Abhishek Ambareesh and Aviva Bidapa reception in Bangalore Celebrities wish the newlyweds Abhishek Ambareesh Reception: ಅಭಿಷೇಕ್- ಅವಿವ ಜೋಡಿಗೆ ಶುಭ ಕೋರಿದ ಗಣ್ಯರು; ಹೇಗಿತ್ತು ನೋಡಿ ವೈಭವದ ಆರತಕ್ಷತೆ! - Vistara News

ಕರ್ನಾಟಕ

Abhishek Ambareesh Reception: ಅಭಿಷೇಕ್- ಅವಿವ ಜೋಡಿಗೆ ಶುಭ ಕೋರಿದ ಗಣ್ಯರು; ಹೇಗಿತ್ತು ನೋಡಿ ವೈಭವದ ಆರತಕ್ಷತೆ!

Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ನವ ದಂಪತಿಯ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ನೆರವೇರಿತು.

VISTARANEWS.COM


on

CM siddaramaiah in Abhishek Ambareesh and Aviva Bidapa reception
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿವಾಹ ಜೀವನಕ್ಕೆ ಕಾಲಿಟ್ಟಿರುವ ನವದಂಪತಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ (Abhishek Ambareesh Reception) ನಗರದ ಅರಮನೆ ಮೈದಾನದಲ್ಲಿ ಬುಧವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ಚಿತ್ರರಂಗದ ಗಣ್ಯರು ಮತ್ತು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಪ್ರಮುಖ ರಾಜಕೀಯ ನಾಯಕರು ಆಗಮಿಸಿ ನವದಂಪತಿಗೆ ಶುಭ ಹಾರೈಸಿದರು. ಇದೇ ವೇಳೆ ಅತಿಥಿಗಳಿಗೆ ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಜೂನ್‌ 5ರಂದು ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ವಿವಾಹ ನೆರವೇರಿತ್ತು. ಹೀಗಾಗಿ ಬುಧವಾರ ಆರತಕ್ಷತೆ ಹಮ್ಮಿಕೊಳ್ಳಲಾಗಿತ್ತು. ವೈಟ್ ಶೇರ್ವಾಣಿಯಲ್ಲಿ ಅಭಿ, ಗೋಲ್ಡ್‌ ಕಲರ್ ಸೀರೆಯಲ್ಲಿ ಅವಿವ ಬಿಡಪ ಮಿಂಚುತ್ತಿದ್ದರು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಸ್‌.ಎಂ.ಕೃಷ್ಣ, ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ, ಗುಲಾಂ ನಬಿ ಆಜಾದ್, ಸಚಿವ ಕೆ.ಜೆ.ಜಾರ್ಜ್‌ ಸೇರಿ ಹಲವು ರಾಜಕೀಯ ನಾಯಕರು ಭಾಗವಹಿಸಿ ನವದಂಪತಿಗೆ ಶುಭ ಹಾರೈಸಿದರು.

ಅದೇ ರೀತಿ ಚಿತ್ರ ರಂಗದ ನಟ, ನಟಿಯರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ತೆಲುಗು ಸ್ಟಾರ್‌ ನಟ ಮೆಗಾಸ್ಟಾರ್‌ ಚಿರಂಜೀವಿ, ನಟ, ರಾಜಕಾರಣಿ ಶತ್ರುಜ್ಞ ಸಿನ್ಹಾ, ಸ್ಯಾಂಡಲ್‌ವುಡ್‌ ನಟ ರವಿಚಂದ್ರನ್‌, ನಟಿ ರಮ್ಯಾ, ತಮಿಳು ನಟ ಪ್ರಭು ಗಣೇಶನ್‌, ರಾಘವೇಂದ್ರ ರಾಜಕುಮಾರ್‌, ನಟಿ ಖುಷ್ಬೂ ಸುಂದರ್‌, ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿ ಹಲವರು ಹಾಜರಾಗಿದ್ದರು.

ಇದನ್ನೂ ಓದಿ | Abhishek Ambareesh Wedding: ಅಭಿಷೇಕ್‌ ಅಂಬರೀಶ್‌-ಅವಿವ ಮದುವೆಯ ಸುಂದರ ಕ್ಷಣಗಳು

ಅದ್ಧೂರಿ ಆರತಕ್ಷತೆಯ ಚಿತ್ರಾವಳಿ

ಇದನ್ನೂ ಓದಿ | Abhishek Ambareesh Wedding: ದೀರ್ಘಕಾಲದ ಗೆಳತಿಗೆ ಮಾಂಗಲ್ಯ ಧಾರಣೆ ಮಾಡಿದ ಅಭಿಷೇಕ್ ಅಂಬರೀಶ್‌


ಅಕರ್ಷಣೀಯ ಕ್ರಿಸ್ಟಲ್‌ ಶಾಗ್ಲಿಯರ್‌ ವೇದಿಕೆ

Abhishek Ambareesh and Aviva Bidapa reception stage in palace ground

ಸುಮಲತಾ ಅಂಬರೀಶ್‌ ಅವರ ಆಸೆಯಂತೇ ಅರಮನೆ ಮೈದಾನದ ತ್ರಿಪುರ ವಾಸಿನಿ ಆವರಣದಲ್ಲಿ ಅದ್ಧೂರಿಯಾಗಿ ಪರ್ಪಲ್ ಮತ್ತು ಬ್ಲ್ಯೂ ಥೀಮ್​ನಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ವೇದಿಕೆಯನ್ನು ಇಂಡಿಯನ್‌ ಕ್ರಿಸ್ಟಲ್‌ ಶಾಗ್ಲಿಯರ್‌ ವಿನ್ಯಾಸದಲ್ಲಿ 300 ಶಾಗ್ಲಿಯರ್ಸ್‌ ಹಾಗೂ 72 ಅಡಿ ಅಗಲ, 32 ಅಡಿ ಉದ್ದದ ಶಾಗ್ಲಿಯರ್‌ಗಳನ್ನು ಬಳಸಿಕೊಂಡು ನಿರ್ಮಾಣ ಮಾಡಲಾಗಿತ್ತು. ಇದಕ್ಕೆ ಹೂವು ಹಾಗೂ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ದೇಶದಲ್ಲಿ ಇದೇ ಮೊದಲ ಬಾರಿ ಇಂತಹ ವೇದಿಕೆ ಸಿದ್ಧಪಡಿಸಲಾಗಿದೆ ಎಂಬ ಮಾಹಿತಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

Self Harming : ಮದುವೆಯಾಗಿ 5 ವರ್ಷವಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಲ್ಲಿಯೇ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಕುಟುಂಬಸ್ಥರು ಮಕ್ಕಳಾಗಿಲ್ಲ ಎಂದು ಮಹಿಳೆಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ನೊಂದು ಮಹಿಳೆ ಶೌಚಾಲಯದಲ್ಲಿ ವೈರ್‌ನಿಂದ ಕತ್ತು ಬಿಗಿದುಕೊಂಡು ಮೃತಪಟ್ಟಿದ್ದಾರೆ.

VISTARANEWS.COM


on

By

Self Harming In chitradurga
Koo

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಕೇಸರಿ ಬಟ್ಟೆ ಧರಿಸಿದ್ದಕ್ಕೆ ಶಾಲೆಯಲ್ಲಿ ಆಕ್ಷೇಪ; ತೆರೆಸಾ ಶಾಲೆ ಮೇಲೆ ಹಿಂದು ಕಾರ್ಯಕರ್ತರ ದಾಳಿ!

ಬ್ರೇಕಪ್‌ ಬಳಿಕ ಹುಡುಗ ಆತ್ಮಹತ್ಯೆ ಮಾಡಿಕೊಂಡರೆ ಪ್ರಿಯತಮೆ ಹೊಣೆ ಅಲ್ಲ; ಕೋರ್ಟ್‌ ಆದೇಶ

ನವದೆಹಲಿ: ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದೋ, ಮನಸಾರೆ ಇಷ್ಟಪಟ್ಟವಳು ಇನ್ನೊಬ್ಬನ ಪಕ್ಕದಲ್ಲಿ ಹಸೆಮಣೆ ಮೇಲೆ ಕೂತುಕೊಳ್ಳುತ್ತಾಳೆ ಎಂಬುದನ್ನು ಕಲ್ಪನೆ ಮಾಡಿಕೊಳ್ಳಲು ಆಗದೆ ಯುವಕರು ಆತ್ಮಹತ್ಯೆಗೆ (Suicide) ಶರಣಾಗುತ್ತಾರೆ. ಬ್ರೇಕಪ್‌ (Love Break Up) ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವ ಹೆಣ್ಣುಮಕ್ಕಳೂ ಇದ್ದಾರೆ. ಆದರೆ, ಬ್ರೇಕಪ್‌ ಬಳಿಕ (Love Failure) ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಯುವತಿ ಅಥವಾ ಪ್ರಿಯತಮೆಯು ಹೊಣೆ ಅಲ್ಲ ಎಂದು ದೆಹಲಿ ಹೈಕೋರ್ಟ್‌ (Delhi High Court) ಆದೇಶ ಹೊರಡಿಸಿದೆ.

“ಲವ್‌ ಫೇಲ್ಯೂರ್‌ ಆಯಿತು ಎಂದು ಲವ್ವರ್‌ ಆತ್ಮಹತ್ಯೆ ಮಾಡಿಕೊಂಡರೆ ಮಹಿಳೆ, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ವಿದ್ಯಾರ್ಥಿಯು ನೇಣಿಗೆ ಕೊರಳೊಡ್ಡಿದರೆ ಮೌಲ್ಯಮಾಪಕ, ಕೇಸ್‌ ವಜಾ ಆಯಿತು ಎಂದು ಕ್ಲೈಂಟ್‌ ಆತ್ಮಹತ್ಯೆಗೆ ಶರಣಾದರೆ ವಕೀಲ ಹೊಣೆಯಾಗುವುದಿಲ್ಲ. ದುರ್ಬಲ ಮನಸ್ಥಿತಿಯ ವ್ಯಕ್ತಿಯು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳಿಗೆ ಕೈ ಹಾಕಿದರೆ, ಇನ್ನೊಬ್ಬ ವ್ಯಕ್ತಿಯು ಹೊಣೆಯಾಗಲು ಸಾಧ್ಯವಾಗುವುದಿಲ್ಲ ” ಎಂಬುದಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಇಬ್ಬರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಮೂರ್ತಿ ಅಮಿತ್‌ ಮಹಾಜನ್‌ ಅವರು ಸ್ಪಷ್ಟಪಡಿಸಿದರು.

Court Order

ಏನಿದು ಪ್ರಕರಣ?

ದೆಹಲಿಯಲ್ಲಿ 2023ರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಆತನ ಪ್ರೇಯಸಿಯೇ ಕಾರಣವಾಗಿದೆ. ಯುವತಿಯ ಮತ್ತೊಬ್ಬ ಗೆಳೆಯನು ಕೂಡ ನನ್ನ ಮಗನ ಆತ್ಮಹತ್ಯೆಗೆ ಜವಾಬ್ದಾರರು ಎಂಬುದಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆಯು ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ಯುವತಿ ಹಾಗೂ ಆಕೆಯ ಗೆಳೆಯನು ಬಂಧನದ ಭೀತಿಯಲ್ಲಿದ್ದರು. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗ ನ್ಯಾಯಾಲಯವು ಇಬ್ಬರಿಗೂ ನಿರೀಕ್ಷಣಾ ಮಂಜೂರು ಮಾಡಿದೆ.

“ನನ್ನ ಮಗ ಹಾಗೂ ಯುವತಿಯು ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ದೈಹಿಕ ಸಂಬಂಧವೂ ಇತ್ತು. ಆದರೆ, ಬ್ರೇಕಪ್‌ ಬಳಿಕ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗ ಬರೆದ ಡೆತ್‌ನೋಟ್‌ನಲ್ಲಿ ಯುವತಿ ಹಾಗೂ ಆಕೆಯ ಗೆಳೆಯನ ಹೆಸರಿದೆ. ಇವರಿಬ್ಬರಿಂದಾಗಿಯೇ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂಬುದಾಗಿ ಯುವಕನ ತಂದೆಯು ದೂರಿನಲ್ಲಿ ಪ್ರಸ್ತಾಪಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯವು, “ಡೆತ್‌ನೋಟ್‌ನಲ್ಲಿ ಇಬ್ಬರ ಹೆಸರಿದೆ ನಿಜ. ಆದರೆ, ಅವರಿಬ್ಬರೂ ಪ್ರಚೋದನೆ ನೀಡಿದ, ಬೆದರಿಕೆ ಹಾಕಿದ ಕುರಿತು ಪ್ರಸ್ತಾಪವಿಲ್ಲ. ದುರ್ಬಲ ಮನಸ್ಥಿತಿಯವರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯ” ಎಂದು ಸ್ಪಷ್ಟಪಡಿಸಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

Gold Rate Today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,765ಕ್ಕೆ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,380 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,040 ಆಗಿದೆ.

VISTARANEWS.COM


on

gold rate today 18
Koo

ಬೆಂಗಳೂರು: ಗುರುವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಮತ್ತು ₹33 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,765ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,650 ಮತ್ತು ₹6,76,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,380 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,800 ಮತ್ತು ₹7,38,000 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,80073,950
ಮುಂಬಯಿ67,650 73,800
ಬೆಂಗಳೂರು67,650 73,800
ಚೆನ್ನೈ68,35074,560

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

gold purchase

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

Continue Reading

ಬೆಂಗಳೂರು

Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

Summer Special Trains: ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ಬೆಂಗಳೂರು ಮತ್ತು ಮೈಸೂರಿನಿಂದ ಬೇರೆ ರಾಜ್ಯಗಳಿಗೆ ವಿಶೇಷ ರೈಲುಗಳ ಓಡಾಟ ಇರಲಿದೆ. ಯಾವ ನಿಲ್ದಾಣಗಳಿಂದ ಎಷ್ಟು ಗಂಟೆಗೆ ಎಲ್ಲೆಲ್ಲಿಗೆ ರೈಲುಗಳ ಸಂಚಾರ ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

summer special trains
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಶಾಲಾ-ಕಾಲೇಜು ಮುಗಿದಿದ್ದು ಬೇಸಿಗೆ ರಜೆ ಶುರುವಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳುವವರಿಗೆ, ಪ್ರವಾಸಕ್ಕೆ ಹೋಗುವವರಿಗಾಗಿ ನೈರುತ್ಯ ಇಲಾಖೆಯು ವಿಶೇಷ ರೈಲುಗಳನ್ನು (Summer Special Trains) ನಿಯೋಜನೆ ಮಾಡಿದೆ. ಬೆಂಗಳೂರು-ಮೈಸೂರಿನಿಂದ ದಕ್ಷಿಣ ಹಾಗೂ ಉತ್ತರ ಭಾರತದ ರಾಜ್ಯಗಳಿಗೆ ರೈಲುಗಳ ಓಡಾಟ ಇರಲಿದೆ. ಜತೆಗೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕಾಗಿ ತಮ್ಮ ಊರುಗಳಿಗೆ ತೆರಳವು ಕಾರಣಕ್ಕೂ ವಿಶೇಷ ರೈಲು ಇರಲಿದೆ.

ಯಶವಂತಪುರದಿಂದ ಚೆನ್ನೈ ನಡುವೆ ವಿಶೇಷ ರೈಲುಗಳ ಸಂಚಾರ

ನೈರುತ್ಯ ರೈಲ್ವೆಯು ಯಶವಂತಪುರ ಹಾಗೂ ಡಾ.ಎಂ.ಜಿ.ಆರ್.ಚೆನ್ನೈ ಸೆಂಟ್ರಲ್ ನಡುವೆ 1 ಟ್ರಿಪ್ ಮತ್ತು ಎಸ್ಎಂವಿಟಿ ಬೆಂಗಳೂರು-ಹೌರಾ ನಿಲ್ದಾಣಗಳ ನಡುವೆ 6 ಟ್ರಿಪ್‌ಗಳಿಗೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಆ ಪ್ರಕಾರ ರೈಲು ಸಂಖ್ಯೆ 06533/06534 ಯಶವಂತಪುರ-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್-ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ (1 ಟ್ರಿಪ್) ರೈಲು ಏಪ್ರಿಲ್ 18 ರಂದು ಯಶವಂತಪುರದಿಂದ ರಾತ್ರಿ 10:45ಕ್ಕೆ ಹೊರಟು, ಮರುದಿನ ಬೆಳಗ್ಗೆ 04:55 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ನಂತರ ರೈಲು ಸಂಖ್ಯೆ 06534 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ಏಪ್ರಿಲ್ 19ರಂದು ಬೆಳಗ್ಗೆ 06:45ಕ್ಕೆ ಹೊರಟು, ಅದೇ ದಿನ ಮಧ್ಯಾಹ್ನ 12.30ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ ಜಂಕ್ಷನ್, ಜೋಲಾರ್ಪೆಟ್ಟೈ ಜಂಕ್ಷನ್, ಅರಕ್ಕೋಣಂ ಜಂಕ್ಷನ್ ಮತ್ತು ಪೆರಂಬೂರ್ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲ್ಲಲಿದೆ. ಈ ವಿಶೇಷ ರೈಲುಗಳು ಎಸಿ ಫಸ್ಟ್ ಕ್ಲಾಸ್ -1, ಎಸಿ -2 ಶ್ರೇಣಿ -2, ಎಸಿ -3 ಶ್ರೇಣಿ -6, ಸ್ಲೀಪರ್ ಕ್ಲಾಸ್ -8, ಜನರಲ್ ಸೆಕೆಂಡ್ ಕ್ಲಾಸ್ -2 ಮತ್ತು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್ -2 ಸೇರಿದಂತೆ ಒಟ್ಟು 21 ಬೋಗಿಗಳನ್ನು ಒಳಗೊಂಡಿರುತ್ತದೆ.

ಎಸ್ಎಂವಿಟಿ ಬೆಂಗಳೂರು-ಹೌರಾ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು (6 ಟ್ರಪ್‌ಗಳು)

ರೈಲು ಸಂಖ್ಯೆ 06585 ಎಸ್ಎಂವಿಟಿ ಬೆಂಗಳೂರು-ಹೌರಾ ಸಾಪ್ತಾಹಿಕ ವಿಶೇಷ ರೈಲು ಏಪ್ರಿಲ್ 19, 26 ಮತ್ತು ಮೇ 3, 10, 17 ಮತ್ತು 24, ರಂದು 00:30 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡಲಿದೆ. ಈ ರೈಲು ಮರುದಿನ 10:00 ಗಂಟೆಗೆ ಹೌರಾವನ್ನು ತಲುಪಲಿದೆ. ರೈಲು ಸಂಖ್ಯೆ 06586 ಹೌರಾದಿಂದ ಏಪ್ರಿಲ್ 20, 27, ಮೇ 4, 11, 18 ಮತ್ತು 25 ರಂದು ಮಧ್ಯಾಹ್ನ 1:05 ಗಂಟೆಗೆ ಹೊರಡಲಿದೆ. ಈ ರೈಲು ಮರುದಿನ ರಾತ್ರಿ 8:10 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೆಟ್ಟೈ, ಕಟಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಖುರ್ದಾ ರಸ್ತೆ, ಭುವನೇಶ್ವರ, ಕಟಕ್ ಜಂಕ್ಷನ್, ಭದ್ರಾಕ್, ಬಾಲೇಶ್ವರ ಮತ್ತು ಖರಗ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಇದನ್ನೂ ಓದಿ: Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಬಂದ ದರ್ಶನ್‌; ಯಾಕೆ ಸುಮಲತಾ ಸೈಲೆಂಟ್?

ಚೆನ್ನೈ-ವೈಟ್‌ಫೀಲ್ಡ್ ನಡುವೆ ವಿಶೇಷ ರೈಲುಗಳ ಓಡಾಟ

ತಮಿಳುನಾಡು ಚುನಾವಣೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಹಿನ್ನೆಲೆಯಲ್ಲೂ ಬೇಡಿಕೆಗೆ ಅನುಗುಣವಾಗಿ ರೈಲು ಸೇವೆಯನ್ನು ಒದಗಿಸಲಾಗುತ್ತಿದೆ. ರೈಲು ಸಂಖ್ಯೆ 06005 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ವೈಟ್‌ಫೀಲ್ಡ್‌ ವಿಶೇಷ ರೈಲು ಏಪ್ರಿಲ್ 18 ಮತ್ತು 20ರಂದು ಬೆಳಗ್ಗೆ 05:35ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡಲಿದೆ. ಈ ರೈಲು ಅದೇ ದಿನ ಮಧ್ಯಾಹ್ನ 12 ಗಂಟೆಗೆ ವೈಟ್ ಫೀಲ್ಡ್ ತಲುಪಲಿದೆ. ಈ ರೈಲು ಅರಕ್ಕೋಣಂ ಜಂಕ್ಷನ್, ವಾಲಾಜಾ ರಸ್ತೆ, ಕಟಪಾಡಿ ಜಂಕ್ಷನ್, ಜೋಲಾರ್ಪೆಟ್ಟೈ ಜಂಕ್ಷನ್, ಕುಪ್ಪಂ ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಹಿಂದಿರುಗುವಾಗ ರೈಲು ಸಂಖ್ಯೆ 06006 ವೈಟ್‌ಫೀಲ್ಡ್‌-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್‌ ಏಪ್ರಿಲ್ 18 ಮತ್ತು 20 ರಂದು ಮಧ್ಯಾಹ್ನ 1ಗಂಟೆಗೆ ವೈಟ್‌ಫೀಲ್ಡ್‌ನಿಂದ ಹೊರಡಲಿದೆ. ಈ ರೈಲು ಅದೇ ದಿನ 07:00 ಗಂಟೆಗೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ಈ ರೈಲು ಬಂಗಾರಪೇಟೆ, ಕುಪ್ಪಂ, ಜೋಲಾರ್ಪೆಟ್ಟೈ ಜಂಕ್ಷನ್, ಕಟಪಾಡಿ ಜಂಕ್ಷನ್, ವಾಲಾಜಾ ರಸ್ತೆ, ಅರಕ್ಕೋಣಂ ಮತ್ತು ಪೆರಂಬೂರ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲುಗಳು ಎಸಿ ಫಸ್ಟ್ ಕ್ಲಾಸ್-1, ಎಸಿ-2 ಟೈರ್-2, ಎಸಿ-3 ಟೈರ್-6, ಸ್ಲೀಪರ್ ಕ್ಲಾಸ್-7, ಪ್ಯಾಂಟ್ರಿ ಕಾರ್-1, ಜನರಲ್ ಸೆಕೆಂಡ್ ಕ್ಲಾಸ್-3, ಸೆಕೆಂಡ್ ಲಗೇಜ್ ಕಂ ಬ್ರೇಕ್ ವ್ಯಾನ್ಗಳು/ ಅಂಗವಿಕಲ ಬೋಗಿ-1 ಮತ್ತು ಬ್ರೇಕ್, ಲಗೇಜ್ ಮತ್ತು ಜನರೇಟರ್ ಕಾರ್-1 ಸೇರಿದಂತೆ ಒಟ್ಟು 22 ಬೋಗಿಗಳನ್ನು ಒಳಗೊಂಡಿರುತ್ತದೆ

ಎಸ್ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಬೇಸಿಗೆ ವಿಶೇಷ ರೈಲು ಸೇವೆ

ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್‌ಎಂವಿಟಿ) ಮತ್ತು ಕಲಬುರಗಿ ನಡುವೆ 9 ಟ್ರಿಪ್‌ಗಳಿಗೆ ಬೇಸಿಗೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಈಗ ಈ ವಿಶೇಷ ರೈಲುಗಳ ಏಳು ಟ್ರಿಪ್‌ಗಳಲ್ಲಿ ದಿನಾಂಕ ಬದಲಾಗಿದೆ.

ರೈಲು ಸಂಖ್ಯೆ 06589 ಏಪ್ರಿಲ್ 21 ರಿಂದ ಮೇ 19ರವರೆಗೆ ಪ್ರತಿ ಭಾನುವಾರ ಮತ್ತು ಮಂಗಳವಾರ ರಾತ್ರಿ 11: 00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 09:05 ಗಂಟೆಗೆ ಕಲಬುರಗಿಯನ್ನು ತಲುಪಲಿದೆ. ರೈಲು ಸಂಖ್ಯೆ 06590 ಏಪ್ರಿಲ್ 22 ರಿಂದ ಮೇ 20 ರವರೆಗೆ ಪ್ರತಿ ಸೋಮವಾರ ಮತ್ತು ಬುಧವಾರ ಸಂಜೆ 05:10 ಗಂಟೆಗೆ ಕಲಬುರಗಿಯಿಂದ ಹೊರಟು ಮರುದಿನ ಬೆಳಗ್ಗೆ 04:15 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಮೈಸೂರಿನಿಂದಲ್ಲೂ ವಿಶೇಷ ರೈಲುಗಳ ಓಡಾಟ

ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು-ಮುಜಾಫರ್ಪುರ ನಿಲ್ದಾಣಗಳ ನಡುವೆ ಬೇಸಿಗೆ ವಿಶೇಷ ರೈಲು ಸೇವೆ ನಾಲ್ಕು ಟ್ರಿಪ್‌ಗಳಿಗೆ ಕಾರ್ಯನಿರ್ವಹಿಸಲಿದೆ. ರೈಲು ಸಂಖ್ಯೆ 06221 ಮೈಸೂರು-ಮುಜಾಫರ್ಪುರ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಏಪ್ರಿಲ್ 15, 22, 29 ಮತ್ತು ಮೇ 6 ರಂದು ಬೆಳಗ್ಗೆ 10:30 ಕ್ಕೆ ಮೈಸೂರಿನಿಂದ ಹೊರಟು ಮೂರನೇ ದಿನ ಮಧ್ಯಾಹ್ನ 1:30 ಗಂಟೆಗೆ ಮುಜಾಫರ್ಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06222 ಏಪ್ರಿಲ್ 18, 25, ಮೇ 2 ಮತ್ತು 9 ರಂದು ಮಧ್ಯಾಹ್ನ 1:00 ಗಂಟೆಗೆ ಮುಜಾಫರ್ಪುರದಿಂದ ಹೊರಟು ಮೂರನೇ ದಿನ 4:40 ಗಂಟೆಗೆ ಮೈಸೂರಿಗೆ ತಲುಪಲಿದೆ. ಈ ವಿಶೇಷ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೆಟ್ಟೈ, ಕಟಪಾಡಿ, ರೇಣಿಗುಂಟ, ಗುಡೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಖುರ್ದಾ ರಸ್ತೆ, ಭುವನೇಶ್ವರ, ಕಟಕ್ ಜಂಕ್ಷನ್, ಭದ್ರಾಕ್, ಬಾಲೇಶ್ವರ್, ಖರಗ್ಪುರ, ಡಂಕುನಿ, ಬೋಲ್ಪುರ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಬಂದ ದರ್ಶನ್‌; ಯಾಕೆ ಸುಮಲತಾ ಸೈಲೆಂಟ್?

Lok Sabha Election 2024: ದರ್ಶನ್‌ ಮಂಡ್ಯ ಗ್ರಾಮಾಂತರ ಭಾಗದಲ್ಲಿ ಸಾಕಷ್ಟು ಹವಾ ಹೊಂದಿದ್ದಾರೆ. 2019ರಲ್ಲಿ ಜೆಡಿಎಸ್‌ನಿಂದ ನಿಂತಿದ್ದ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿಗೆ ದರ್ಶನ್‌‌ ಅವರ ಬಿರುಗಾಳಿಯಂಥ ಪ್ರಚಾರವೂ ಕಾರಣವಾಗಿತ್ತು.

VISTARANEWS.COM


on

Darshan and Sumalatha Ambareesh
Koo

ಮಂಡ್ಯ: ಮಂಡ್ಯದಲ್ಲಿ (Mandya) ಲೋಕಸಭೆ ಚುನಾವಣೆ (Lok Sabha Election 2024) ಅಖಾಡ ರಂಗೇರಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಮಂಡ್ಯ ಭಾರಿ ಪ್ರತಿಷ್ಠೆಯ ಕಣವಾಗಿದೆ. 2019ರಲ್ಲಿ ಮಂಡ್ಯ ದೇಶದ ಗಮನ ಸೆಳೆದಂತೆ, ಈ ಬಾರಿಯೂ ಆಗಿದೆ. ಸದ್ಯ, ಸುಮಲತಾ (Sumalatha Ambareesh) ಅವರ ಬಣದಲ್ಲಿದ್ದ ನಟ ದರ್ಶನ್‌ (Actor Darshan), ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ಅವರ ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ. ಸುಮಲತಾ ಈ ಬಗ್ಗೆ ಮೌನ ಕಾಪಾಡಿಕೊಂಡಿದ್ದು, ಅವರ ನಡೆ ಕುತೂಹಲ ಕೆರಳಿಸಿದೆ.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಸ್ಟಾರ್‌‌ ಚಂದ್ರು ನಡುವೆ ಇದೀಗ ಬಿಗ್ ಫೈಟ್‌‌ ನಡೆದಿದೆ. ಹಾಲಿ ಸಂಸದೆ ಸುಮಲತಾ, ಬಿಜೆಪಿ ಸೇರಿಕೊಂಡಿದ್ದರೂ ಪ್ರಚಾರ ಕಣದಲ್ಲಿ ಕಾಣಿಸದೆ ಸೈಲೆಂಟ್‌‌ ಆಗಿದ್ದಾರೆ. ಅತ್ತ ಅವರ ಕಾರ್ಯಕರ್ತರೂ ಮೌನವಾಗಿದ್ದಾರೆ. ಆದರೆ ಸುಮಲತಾ ʼದತ್ತು ಪುತ್ರʼ ಎಂದೇ ಕರೆಸಿಕೊಂಡಿರುವ ದರ್ಶನ್‌ ಮಂಡ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌‌ ಚಂದ್ರು ಪರ ಸ್ಟಾರ್‌‌ ಪ್ರಚಾರಕ್ಕೆ ಇಳಿದಿದ್ದಾರೆ.

ದರ್ಶನ್‌ ಬಂದರೆ ಸ್ಟಾರ್‌‌ ಚಂದ್ರುಗೆ ಪ್ಲಸ್‌ ಆಗಲಿದೆಯೇ ಎಂಬ ಕುತೂಹಲ ಗರಿಗೆದರಿದೆ. ದರ್ಶನ್‌ ಮಂಡ್ಯ ಗ್ರಾಮಾಂತರ ಭಾಗದಲ್ಲಿ ಸಾಕಷ್ಟು ಹವಾ ಹೊಂದಿದ್ದಾರೆ. 2019ರಲ್ಲಿ ಜೆಡಿಎಸ್‌ನಿಂದ ನಿಂತಿದ್ದ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿಗೆ ದರ್ಶನ್‌‌ ಅವರ ಬಿರುಗಾಳಿಯಂಥ ಪ್ರಚಾರವೂ ಕಾರಣವಾಗಿತ್ತು. ನಟ ಯಶ್‌‌ ಜತೆ ಸೇರಿ ಒಂದು ತಿಂಗಳು ಅವರು ಪ್ರಚಾರ ಮಾಡಿದ್ದರು. ʼಸ್ವಾಭಿಮಾನ ಪಾಲಿಟಿಕ್ಸ್‌ʼ ಮಾಡಿ ಸುಮಲತಾ ಅವರನ್ನು ಗೆಲ್ಲಿಸಿದ್ದರು.

ಅಂದು ಮಗನ ವಿರುದ್ಧ ಪ್ರಚಾರ ಮಾಡಿ ಗೆಲ್ಲಿಸಿಕೊಂಡಿದ್ದ ದರ್ಶನ್‌, ಇಂದು ಅಪ್ಪನ (ಎಚ್‌ಡಿಕೆ) ವಿರುದ್ಧ ಪ್ರಚಾರಕ್ಕೆ ಇಳಿದಿದ್ದಾರೆ. ಮಂಡ್ಯದಲ್ಲಿ ದರ್ಶನ್‌‌ ಬೆಂಬಲಿಸುವ ದೊಡ್ಡ ಒಕ್ಕಲಿಗರ ಪಡೆಯಿದ್ದು, ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ದರ್ಶನ್‌ ಫ್ಯಾನ್ಸ್‌‌ ಇದ್ದಾರೆ. ಅಭಿಮಾನಿಗಳ ವೋಟ್‌ ಕಾಂಗ್ರೆಸ್‌ಗೆ ಬಂದರೆ ಶಕ್ತಿ ದುಪ್ಪಟ್ಟಾಗಲಿದೆ. ಸದ್ಯ ಹದಿನೈದು ದಿಗಳಿಂದ ಸ್ಟಾರ್‌‌ ಚಂದ್ರು ಕ್ಷೇತ್ರದಲ್ಲಿ ಬೀಡು ಬಿಟ್ಟು ನಿರಂತರ ಪ್ರಚಾರದಲ್ಲಿದ್ದಾರೆ.

ದರ್ಶನ್‌ ಆಗಮನ, ಸುಮಲತಾ ಮೌನದಿಂದ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಡಬಲ್‌ ಟೆನ್ಷನ್‌‌ ಉಂಟಾಗಿದೆ. ಮಂಡ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿ ಎಚ್‌ಡಿಕೆ ಇದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇವಲ ಮೂರು ಕ್ಷೇತ್ರಗಳು ರಾಜ್ಯದಲ್ಲಿ ಪಕ್ಷಕ್ಕೆ ದೊರೆತಿದೆ. ಈ ಮೂರನ್ನೂ ಗೆಲ್ಲಿಸಿಕೊಳ್ಳಲು ಅವರು ಮುಂದಾಗಿದ್ದಾರೆ. ಹೀಗಾಗಿ ಕೊನೆಯ ಕ್ಷಣದಲ್ಲಿ ತಾವೇ ಅಭ್ಯರ್ಥಿಯಾಗಿದ್ದರು. 2019ರಲ್ಲಿ ನಿಖಿಲ್‌ಗೆ ಆದ ಸೋಲಿಗೆ ಸೇಡು ತೀರಿಸಿಕೊಳ್ಳುವುದು ಅನಿವಾರ್ಯವಾಗಿದೆ. ಚಲುವರಾಯಸ್ವಾಮಿ ಪಾಲಿಗೆ ಸೋಲು ಕಾಣಿಸುವ ಲೆಕ್ಕಚಾರವಿದೆ.

ಕಾಂಗ್ರೆಸ್‌ ಪರ ಪ್ರಚಾರಕ್ಕೆ ಆಗಮಿಸುತ್ತಿರುವ ದರ್ಶನ್‌ ಜೊತೆಗೆ ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಮುಂತಾದ ಘಟಾನುಘಟಿಗಳಿಂದಲೂ ಪ್ರಚಾರ ನಡೆಯುತ್ತಿದೆ.

ಸುಮಲತಾ ಯಾಕೆ ಸೈಲೆಂಟ್?

ಬಿಜೆಪಿ ಸೇರ್ಪಡೆ ಆದ ಬಳಿಕವೂ ಸುಮಲತಾ ಮೌನ ವಹಿಸಿದ್ದು, ಬಹಿರಂಗ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿಕೆ ಕಣದಲ್ಲಿದ್ದರೂ, ಮಂಡ್ಯ ಅಖಾಡದಲ್ಲಿ ಕಾಣಿಸಿಕೊಳ್ಳದ ಸುಮಲತಾ, “ನನ್ನನ್ನು ಎಚ್‌ಡಿಕೆ ಅಹ್ವಾನಿಸಿಲ್ಲ” ಎಂದಿದ್ದಾರೆ.

ತಮಗೆ ಬಿಜೆಪಿಯಿಂದಲೇ ಅಧಿಕೃತ ಅಹ್ವಾನ ಬರಬೇಕು ಎಂಬುದು ಸುಮಲತಾ ಅಭಿಪ್ರಾಯವಾಗಿದೆ. ಬಿಜೆಪಿ ಕಚೇರಿಯಿಂದಲೇ ಅಧಿಕೃತ ಕ್ಷೇತ್ರ ತೋರಿಸಿದರೆ, ಅಥವಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಿದರೆ ಹೋಗೋಣ ಎಂದು ಸುಮಲತಾ ಅಂದುಕೊಂಡಿದ್ದಾರೆ. ಮಂಡ್ಯದಲ್ಲಿಯಂತೂ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಸುಮಲತಾ ಹಿಂದೇಟು ಹಾಕುತ್ತಿದ್ದು, ಮಂಡ್ಯದಲ್ಲಿ ಜೆಡಿಎಸ್ ಗೆದ್ದರೆ ಬಿಜೆಪಿ ಸಂಘಟನೆ ವೀಕ್ ಆಗುತ್ತದೆ ಅನ್ನುವ ಆತಂಕದಲ್ಲಿ ಸುಮಲತಾ ಇದ್ದಾರೆ.

ಹಳೆಯ ಸ್ನೇಹಿತ ದರ್ಶನ್:‌ ಚಂದ್ರು

“ದರ್ಶನ್ ನನಗೆ ಹಳೆಯ ಸ್ನೇಹಿತ. ಪ್ರಚಾರಕ್ಕೆ ಬರುವಂತೆ ಕೇಳಿಕೊಂಡಿದ್ದೆ. ಅದಕ್ಕೆ ಒಪ್ಪಿ ಇಂದು ಪ್ರಚಾರಕ್ಕೆ ಬರ್ತಿದ್ದಾರೆ. ಮಳವಳ್ಳಿಯಲ್ಲಿ ಸಂಜೆವರೆಗೂ ಪ್ರಚಾರ ಮಾಡ್ತಾರೆ. ಸಂಜೆ ವೇಳೆಗೆ ನಾನೂ ಅವರ ಜೊತೆಗೆ ಸೇರಿಕೊಳ್ಳುತ್ತೇನೆ. ಅವರು ಬಂದು ಪ್ರಚಾರ ಮಾಡ್ತಿರೋದು ನನಗೆ ಅನುಕೂಲವಾಗುತ್ತೆ. ಹಳ್ಳಿಗಳಲ್ಲಿ ಜನ ಉತ್ತಮ ರೀತಿಯಲ್ಲಿ ಸ್ಪಂದಿಸ್ತಿದ್ದಾರೆ. ನೂರಕ್ಕೆ‌ ನೂರರಷ್ಟು ನಾನು ಗೆಲ್ತೇನೆ” ಎಂದು ಮಂಡ್ಯ ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಹೇಳಿದ್ದಾರೆ.

ಇದನ್ನೂ ಓದಿ: Sumalatha Ambareesh : ಬಿಜೆಪಿಗೆ ಸೇರ್ಪಡೆಗೊಂಡರೂ ಪ್ರಚಾರಕ್ಕೆ ಇಳಿಯದ ಸುಮಲತಾ!

Continue Reading
Advertisement
Self Harming In chitradurga
ಚಿತ್ರದುರ್ಗ13 mins ago

Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

Saffron Row
ದೇಶ18 mins ago

ಕೇಸರಿ ಬಟ್ಟೆ ಧರಿಸಿದ್ದಕ್ಕೆ ಪ್ರಾಂಶುಪಾಲ ಆಕ್ಷೇಪ; ತೆರೆಸಾ ಶಾಲೆ ಮೇಲೆ ಹಿಂದು ಕಾರ್ಯಕರ್ತರ ದಾಳಿ!

gold rate today 18
ಚಿನ್ನದ ದರ34 mins ago

Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

Rohit sharma
ಕ್ರೀಡೆ37 mins ago

Rohit Sharma: ಸ್ಮರಣೀಯ ಪಂದ್ಯವನ್ನಾಡಲು ಸಜ್ಜಾದ ರೋಹಿತ್​ ಶರ್ಮ

summer special trains
ಬೆಂಗಳೂರು46 mins ago

Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

Senior citizen
ಲೈಫ್‌ಸ್ಟೈಲ್52 mins ago

Senior Citizen: 2050ರ ವೇಳೆಗೆ ಭಾರತ ‘ಮುದುಕರ ದೇಶ’ವಾಗಲಿದೆ!

Lok sabha election-2024
Latest56 mins ago

Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಿದರೆ ಏನು ಮಾಡಬಹುದು?

Darshan and Sumalatha Ambareesh
ಪ್ರಮುಖ ಸುದ್ದಿ1 hour ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಬಂದ ದರ್ಶನ್‌; ಯಾಕೆ ಸುಮಲತಾ ಸೈಲೆಂಟ್?

Uttarakaanda Movie doodh peda diganth mirchi mallige
ಸ್ಯಾಂಡಲ್ ವುಡ್1 hour ago

Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

Shubman Gill
ಕ್ರೀಡೆ1 hour ago

Shubman Gill: ಗ್ಯಾಲರಿಯಲ್ಲಿ ಕುಳಿತಿದ್ದ ಸುಂದರ ಹುಡುಗಿಯನ್ನು ಕಂಡು ಕ್ಲೀನ್​ ಬೌಲ್ಡ್​ ಆದ ಗಿಲ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌