ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ಬಳಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ (Accident Case) ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸೇರಿದಂತೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಮು ಗೊಲ್ಲರ್ (20) ಮೃತಪಟ್ಟ ದುರ್ದೈವಿ. ಲಾರಿ ಚಾಲಕನ ಅಜಾಗರೂಕತೆ, ಅತಿವೇಗವೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸಿಮೆಂಟ್ ಲೋಡ್ ತುಂಬಿದ್ದ ಲಾರಿ ಇದಾಗಿದ್ದು, ಅಪಘಾತ ಬಳಿಕ ಚಾಲಕ ಲಾರಿಯನ್ನು ನಿಲ್ಲಸದೇ ಚಲಾಯಿಸಿಕೊಂಡು ಹೋಗಿದ್ದಾನೆ.
ಲಾರಿಯನ್ನು ಬೆನ್ನಟ್ಟಿದ ಸ್ಥಳೀಯರು, ಪಟ್ಟಣದ ಕೋರಮ್ಮ ದೇವಸ್ಥಾನದ ಬಳಿ ತಡೆದು ನಿಲ್ಲಿಸಿದ್ದು, ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ | Accident | ಕೊಲ್ಹಾರ ತಾಲೂಕಿನಲ್ಲಿ ಕಾರು-ಸಾರಿಗೆ ಬಸ್ ನಡುವೆ ಅಪಘಾತ; ಇಬ್ಬರ ಸಾವು