Site icon Vistara News

Accident news | ಕಾರ್ಕಳ ಬಳಿ ಅಪಘಾತ, ಮಗು ಸೇರಿ ಮೂವರು ಸಾವು

accident news

ಉಡುಪಿ: ಕಾರ್ಕಳದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಒಂದು ಮಗು ಸೇರಿ ಮೂವರು ಸಾವಿಗೀಡಾಗಿದ್ದಾರೆ.

ಕಾರ್ಕಳ- ವೇಣೂರು- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ನೆಲ್ಲಿಕಾರು ಬಳಿ ಅಪಘಾತ ನಡೆದಿದೆ. ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದ ಅಪಘಾತವಿದು. ಖಾಸಗಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆಂಧ್ರಪ್ರದೇಶ ಮೂಲದ ಗಂಡ ಹೆಂಡತಿ ಮತ್ತು ಮಗು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Exit mobile version