Site icon Vistara News

Accident case | ನರಗುಂದ ಬಳಿ ಬಸ್-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರು ಗಂಭೀರ

gadag accident

ಗದಗ: ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ (Accident case) ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬಸವರಡ್ಡಿ (೫೦), ಹನುಮಂತಗೌಡ (೪೮) ಮೃತ ದುರ್ದೈವಿಗಳಾಗಿದ್ದು, ನವೀನ್ ಹಾಗೂ ಮಂಜುನಾಥ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗದಿಂದ ನರಗುಂದ ಕಡೆಗೆ ಬಸ್ ಹೋಗುತ್ತಿತ್ತು. ಈ ವೇಳೆ ಬಾಗಲಕೋಟೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಿ ವಾಪಸ್‌ ನವಲಗುಂದಕ್ಕೆ ಹೊರಟ್ಟಿದ ಕಾರು ಕಲಕೇರಿ ಗ್ರಾಮಕ್ಕೆ ಬರುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ನರಗುಂದ ಡಿವೈಎಸ್ಪಿ ವೈ.ಎಸ್. ಏಗನಗೌಡ್ರ, ಸಿಪಿಐ ಮಲ್ಲಯ್ಯ ಮಠಪತಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident | ಕೊಲ್ಹಾರ ತಾಲೂಕಿನಲ್ಲಿ ಕಾರು-ಸಾರಿಗೆ ಬಸ್ ನಡುವೆ ಅಪಘಾತ; ಇಬ್ಬರ ಸಾವು

Exit mobile version