

ಮಾಧವಿಯನ್ನು 17 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದೆ. ಹೊಸಹಳ್ಳಿಯಲ್ಲಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೆ. ನಮಗೆ 16 ಹಾಗೂ 12 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿ ನಿತ್ಯ ಅಂಗಡಿಯ ಬಳಿ ಬರುತ್ತಿದ್ದ ಆನಂದ್ ಕುಮಾರ್, ಈ ವೇಳೆ ಮಾಧವಿಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಪರಾರಿ ಆಗಿದ್ದಾನೆ ಎಂದು ಬರೆದಿದ್ದಾರೆ.

ಪತ್ನಿ ಓಡಿ ಹೋಗಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ದೇವರಾಜ್, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟು, ತನಗೆ ಆನಂದ್‌ನಿಂದ ಜೀವ ಬೆದರಿಕೆ ಹಾಕಿದ್ದ ಎಂದು ಉಲ್ಲೇಖಿಸಿದ್ದಾರೆ. ಇಬ್ಬರಿಗೂ ತಕ್ಕ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಾಧವಿ, ಆನಂದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪ ಮೇಲೆ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಧವಿ, ಆನಂದ್ ತಲೆಮರೆಸಿಕೊಂಡಿದ್ದಾರೆ. ಇತ್ತ ತಾಯಿ ಇಲ್ಲದೇ ತಂದೆಯನ್ನು ಕೆಳದುಕೊಂಡ ಇಬ್ಬರು ಹೆಣ್ಮಕ್ಕಳು ತಬ್ಬಲಿಗಳಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Assembly Session: ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅಬ್ಬರ; ತಲೆ ನಿಯಂತ್ರಣದಲ್ಲಿ ಇಲ್ವಾ ಎಂದ ಸ್ಪೀಕರ್‌!

Assembly Session: ಸದನದಲ್ಲಿ ವಿಪಕ್ಷ ನಾಯಕರ ವಿರುದ್ಧ ಮುಗಿಬಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ರನ್ನು ನಿಯಂತ್ರಿಸಲು ಸ್ಪೀಕರ್‌ ಯು.ಟಿ.ಖಾದರ್‌ ಹೈರಾಣಾದರು. ಕುಳಿತುಕೊಳ್ಳಿ ಎಂದು ಹೇಳುತ್ತಿದ್ದರೂ ಮಾತು ಕೇಳದ ಹಿನ್ನೆಲೆಯಲ್ಲಿ ಸ್ಪೀಕರ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ಬಿಜೆಪಿ ವಿರುದ್ಧ ಸದನದಲ್ಲೂ (Assembly Session) ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಾಗ್ದಾಳಿ ಮುಂದುವರಿಸಿದ್ದಾರೆ. ಮಳೆ ಹಾನಿ, ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂಬ ಸೂಚನೆ ನಡುವೆಯೂ, ಬಿಜೆಪಿ ಅವಧಿಯ ಹಗರಣಗಳ ಪಟ್ಟಿ ಓದುತ್ತಾ ಪ್ರದೀಪ್ ಈಶ್ವರ್ ಸದ್ದು ಮಾಡಿದ್ದರಿಂದ ಅವರನ್ನು ಮನವೊಲಿಸಲು ಸ್ಪೀಕರ್‌ ಹೈರಾಣಾದರು. ಕುಳಿತುಕೊಳ್ಳಿ ಎಂದು ಹೇಳುತ್ತಿದ್ದರೂ ಮಾತು ಕೇಳದ ಹಿನ್ನೆಲೆಯಲ್ಲಿ “ಏನಾಗಿದೆ ಇವರಿಗೆ, ಕೈಗೆ ಕಬ್ಬಿಣ ಏನಾದರೂ ಕೊಡ್ರಿ, ತಲೆ ನಿಯಂತ್ರಣದಲ್ಲಿ ಇಲ್ವಾ?” ಎಂದು ಸ್ಪೀಕರ್‌ ಯು.ಟಿ.ಖಾದರ್ ಅಸಮಾಧಾನ ಹೊರಹಾಕಿದ್ದಾರೆ.

ಸ್ಪೀಕರ್‌ ಯು.ಟಿ.ಖಾದರ್ ಒತ್ತಾಯ ಮಾಡುತ್ತಿದ್ದರೂ ಮಾತು ನಿಲ್ಲಿಸದಿದ್ದರಿಂದ ಕೊನೆಗೆ ಪ್ರದೀಪ್ ಈಶ್ವರ್ ಬಳಿ ಸರ್ಕಾರಿ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೋಗಿ ಕುಳಿತುಕೊಳ್ಳುವಂತೆ ಕೈ ಮುಗಿದು ಮನವಿ ಮಾಡಿದರು. ನಂತರ ಪ್ರದೀಪ್ ಬಳಿ ಹೋಗಿ ಕುಳಿತುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಆಗ ಪ್ರದೀಪ್ ಈಶ್ವರ್‌ಗೆ ಬಿಜೆಪಿ ಸದಸ್ಯರು ಛೇಡಿಸಿದರು.

ಪ್ರದೀಪ್ ಈಶ್ವರ್ ಹೇಡಿ ಅಲ್ಲಾ, ಪ್ರದೀಪ್ ಈಶ್ವರ್ ಯು ಕೆನ್ ಡು ಇಟ್ ಎಂದು ಬಿಜೆಪಿ ಶಾಸಕರು ಕೂಗುತ್ತಾ ಛೇಡಿಸಿದರು. ಈ ವೇಳೆ ಬಿಜೆಪಿ ಶಾಸಕರು ಹಾಗೂ ಪ್ರದೀಪ್ ಈಶ್ವರ್ ನಡುವೆ ಮಾತಿನ ಚಕಮಕಿ ಉಂಟಾಯಿತು. ಆಗ ಪ್ರದೀಪ್ ಈಶ್ವರ್‌ನ ಸಮಾಧಾನ ಮಾಡಲು ಶಾಸಕ ನಾರಾಯಣ ಸ್ವಾಮಿ ಧಾವಿಸಿ ಹೋದರು.

ಈ ವೇಳೆ ವಿಪಕ್ಷನಾಯಕ ಆರ್‌.ಅಶೋಕ್‌ ಗರಂ ಆಗಿ, ಏನು ಬೆದರಿಕೆ ಹಾಕುತ್ತೀರಾ? ಪ್ರದೀಪ್ ಈಶ್ವರ್‌ನ ಕಂಟ್ರೋಲ್ ಮಾಡಕ್ಕೆ ಆಗಲ್ಲವೇ? ಕಾಂಗ್ರೆಸ್‌ನ ಮಾನ ಮರ್ಯಾದೆ ಎಲ್ಲ ಹೊರಟೇ ಹೋಯಿತು. ಪ್ರದೀಪ್ ಈಶ್ವರ್ ಯು ಕೆನ್ ಡು ಇಟ್ ಎಂದು ಕೂಗಿದರು.

ಗದ್ದಲದ ನಡುವೆಯೇ ಬಿಜೆಪಿ ವಿರುದ್ಧ ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು. ಬಿಜೆಪಿಯವರನ್ನು ಸದನದಿಂದ ಹೊರಗೆ ಹಾಕಿ ಎಂದು ಶ್ರೀನಿವಾಸ ಆಗ್ರಹಿಸಿದರು. ಈ ವೇಳೆ ಬಿಜೆಪಿ ಅವಧಿಯ ಹಗರಣಗಳ ಪಟ್ಟಿಯನ್ನು ಪ್ರದೀಪ್ ಈಶ್ವರ್ ಓದಿದರು. ಈ ವೇಳೆ ಬಿಜೆಪಿ ಸದಸ್ಯರು ಬಂಡಲ್ ಬಂಡಲ್ ಎಂದು ಕೂಗುತ್ತಾ ಸದನದ ಬಾವಿಯಿಂದಲೇ ಸನ್ನೆ ಮಾಡಿ ಕಿಚಾಯಿಸಿದರು.

ಈ ವೇಳೆ ಬಿಜೆಪಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರದೀಪ್ ಈಶ್ವರ್, ಸ್ಪೀಕರ್ ಮನವಿಗೂ ಜಗ್ಗದೇ ಬಿಜೆಪಿ ವಿರುದ್ಧ ಹರಿಹಾಯ್ದರು. ಕೊನೆಗೆ ಬಲವಂತವಾಗಿ ಪ್ರದೀಪ್ ಈಶ್ವರ್‌ರನ್ನು ಕಾಂಗ್ರೆಸ್ ಶಾಸಕರಾದ ಎಸ್.‌ಎನ್. ನಾರಾಯಣಸ್ವಾಮಿ ಮತ್ತು ಜಿ.ಎಚ್. ಶ್ರೀನಿವಾಸ್ ಸುಮ್ಮನಿರಿಸಿದರು. ಕುಳಿತುಕೊಂಡರೂ ಮತ್ತೆ ಬಿಜೆಪಿ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸುತ್ತಿದ್ದರು. ಆಗ ಪ್ರದೀಪ್ ನಡೆಗೆ ಸ್ಪೀಕರ್‌ ಕೂಡ ತೀವ್ರ ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

ಈ ವೇಳೆ ಸರ್ಕಾರ ಗೂಂಡಾಗಿರಿ ಮಾಡುತ್ತಿದೆ, ಆಡಳಿತ ಪಕ್ಷದವರಿಗೇ ಮಾತನಾಡಲು ಬಿಡುತ್ತಿಲ್ಲ. ಪ್ರದೀಪ್ ಈಶ್ವರ್ ಟ್ಯಾಲೆಂಟ್ ಏನು? ಆದರೆ, ಅವರಿಗೆ ಮಾತನಾಡಲೂ ಸರ್ಕಾರ ಬಿಡುತ್ತಿಲ್ಲ ಎಂದ ವಿಪಕ್ಷ ನಾಯಕ ಅಶೋಕ್ ಸದನದಲ್ಲಿ ಲೇವಡಿ ಮಾಡಿದರು.

Continue Reading

ಪ್ರಮುಖ ಸುದ್ದಿ

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Lokayukta Raid: ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

VISTARANEWS.COM


on

lokayukta raid akhtar ali
ಅಖ್ತರ್‌ ಅಲಿ ಮನೆಯಿಂದ ವಶಪಡಿಸಿಕೊಂಡ ಚಿನ್ನಾಭರಣ ಮತ್ತು ನಗದು
Koo

ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ಈ ಸಂದರ್ಭ ಬೆಂಗಳೂರಿನಲ್ಲಿ ಅಖ್ತರ್‌ ಅಲಿ ಎಂಬ ಅಧಿಕಾರಿಯ ಮನೆಗೆ ಅಧಿಕಾರಿಗಳು ದಾಳಿ ನಡೆಸಿದಾಗ ಆತ ಚಿನ್ನಾಭರಣಗಳನ್ನು (Gold Jewelry) ಪಕ್ಕದ ಮನೆಗೆ (neighbour house) ಎಸೆದು ಪಾರಾಗಲು ನೋಡಿದ್ದಾರೆ! ಇದನ್ನೂ ಲೋಕಾಯುಕ್ತ ಅಧಿಕಾರಿಗಳು (Lokayukta Officers) ವಶಪಡಿಸಿಕೊಂಡಿದ್ದಾರೆ.

ಭೂಮಾಪನ ಇಲಾಖೆ ಡೆಪ್ಯೂಟಿ ಕಂಟ್ರೋಲರ್ ಅಖ್ತರ್ ಅಲಿ ಮನೆಗೆ ದಾಳಿ ನಡೆಸಿದಾಗ ಈ ಘಟನೆ ನಡೆಯಿತು. ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

ಬ್ಯಾಗ್ ಎಸೆದದ್ದನ್ನು ನೋಡಿ ನೆರೆ ಮನೆ ನಿವಾಸಿ ಖುದ್ದು ಅಧಿಕಾರಿಗಳನ್ನು ಕರೆದು ತೋರಿಸಿದ್ದಾರೆ. ಕೂಡಲೇ ಹೋಗಿ ಪರಿಶೀಲನೆ ಮಾಡಿದಾಗ ಬ್ಯಾಗ್‌ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ಕೂಡಲೇ ಬ್ಯಾಗನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬ್ಯಾಗನ್ನು ಅಖ್ತರ್ ಆಲಿ ಮನೆಗೆ ತಂದು ಪರಿಶೀಲನೆ ಮಾಡಿದಾಗ, ಒಂದು ಬ್ಯಾಗ್ ತುಂಬಾ ಚಿನ್ನದ ಒಡವೆಗಳು ಇರುವುದು ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಚಿನ್ನ ತೂಕ ಹಾಕಲು ಸಿಬ್ಬಂದಿಯನ್ನು ಕರೆಸಲಾಗಿದೆ. ಅಖ್ತರ್‌ ಅಲಿ ಅಕ್ಕಪಕ್ಕದ ಮನೆಯಲ್ಲೂ ಅಧಿಕಾರಿಗಳ ತಂಡ ತಲಾಶ್ ಮಾಡಿದೆ.

ದಾಳಿ ವೇಳೆ ಮನೆಯಲ್ಲೇ ಇದ್ದ ಅಖ್ತರ್ ಆಲಿಯ ಬಳಿಯಿಂದ ಸದ್ಯ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತಂಡ ಪರಿಶೀಲನೆ ಮಾಡುತ್ತಿದೆ. ಕೆಲವು ದಾಖಲೆಗಳನ್ನೂ ಪಕ್ಕದ ಮನೆಯ ಕಿಟಕಿಯ ಮೂಲಕ ಅಲಿ ತಳ್ಳಿರುವ ಶಂಕೆ ಇದೆ. ಹೀಗಾಗಿ ಪಕ್ಕದ ಮನೆಯನ್ನೂ ಶೋಧ ನಡೆಸಲಾಗಿದೆ. ಇದುವರೆಗೆ ಅಖ್ತರ್ ಅಲಿ ಮನೆಯಲ್ಲಿ 25 ಲಕ್ಷ ರೂ. ನಗದು, 2.20 ಕೆಜಿ ಚಿನ್ನಾಭರಣ, 2 ಕೆಜಿ ಬೆಳ್ಳಿ ವಸ್ತುಗಳು, ಐವತ್ತಕ್ಕೂ ಹೆಚ್ಚು ದುಬಾರಿ ವಾಚ್‌ಗಳು, ಲಕ್ಷಾಂತರ ಮೌಲ್ಯದ ಡೈಮಂಡ್ ಆಭರಣಗಳು ಪತ್ತೆಯಾಗಿವೆ.

ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ʼಇವತ್ತು ಬೆಂಗಳೂರು ಸಿಟಿ ಘಟಕದಿಂದ ಮೂರು ಆಫೀಸರ್ಸ್ ಮನೆ ದಾಳಿ ಮಾಡಲಾಗಿದೆ. ಅಖ್ತರ್ ಅವರ ಮನೆಯಲ್ಲೂ ಚಿನ್ನಾಭರಣ ಸಿಕ್ಕಿದೆ. ಈಗಾಗಲೇ 2.2 ಕೆಜಿ ಚಿನ್ನಾಭರಣ, 25 ಲಕ್ಷ ಹಣ ಸಿಕ್ಕಿದೆ. ಅವರು ಚಿನ್ನದ ಬ್ಯಾಗನ್ನು ಪಕ್ಕದ ಮನೆಗೆ ಎಸೆದಿದ್ದಾರೆ. ಅದನ್ನು ಕೂಡ ನಮ್ಮ ಟೀಂ ರಿಕವರಿ ಮಾಡಿದೆ. ಸದ್ಯ ಇನ್ನೂ ಪರಿಶೀಲನೆ ಮುಂದುವರೆದಿದೆ. ಬಿ.ಕೆ ರಾಜ ಹಾಗೂ ರಮೇಶ್ ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ಮುಂದುವರೆದಿದೆʼ ಎಂದಿದ್ದಾರೆ.

ಯಾವ ಅಧಿಕಾರಿಗಳ ಮೇಲೆ ದಾಳಿ?

ತುಮಕೂರು – ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್
ಯಾದಗಿರಿ – ಬಲವಂತ್ ಯೋಜನ ನಿರ್ದೇಶಕ , ಯಾದಗಿರಿ ಜಿಲ್ಲಾ ಪಂಚಾಯತ್
ಬೆಂಗಳೂರು ಗ್ರಾಮಾಂತರ – ಸಿದ್ದಪ್ಪ ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ನರಸಿಂಹ ಮೂರ್ತಿ ಕೆ – ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ
ಬೆಂಗಳೂರು ಸಿಟಿ – ಬಿವಿ ರಾಜ ಎಫ್‌ಡಿಎ ಕೆಐಎಡಿಬಿ
ಬೆಂಗಳೂರು ಸಿಟಿ – ರಮೇಶ್ ಕುಮಾರ್ ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು ಸಿಟಿ- ಅಕ್ತರ್ ಅಲಿ – ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ
ಶಿವಮೊಗ್ಗ – ಸಿ ನಾಗೇಶ್ – ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ
ಶಿವಮೊಗ್ಗ ಪ್ರಕಾಶ್ – ಡೆಪ್ಯೂಟಿ ಡೈರೆಕ್ಟರ್ – ತೋಟಗಾರಿಕಾ ಇಲಾಖೆ
ಬೆಂಗಳೂರು ಸಿಟಿ – ಚೇತನ್ ಕುಮಾರ್ – ಕಾರ್ಮಿಕ‌ ಇಲಾಖೆ ಅಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ಸಿಟಿ – ಆನಂದ್ ಸಿ ಎಲ್ – ಕಮೀಷನರ್ ಮಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು ಸಿಟಿ – ಮಂಜುನಾಥ್ ಟಿ ಆರ್ – ಎಫ್ ಡಿಎ ಬೆಂಗಳೂರು‌ ನಾರ್ತ್ ಸಬ್ ಡಿವಿಷನ್ ಆಫೀಸರ್

ಇದನ್ನೂ ಓದಿ: Lokayukta Raid: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

Continue Reading
Advertisement
Wedding FilmerVishal Punjabi recent chat
ಬಾಲಿವುಡ್11 mins ago

Vishal Punjabi: ಮದುವೆಯಾದ 2 ತಿಂಗಳಿಗೆ ಪತ್ನಿಗೆ ಮೋಸ ಮಾಡಿ, ಇನ್ನೊಬ್ಬಳ ಜತೆ ಈ ನಟ ಬೆತ್ತಲೆಯಾಗಿ ಸಿಕ್ಕಿಬಿದ್ದಿದ್ದನಂತೆ!

Supreme Court
ದೇಶ15 mins ago

Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ

Paris Olympics 2024:
ಪ್ರಮುಖ ಸುದ್ದಿ27 mins ago

Paris Olympics 2024 : ಸಿಗರೇಟ್​ ಸೇದಿದ ಕಾರಣಕ್ಕೆ ಒಲಿಂಪಿಕ್ಸ್​ ಸರ್ಧೆಯ ಅವಕಾಶ ಕಳೆದುಕೊಂಡ ಜಪಾನ್​ ಮಹಿಳಾ ಜಿಮ್ನಾಸ್ಟಿಕ್ ಪಟು

School Transfer Certificate
ದೇಶ27 mins ago

School Transfer Certificate: ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಮಹತ್ವದ ತೀರ್ಪು

Road Accident
ಮೈಸೂರು28 mins ago

Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Khalistani Terrorist
ಕ್ರೈಂ37 mins ago

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

Suryakumar Yadav
ಕ್ರಿಕೆಟ್55 mins ago

Suryakumar Yadav: ಸೂರ್ಯಕುಮಾರ್​ಗೆ ನಾಯಕತ್ವ ಒಲಿದದ್ದು ಕಾಪು ಮಾರಿಯಮ್ಮನ ಆಶೀರ್ವಾದದಿಂದ!

Trinity Golf Champions League
ಪ್ರಮುಖ ಸುದ್ದಿ57 mins ago

Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

OTT Releases
Latest58 mins ago

OTT Releases : ಈ ವಾರ ಥಿಯೇಟರ್ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿವೆ ಈ ಚಿತ್ರಗಳು; ಟ್ರೇಲರ್‌ ನೋಡಿ

Self Harming
ಬೆಂಗಳೂರು ಗ್ರಾಮಾಂತರ1 hour ago

Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ23 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌