Site icon Vistara News

Accident Case | ಅಪರಿಚಿತ ವಾಹನ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಸಾವು

accident

ವಿಜಯಪುರ: ನಗರದ ಇಂಡಿ ಬೈಪಾಸ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ (Accident Case) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

60 ವರ್ಷದ ಶಾಂತಾಬಾಯಿ ಪರಶುರಾಮ ಪವಾರ್ ಮೃತ ದುರ್ದೈವಿ. ಇವರು ಬೈಪಾಸ್‌ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ವೇಗವಾಗಿ ಬಂದ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಡಿಕ್ಕಿ ಹೊಡೆತಕ್ಕೆ ರಸ್ತೆ ಪಕ್ಕದಲ್ಲಿ ಬಿದ್ದ ಶಾಂತಾಬಾಯಿ ಅವರಿಗೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆದರೆ, ಡಿಕ್ಕಿ ಹೊಡೆದ ವಾಹನ ಅಲ್ಲಿ ನಿಲ್ಲಿಸದೇ ಹೋಗಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ವಿಜಯಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident | ಕೊಲ್ಹಾರ ತಾಲೂಕಿನಲ್ಲಿ ಕಾರು-ಸಾರಿಗೆ ಬಸ್ ನಡುವೆ ಅಪಘಾತ; ಇಬ್ಬರ ಸಾವು

Exit mobile version