ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ (Accident at Dharwad). 29 ವರ್ಷದ ಮಹಮ್ಮದ್ ನವಾಜ್ ಮೃತ ದುರ್ದೈವಿ.
ಕ್ರಾಸ್‌ನಲ್ಲಿ ರೋಡ್ ಕ್ರಾಸ್ ಮಾಡುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಬೈಕ್ ಬಹುದೂರಕ್ಕೆ ಹೋಗಿ ಬಿದ್ದಿದ್ದು, ನವಾಜ್ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು.
ಮೃತ ಮಹಮ್ಮದ್ ನವಾಜ್ ಹುಬ್ಬಳ್ಳಿಯ ತಬೀಬ್‌ಲ್ಯಾಂಡ್ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ಧಾರವಾಡ ಕಡೆಗೆ ಬಂದಿದ್ದರು. ಲಾರಿ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ನವಾಜ್ ಪ್ರಾಣ ಕಳೆದುಕೊಳ್ಳುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿಯಾಗೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆದಿದೆ.
ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Road Accident | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ನೀರಿನ ಟ್ಯಾಂಕರ್; ಸ್ಥಳದಲ್ಲಿಯೇ ಚಾಲಕ ಸಾವು