ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಶೇ. 10ಕ್ಕಿಂತ ಹೆಚ್ಚು ಶುಲ್ಕವನ್ನು ಏರಿಕೆ ಮಾಡಲಾಗಿದೆ. ಇದನ್ನು ಕಡಿತಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP Protest) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ (ಡಿ.೨೭) ಪ್ರತಿಭಟನೆ ನಡೆಸಿದ ಅವರು, ವಿಟಿಯು ರಾಜ್ಯ ಮಟ್ಟದ ವಿವಿಯಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವಿವಿ ಕಾನೂನು ಬದ್ಧವಾಗಿ ಶುಲ್ಕವನ್ನು ಏರಿಕೆ ಮಾಡಿಲ್ಲ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪರೀಕ್ಷಾ ಶುಲ್ಕ ಏರಿಕೆ ಮಾಡಲಾಗಿದೆ. ಅಂಕಪಟ್ಟಿ ಶುಲ್ಕ ಏರಿಸಲಾಗಿದೆ. ಡಿಗ್ರಿ ಸರ್ಟಿಫಿಕೆಟ್ ನೀಡಲು ಶೇ.50ರಷ್ಟು ಶುಲ್ಕ ಏರಿಸಲಾಗಿದೆ. ಈ ಎಲ್ಲ ಶುಲ್ಕಗಳನ್ನು ಶೇ.10ರಷ್ಟು ಮಾತ್ರ ಏರಿಸಬೇಕಿತ್ತು. ಆದರೆ ವಿವಿಯು ಶೇ. 25ರಿಂದ ಹಿಡಿದು ಶೇ.100 ರವರೆಗೆ ಏರಿಸಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ತಕ್ಷಣವೇ ಏರಿಸಿರುವ ಎಲ್ಲ ಶುಲ್ಕಗಳನ್ನು ಇಳಿಸಬೇಕು. ಶೇ.10ರಷ್ಟು ಮಾತ್ರ ಏರಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಿಗೆ ಆಗ್ರಹಿಸಿದರು. ಮಹಾನಗರ ಕಾರ್ಯದರ್ಶಿ ಪ್ರವೀಣ್ ಎಚ್.ಕೆ. ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ | Fire Accident | ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ಗಳಲ್ಲಿ ಆಕಸ್ಮಿಕ ಬೆಂಕಿ; ಕ್ಷಣಾರ್ಧದಲ್ಲಿ ಭಸ್ಮ