ಚಿಕ್ಕಮಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸೋಷಿಯಲ್ ಮೀಡಿಯಾಗಳಲ್ಲಿ ಅಶ್ಲೀಲ ವಿಡಿಯೊಗಳನ್ನು (Absence Video) ಶೇರ್ ಮಾಡುತ್ತಿದ್ದಾನೆ ಎಂಬ ದೂರು ಬಂದಿದೆ.
ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೊವನ್ನು ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಸಂಸೆ ಮೂಲದ ಪ್ರಜ್ವಲ್ ಎಂಬಾತನ ಮೇಲೆ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೊ, ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ ಆರೋಪ ಈಗ ಪ್ರಜ್ವಲ್ ಮೇಲಿದೆ. ಈತ ಅಶ್ಲೀಲ ವಿಡಿಯೊಗಳನ್ನು ಹಾಗೂ ಫೋಟೊಗಳನ್ನು ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಪೇಜ್‌ಗಳಲ್ಲಿ ಟ್ರೋಲ್ ದುಶ್ಯಾಸನ ಎಂಬ ಖಾತೆ ಮೂಲಕ ಅಪ್ಲೋಡ್ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಳು ಕೇಸ್ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!
ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.
ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.
ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ
ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್ ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.
ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.
ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!
ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.