ದಾವಣಗೆರೆ: ನ್ಯಾಮತಿ ಪಟ್ಟಣದ ಹೊನ್ನಾಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಖಾಸಗಿ ಬಸ್‌ವೊಂದು ಡಿಕ್ಕಿ (Accident Case) ಹೊಡೆದಿದ್ದು, ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನ್ಯಾಮತಿ ಪಟ್ಟಣದ ಹೊನ್ನಾಳಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ನ್ಯಾಮತಿ ತಾಲೂಕಿನ ದಾನಿಹಳ್ಳಿಯ ನಿವಾಸಿ ಸಂಜೀವ್ (55) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಂಜೀವ್ ಅವರು ಜಮೀನು ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ನಿಯಂತ್ರಣ ತಪ್ಪಿದ್ದು, ಏಕಾಏಕಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಸಂಜೀವ್ ಅವರು ಕೆಳಗೆ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Drowning in water | ದನ ಮೇಯಿಸಲು ಹೋಗಿದ್ದ ಬಾಲಕರಿಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವು