Site icon Vistara News

Accident | ಬೈಕ್‌ಗೆ ಗುದ್ದಿದ ಟಿಪ್ಪರ್‌: ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವು, ಒಬ್ಬ ಗಂಭೀರ

accident belagavi

ಬೆಳಗಾವಿ: ಟಿಪ್ಪರ್‌ ಒಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಖಾನಾಪುರ ತಾಲೂಕಿನ ಹಿಡಲಗಿ ಗ್ರಾಮದ ಪ್ರವೀಣ್ ಕೋಲಕಾರ (27) ಮತ್ತು ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದ ಐಶ್ವರ್ಯ ನರಸನ್ನವರ(20) ಮೃತರು. ಪಾರಿಶ್ವಾಡ್ ಗ್ರಾಮದ ಸಂತೋಷ ಪಾಟೀಲ ಗಾಯಗೊಂಡಿದ್ದು ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರವೀಣ್, ನರಸನ್ನವರ ಹಾಗೂ ಸಂತೋಷ ಅವರು ಬೈಕ್‌ನಲ್ಲಿ ನದಂಗಡದಿಂದ ಖಾನಾಪುರಕ್ಕೆ ಬರುತ್ತಿದ್ದ ವೇಳೆ ಟಿಪ್ಪರ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಟಿಪ್ಪರ್‌ ಗುದ್ದಿದ ಹೊಡೆತಕ್ಕೆ ಬೈಕ್‌ ರಸ್ತೆಗೆ ಉರುಳಿ ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಮತ್ತೊಬ್ಬರು ಗಾಯಗೊಂಡರು.

ಮೃತದೇಹಗಳನ್ನು ಖಾನಾಪುರ ‌ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಈ ನಡುವೆ, ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌ ಬಳಿಕ ನಿಯಂತ್ರಣ ತಪ್ಪಿ ರಸ್ತೆಯಿಂದ ಇಳಿಜಾರಿಗೆ ಇಳಿದಿದೆ. ಚಾಲಕ ಟಿಪ್ಪರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Accident | ಲಾರಿ- ಬೈಕ್‌ ನಡುವೆ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು

Exit mobile version