Site icon Vistara News

ಗೃಹ ಸಚಿವರ ಮನೆಗೆ ಮುತ್ತಿಗೆ ಪ್ರಕರಣ ; 30 ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಎಬಿವಿಪಿ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಪ್ರಕರಣದಲ್ಲಿ 30 ಎಬಿವಿಪಿ ಕಾರ್ಯಕರ್ತರ ವಿರುದ್ಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹಿಂದು ಕಾರ್ಯಕರ್ತರ ಸರಣಿ ಹತ್ಯೆಗಳನ್ನು ಖಂಡಿಸಿ ಶನಿವಾರ ಬೆಳಗ್ಗೆ ಜೆಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯ ಮಹಲ್‌ನ ಗೃಹ ಸಚಿವರ ಸರ್ಕಾರಿ ನಿವಾಸದ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಚಿವರ ಮನೆಯ ಗೇಟ್‌ ತೆಗೆದು ನುಗ್ಗಲು ಯತ್ನಿಸಿದಾಗ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು.

ಪ್ರತಿಭಟನೆ ನಡೆಸಿದ್ದವರಲ್ಲಿ 29 ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ಒಟ್ಟು 30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 448, 143, 147, 149 ಹಾಗೂ ಕಲಂ. 3 ಆಫ್ ಪಿಡಿಪಿಪಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಗೃಹ ಸಚಿವರ ಮನೆಗೇ ಎಬಿವಿಪಿ ಮುತ್ತಿಗೆ, ಗುಪ್ತಚರ ವೈಫಲ್ಯ ಒಪ್ಪಿಕೊಂಡ ಪೊಲೀಸ್ ಕಮಿಷನರ್

Exit mobile version