ಶಿರಸಿ: ರಾಜಕೀಯ ಪ್ರಭಾವ ಬೀರುವ ಹಾಗೂ ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸುವಲ್ಲಿ (Abolition of reservation) ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಭಾವವನ್ನು ಬಿಗಿಯಾಗಿಸುವಲ್ಲಿ ಮೀಸಲಾತಿ ಹಂಚಿಕೆ ಮಾಡುವ ಬದಲು ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಪಡಿಸುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು. ಪಂಚಮಸಾಲಿ, ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳು ಜನಸಂಖ್ಯಾ ಬಲ ಪ್ರದರ್ಶಿಸಿ ಮೀಸಲಾತಿಗೆ ಬೇಡಿಕೆ ಇಡುತ್ತಿವೆ. ಸರ್ಕಾರ ಕೇವಲ ಮತದಾರ ಮತ ಗಿಟ್ಟಿಸಿಕೊಳ್ಳುವ ದೃಷ್ಟಿಯಿಂದ ಮೀಸಲಾತಿ ನೀಡುತ್ತಿದ್ದರೆ ಮೀಸಲಾತಿಯ ಅರ್ಥ ಕಳೆದುಕೊಳ್ಳುವುದರಲ್ಲಿ ಅನುಮಾನವಿಲ್ಲ ಎಂದರು.
ಸರ್ಕಾರ ಮೀಸಲಾತಿ ಹಂಚಿಕೆ ಕುರಿತು ಸ್ಪಷ್ಟ ನಿಲುವು ತಾಳುತ್ತಿಲ್ಲ. ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದು ಮೀಸಲಾತಿ ಹಂಚಿಕೆ ಮಾಡಿದರೆ ಸಣ್ಣ ಸಮುದಾಯಗಳು ಸಂವಿಧಾನಬದ್ಧ ಹಕ್ಕುಗಳಿಂದ ವಂಚಿತವಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಹಂಚಿಕೆಯನ್ನು ಕೈ ಬಿಡುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ | Food Poisoning | ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರಿಗೆ ವಾಂತಿ, ಭೇದಿ; ಅಸ್ವಸ್ಥಗೊಂಡವರು ಆಸ್ಪತ್ರೆಗೆ ದಾಖಲು