ರಾಮನಗರ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ರಾಷ್ಟ್ರೀಯ ಹೆದ್ದಾರಿ 75ರ ಪಕ್ಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ವಿಡಿಯೊ ಮಾಡಿ ಮನದಾಳದ ನೋವನ್ನು ಹಂಚಿಕೊಂಡಿದ್ದಾನೆ.
ಮೂಲತಃ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಕುಂಬೆನಹಳ್ಳಿ ಗ್ರಾಮದ ಗೋಪಾಲ(25) ಮೃತ ಯುವಕ. ಈತ ಐಟಿಐ ವಿದ್ಯಾಭ್ಯಾಸ ಮುಗಿಸಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನನ್ನ ಸಾವಿಗೆ ನಾನೇ ಕಾರಣ ಎಂದು ವಿಡಿಯೊದಲ್ಲಿ ಯುವಕ ಹೇಳಿದ್ದಾನೆ. ಆದರೆ ಸಂಬಂಧಿಕರು, ಎಲ್‌ಎಲ್‌ಬಿ ವ್ಯಾಸಂಗಕ್ಕೆ ಸೀಟ್ ಸಿಗದ ಕಾರಣ ಯುವಕ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.
ಕುದೂರು ಹೊರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ | Murder Attempt | ಮಂಗಳೂರಲ್ಲಿ ವ್ಯಕ್ತಿ ಮೇಲೆ ಗಾಂಜಾ ಗ್ಯಾಂಗ್‌ನಿಂದ ದಾಳಿ, ಕೊಲೆ ಯತ್ನ