ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಖಾಸಗಿ ಡ್ರೈವರ್‌ಗಳಿಂದ 25 ವರ್ಷದ ಯುವತಿಯ ಮೇಲೆ ಅತ್ಯಾಚಾರ (Sexual Assault) ನಡೆದಿದ್ದು, ಪ್ರಕರಣ ದಾಖಲಾಗಿದೆ.
ಕೆಲಸಕ್ಕಾಗಿ ಹುಡುಕುತ್ತಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಖಾಸಗಿ ಟ್ರಾವಲ್ಸ್‌ನಲ್ಲಿ ಕೆಲಸ ಮಾಡುವ ಇಬ್ಬರು ಡ್ರೈವರ್‌ಗಳು ಆಕೆ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಅಖಿಲೇಶ್ ಮತ್ತು ದೀಪು ಎಂಬ ಆರೋಪಿಗಳು ಯುವತಿಯನ್ನು ಪರಿಚಯ ಮಾಡಿಕೊಂಡ ನಂತರ ಮೂವರು ಎಚ್‌ಎಎಲ್ ಬಳಿಯ ಖಾಲಿ ಮೈದಾನಕ್ಕೆ ಯುವತಿಯನ್ನು ಕರೆದುಕೊಂಡು ಹೋಗಿದ್ದರು. ಅಲ್ಲಿಯೇ ಊಟ ಮಾಡಿ, ಮದ್ಯ ಸೇವನೆ ಮಾಡಿ ನಂತರ ಯುವತಿಗೂ ಮದ್ಯ ಸೇವನೆ ಮಾಡಿಸಿದ್ದರು. ಬಳಿಕ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಅತ್ಯಾಚಾರ ಯತ್ನ ಕೇಸಿನಲ್ಲಿ ಬಸವರಾಜ್ ದಂಪತಿಗೆ ನಿರೀಕ್ಷಣಾ ಜಾಮೀನು
ಈ ಬಗ್ಗೆ ಯುವತಿ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.