Site icon Vistara News

Accident | ಸರಕಾರಿ ಬಸ್‌- ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ಸಾವು

Accident vijayanagara

ವಿಜಯನಗರ: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಂಡನಾಯಕನ ಹಳ್ಳಿಯಲ್ಲಿ ನಡೆದಿದೆ.

ಹರಪನಹಳ್ಳಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸರಕಾರಿ ಬಸ್‌ ಮತ್ತು ಕಮಲಾಪುರದ ಕಡೆಯಿಂದ ಹೊಸಪೇಟೆಗೆ ಹೊರಟಿದ್ದ ಕಾರು ಕೊಂಡ ನಾಯಕನ ಹಳ್ಳಿಯಲ್ಲಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಡಿಕ್ಕಿಯ ರಭಸಕ್ಕೆ ಕಾರು ಗುರುತೇ ಹಿಡಿಯಲಾಗದಂತೆ ನಜ್ಜುಗುಜ್ಜಾಗಿದೆ. ಕಾರು ಚಾಲಕ ಮದೀನ್‌ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹೊಸಪೇಟೆಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Accident | ಬೈಕ್‌ಗೆ ಗುದ್ದಿದ ಟಿಪ್ಪರ್‌: ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವು, ಒಬ್ಬ ಗಂಭೀರ

Exit mobile version