Accidental death: ಕಟ್ಟಿಂಗ್‌ ಮೆಷಿನ್‌ನಲ್ಲಿ ಮರ ಕಡಿಯುವಾಗ ಕುತ್ತಿಗೆ ಕಟ್‌! ವ್ಯಕ್ತಿ ಸಾವು - Vistara News

ಕರ್ನಾಟಕ

Accidental death: ಕಟ್ಟಿಂಗ್‌ ಮೆಷಿನ್‌ನಲ್ಲಿ ಮರ ಕಡಿಯುವಾಗ ಕುತ್ತಿಗೆ ಕಟ್‌! ವ್ಯಕ್ತಿ ಸಾವು

Accidental death : ಮರ ಕಡಿಯುವ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

Man dies after being hit by tree cutting machine
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಯಂತ್ರಗಳನ್ನು ಬಳಸುವಾಗ ಎಷ್ಟೇ ಎಚ್ಚರಿಕೆಯನ್ನು ಹೊಂದಿದ್ದರೂ ಸಾಕಾಗುವುದಿಲ್ಲ. ಸದ್ಯ ಮರ ಕಡಿಯುವಾಗ ಆಯತಪ್ಪಿ ಕಟ್ಟಿಂಗ್‌ ಮಿಷನ್‌ (Accidental death) ಮೇಲೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಳ್ತಂಗಡಿಯ ಸಾವ್ಯ ಹೊಸಮನೆ ಎಂಬಲ್ಲಿ ಘಟನೆ ನಡೆದಿದೆ. ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (36) ಮೃತ ದುರ್ದೈವಿ.

ಪ್ರಶಾಂತ್‌ ತಮ್ಮ ಮನೆಯ ಮುಂದೆ ಇದ್ದ ಮರವನ್ನು ಕಡಿಯಲು ಮರವೇರಿದ್ದರು. ಕಟ್ಟಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಮರದ ಮೇಲಿದ್ದ ಬಿದ್ದಿದ್ದಾರೆ. ಬೀಳುವಾಗ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿತ್ತು. ಕಟ್ಟಿಂಗ್ ಮೆಷಿನ್ ನೇರವಾಗಿ ಪ್ರಶಾಂತ್‌ ಕುತ್ತಿಗೆಗೆ ತಾಗಿದೆ.

ಗಂಭೀರ ಗಾಯಗೊಂಡು ತೀವ್ರ ರಕ್ತ ಸ್ರಾವವಾಗಿ ಒದ್ದಾಡುತ್ತಿದ್ದ ಪ್ರಶಾಂತ್‌ನನ್ನು ಕುಟುಂಬಸ್ಥರು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಪ್ರಶಾಂತ್‌ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪೈಂಟ್‌ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆಯ ತಲೆಯೇ ಕಟ್‌

ಹಿಂದೊಮ್ಮೆ ಬೆಂಗಳೂರಿನಲ್ಲೂ ಪೈಂಟ್‌ ಮಿಕ್ಸರ್‌ಗೆ ಕೂದಲು ಸಿಲುಕಿದ ಪರಿಣಾಮ ಮಹಿಳೆಯ ತಲೆಯೇ ಕಟ್ ಆಗಿ ಮೃತಪಟ್ಟಿದ್ದರು. ಯಂತ್ರಗಳು ಇರುವ ಉದ್ಯಮಗಳಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳು ಎಷ್ಟೇ ಎಚ್ಚರ ವಹಿಸಿದರೂ ಸಾಕಾಗುವುದಿಲ್ಲ. ಅವರು ಧರಿಸುವ ಬಟ್ಟೆ, ತಲೆ ಕೂದಲು, ವೇಲುಗಳೇ ಅವರಿಗೆ ಅಪಾಯ ತಂದಿಡುವುದುಂಟು. ಬೆಂಗಳೂರಿನ ಒಂದು ಕಾರ್ಖಾನೆಯಲ್ಲಿ ಅಂತಹುದೇ ಘಟನೆ (Accidental death) ನಡೆದಿತ್ತು. ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ (Paint Mixer) ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ (Woman Dead) ಮೃತಪಟ್ಟಿದ್ದರು.

ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ (Sri Paints Factory) ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದರು. ಪೈಂಟ್‌ ಮಿಕ್ಸಿಂಗ್‌ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್‌ನಲ್ಲಿ ಪೌಡರ್‌ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್‌ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿತ್ತು.

ಗ್ರೈಂಡರ್‌ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್‌ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್‌ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ಸತ್ತುಬಿದ್ದಿದ್ದು ಕಂಡುಬಂತು.

ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್‌ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು. ಆಗ ಆಕೆ ಹೊರಕ್ಕೆ ಎಸೆಯಲ್ಪಟ್ಟರು. ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿತ್ತು. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore Rural Election Result 2024 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಮಂಜುನಾಥ್​ಗೆ ಗೆಲುವು

Bangalore Rural Election Result 2024 : 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಅಶ್ವತ್ಥನಾರಾಯಣ ಗೌಡ ಅವರನ್ನು 2,06,870 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 54.12% ಮತಗಳನ್ನು ಹೊಂದಿತ್ತು.

VISTARANEWS.COM


on

Bangalore Rural Election Result 2024
Koo

ಬೆಂಗಳೂರು: ಅತ್ಯಂತ ಜಿದ್ದಾಜಿದ್ದಿನ ಸ್ಪರ್ಧೆ ಎದುರಿಸಿದ ಬೆಂಗಳೂರು ಗ್ರಾಮಾಂತರ ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಮಂಜುನಾಥ್​ ಅವರು ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ನಿಕಟ ಸ್ಪರ್ಧಿ ಡಿ.ಕೆ ಸುರೇಶ್ ವಿರುದ್ಧ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್​ ತೆಕ್ಕೆಯಿಂದ ಸ್ಥಾನವನ್ನು ಕೈವಶ ಮಾಡಿಕೊಂಡಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಅಶ್ವತ್ಥನಾರಾಯಣ ಗೌಡ ಅವರನ್ನು 2,06,870 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 54.12% ಮತಗಳನ್ನು ಹೊಂದಿತ್ತು.

2014ರ ಚುನಾವಣೆಯಲ್ಲಿ ಮೋದಿ ಅಲೆಯ ನಡುವೆಯೂ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಬಿಜೆಪಿಯ ಮುನಿರಾಜು ಗೌಡ ಅವರನ್ನು 2.31 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ. ಸುರೇಶ್ 6.52 ಲಕ್ಷ ಮತಗಳನ್ನು ಪಡೆದರೆ, ದೇವೇಗೌಡರು 4.21 ಲಕ್ಷ ಮತಗಳನ್ನು ಮಾತ್ರ ಪಡೆದಿದ್ದರು

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯ ಸಿ.ಪಿ.ಯೋಗೀಶ್ವರ್ ಅವರನ್ನು 1,30,275 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.44.73ರಷ್ಟು ಮತಗಳನ್ನು ಪಡೆದಿತ್ತು.

ಕ್ಷೇತ್ರದ ವಿಶೇಷತೆ ಏನು?

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ (Bangalore Rural Lok Sabha Constituency) 24 ಲಕ್ಷ ಮತದಾರರನ್ನು ಹೊಂದಿರುವ ದೇಶದ ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ಸ್ಥಾನವು 2008ರಲ್ಲಿ ಕ್ಷೇತ್ರ ಮರುವಿಂಗಡಣೆ ನಂತರ ಅಸ್ತಿತ್ವಕ್ಕೆ ಬಂತು. ಇಲ್ಲಿ ಮೊದಲ ಚುನಾವಣೆ 2009ರಲ್ಲಿ ಇಲ್ಲಿ ನಡೆಯಿತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ (JDS) ನಾಯಕ ಎಚ್.ಡಿ.ಕುಮಾರಸ್ವಾಮಿ (HD kumaraswmay) ಈ ಕ್ಷೇತ್ರದ ಮೊದಲ ಸಂಸದ. ಆದರೆ, 2013ರ ಉಪಚುನಾವಣೆ ಸೇರಿದಂತೆ ಸತತ ಎರಡು ಬಾರಿ ಕಾಂಗ್ರೆಸ್ ಈ ಸ್ಥಾನವನ್ನು ಗೆದ್ದುಕೊಂಡಿದೆ.

ಕ್ಷೇತ್ರ ವಿಂಗಡಣೆಗೆ ಮೊದಲು ಇದನ್ನು ಕನಕಪುರ ಲೋಕಸಭಾ ಕ್ಷೇತ್ರವಾಗಿ ಗುರುತಿಸಲಾಗಿತ್ತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡ ಅವರು ಇಲ್ಲಿ ಕೊನೇ ಬಾರಿ ಗೆದ್ದಿದ್ದರು. ಎಂ.ವಿ.ಚಂದ್ರಶೇಖರ ಮೂರ್ತಿ ಈ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಕ್ಷೇತ್ರವು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ, ಅವುಗಳಲ್ಲಿ ಏಳು ಹಿಂದಿನ ಕನಕಪುರ ಲೋಕಸಭಾ ಕ್ಷೇತ್ರದ ಭಾಗವಾಗಿದ್ದವು. ತುಮಕೂರು ಜಿಲ್ಲೆಯ ಕುಣಿಗಲ್ ಜೊತೆಗೆ ಬೆಂಗಳೂರು ದಕ್ಷಿಣ, ಆನೇಕಲ್ ಮತ್ತು ರಾಜರಾಜೇಶ್ವರಿ ನಗರ ಹೊಸ ವಿಧಾನಸಭಾ ಕ್ಷೇತ್ರಗಳು ಇದರ ಭಾಗವಾಗಿವೆ.

ವ್ಯಾಪ್ತಿ ಹೇಗಿದೆ?

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಣಿಗಲ್, ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಬಿಜೆಪಿ 2, ಜೆಡಿಎಸ್ 1 ಸ್ಥಾನ ಹೊಂದಿವೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 24,97,458. 2019ರಲ್ಲಿ ಶೇ.64.9ರಷ್ಟು ಮತದಾನವಾಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ನಗರ ಮತದಾರರು ಒಟ್ಟು ಮತದಾರ ಪೈಕಿ 54.2% ರಷ್ಟಿದ್ದಾರೆ. ಸರಾಸರಿ ಸಾಕ್ಷರತಾ ಪ್ರಮಾಣವು 68.91% ಆಗಿತ್ತು.

Continue Reading

Lok Sabha Election 2024

Election Results 2024: ಧಾರವಾಡದ ಮತ ಎಣಿಕೆ ಕೇಂದ್ರಕ್ಕೆ ವಾಮಾಚಾರ! ಮರದಡಿ ಮೊಟ್ಟೆ ಇಟ್ಟ ಕಿಡಿಗೇಡಿಗಳು

Election Results 2024 : ಧಾರವಾಡದ ಮತ ಎಣಿಕೆ ಕೇಂದ್ರದಲ್ಲಿ ದುಷ್ಟರು ವಾಮಾಚಾರ (Black Magic) ನಡೆಸಿದರೆ, ಚಿಕ್ಕೋಡಿಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದ್ದಾನೆ.

VISTARANEWS.COM


on

By

Election Results 2024
Koo

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ (Election Results 2024) ಗೆಲುವು -ಸೋಲಿನ ಲೆಕ್ಕಚಾರ ನಡೆಯುತ್ತಿರುವಾಗಲೇ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದ ಬಳಿ ದುಷ್ಕರ್ಮಿಗಳಿಂದ ವಾಮಾಚಾರ (Black Magic) ನಡೆದಿದೆ. ಮರದ ಪೊದೆಯಲ್ಲಿ ಎರಡು ಮೊಟ್ಟೆಗಳನ್ನು ಇಟ್ಟು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಮರದಡಿ ಮೊಟ್ಟೆ ಇರುವುದನ್ನು ಕಂಡು ಕ್ಷಣಕಾಲ ಅಲ್ಲಿದ್ದವರು ಆತಂಕಗೊಂಡರು.

ಚುನಾವಣೆಯ ಫಲಿತಾಂಶದಲ್ಲಿ ಗೆಲವು ಸಾಧಿಸಲು ಯಾರಾದರೂ ಹೀಗೆ ಮಾಡಿದ್ದರಾ ಎಂಬ ಅನುಮಾನ ಮೂಡಿದೆ. ಮೊಟ್ಟೆಯನ್ನು ತಂದಿಟ್ಟವರು ಯಾರು? ನಿಜಕ್ಕೂ ಅಲ್ಲಿ ವಾಮಾಚಾರ ನಡೆದಿದ್ಯಾ ಅಥವಾ ಮರದಡಿ ಕುಳಿತಾಗ ಮರೆತು ಬಿಟ್ಟು ಹೋಗಿದ್ದರಾ ಎಂಬುದು ತಿಳಿದು ಬಂದಿಲ್ಲ.

ಅಂದಹಾಗೇ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಗೆಲುವು ಸಾಧಿಸಿದ್ದಾರೆ. ಐದನೆಯ ಬಾರಿಯೂ ಮತದಾರರು ಪ್ರಲ್ಹಾದ್ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ 6,82,400 ಮತ ಗಳಿಸಿದರೆ, ಕಾಂಗ್ರೆಸ್‌ ಅಭ್ಯರ್ಥಿ ವಿನೋದ್ ಅಸೂಟಿ 5,87,397 ಮತ ಪಡೆದು, 95,003 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

ಇದನ್ನೂ ಓದಿ:Election Results 2024: ಮೈತ್ರಿಕೂಟಕ್ಕೆ ಕಡಿಮೆ ಸ್ಥಾನ; ವಿಷಯ ತಿಳಿದು ಬಿಜೆಪಿ ಅಭಿಮಾನಿ ಹೃದಯಾಘಾತಕ್ಕೆ ಬಲಿ

ಚಿಕ್ಕೋಡಿಯಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದ ಕಿಡಿಗೇಡಿ

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಹಿನ್ನೆಲೆಯಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಪಾಕಿಸ್ತಾನ್‌ಗೆ ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಕೂಗಿದ್ದಾನೆ.

ಈ ಹಿಂದೆ ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದಾಗ ಕಾಂಗ್ರೆಸ್‌ ನೂತನ ಸದಸ್ಯ ನಾಸಿರ್ ಹುಸೇನ್ (Nasir Hussain) ಬೆಂಬಲಿಗರು ವಿಧಾನಸೌಧದೊಳಗೇ ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ದೇಶದ್ರೋಹದ (Sedition Case) ಕೆಲಸ ಮಾಡಿ ಉದ್ಧಟತನ ಮೆರೆದಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು.

ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಮಾಡಿದ ಪ್ರಕರಣಕ್ಕೆ (Sedition Case) ಸಂಬಂಧಿಸಿ ಬಂಧಿತರಾದ ಮೂವರಿಗೆ (Three Accused gets Bail) ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು (Bangalore Court) ನೀಡಿತ್ತು.

‌ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ಗೆ ಗೆಲವು

ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಣ್ಣಸಾಬ್ ಜೊಲ್ಲೆ ವಿರುದ್ಧ 96,253 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೋಲ್ಲೆ 5,83,926 ಮತ ಪಡೆದು, 96,253 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಹೋಳಿಗೆ ಗುಲಾಬಿ ಬಣ್ಣ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Kalaburagi Election Result 2024: ಖರ್ಗೆ ಕೋಟೆಯಲ್ಲಿ ಅಳಿಯನ ದರ್ಬಾರ್;‌ ರಾಧಾಕೃಷ್ಣ ದೊಡ್ಡಮನಿಗೆ ಗೆಲುವು

Lok Sabha Election: ರಾಧಾಕೃಷ್ಣ ದೊಡ್ಡಮನಿ ಅವರು ಇದುವರೆಗೆ ಚುನಾವಣೆಗಳ ವೇಳೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದರು. ಇನ್ನು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರೂ ಆಗಿದ್ದು, ಸ್ಥಳೀಯವಾಗಿ ಹಿಡಿತ ಸಾಧಿಸಲು ಅಳಿಯನ ಗೆಲುವು ನಿರ್ಣಾಯಕವಾಗಿತ್ತು ರಾಜ್ಯದಲ್ಲಿ ಪ್ರಿಯಾಂಕ್‌ ಖರ್ಗೆ ಇನ್ನಷ್ಟು ಬಲಿಷ್ಠವಾಗಲು ಈ ಗೆಲುವು ಸಹಕಾರಿಯಾಗುವುದಿತ್ತು. ಹಾಗಾಗಿ, ಪ್ರಸಕ್ತ ಲೋಕಸಭೆ ಚುನಾವಣೆಯಲು ಖರ್ಗೆ ಕುಟುಂಬಕ್ಕೆ ಪ್ರತಿಷ್ಠೆಯ ಕಣವಾಗಿತ್ತು.

VISTARANEWS.COM


on

Kalaburagi Election Result 2024
Koo

ಕಲಬುರಗಿ: ಬಿಸಿಲ ನಾಡು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭೆ ಚುನಾವಣೆ (Kalaburagi Election Result 2024) ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿಯ ಉಮೇಶ್‌ ಜಾಧವ್‌ (Umesh Jadhav) ಅವರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬಲ ಹೆಚ್ಚಾದಂತಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸೋಲಿನ ಕಹಿಯನ್ನು ಮರೆಮಾಚಲು ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಇನ್ನಿಲ್ಲದ ಪ್ರಯತ್ನ ಮಾಡಿದ್ದರು. ಇನ್ನು, ನರೇಂದ್ರ ಮೋದಿ ಅವರ ಅಲೆ, ಭಾರತ್‌ ಮಾಲಾ ಯೋಜನೆ, ವಂದೇ ಭಾರತ್‌ ರೈಲು ಸೇರಿ ಹಲವು ಯೋಜನೆಗಳನ್ನು ಮುಂದಿಟ್ಟುಕೊಂಡು ಉಮೇಶ್‌ ಜಾಧವ್‌ ಅವರು ಚುನಾವಣೆ ಎದುರಿಸಿದ್ದರು. ಆದರೂ ಅದು ಫಲ ನೀಡಿಲ್ಲ.

ರಾಧಾಕೃಷ್ಣ ದೊಡ್ಡಮನಿ ಅವರು ಇದುವರೆಗೆ ಚುನಾವಣೆಗಳ ವೇಳೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಿದ್ದರು. ಇನ್ನು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರೂ ಆಗಿದ್ದು, ಸ್ಥಳೀಯವಾಗಿ ಹಿಡಿತ ಸಾಧಿಸಲು ಅಳಿಯನ ಗೆಲುವು ನಿರ್ಣಾಯಕವಾಗಿತ್ತು. ರಾಜ್ಯದಲ್ಲಿ ಪ್ರಿಯಾಂಕ್‌ ಖರ್ಗೆ ಇನ್ನಷ್ಟು ಬಲಿಷ್ಠವಾಗಲು ಈ ಗೆಲುವು ಸಹಕಾರಿ ಆಗುತ್ತಿತ್ತು. ಹಾಗಾಗಿ, ಪ್ರಸಕ್ತ ಲೋಕಸಭೆ ಚುನಾವಣೆಯಲು ಖರ್ಗೆ ಕುಟುಂಬಕ್ಕೆ ಪ್ರತಿಷ್ಠೆಯ ಕಣವಾಗಿತ್ತು.

Lok Sabha Election 2024 and Fight between Radhakrishna Doddamani and Umesh Jadhav in Kalaburagi and Mallikarjuna Kharge strategy for election campaign

2019ರ ಚುನಾವಣೆ ಫಲಿತಾಂಶ ಏನಾಗಿತ್ತು?

ಪ್ರಸಕ್ತ ಸಾರ್ವತ್ರಿಕ ಚುನಾವಣೆಯಂತೆ 2019ರಲ್ಲೂ ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠಿತ ಕ್ಷೇತ್ರದಲ್ಲಿ ಬಿಜೆಪಿಯ ಉಮೇಶ್‌ ಜಾಧವ್‌ ಅವರು ಗೆಲುವು ಸಾಧಿಸಿದ್ದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ನರೇಂದ್ರ ಮೋದಿ ಅವರ ಅಲೆಯಿಂದಾಗಿ ಉಮೇಶ್‌ ಜಾಧವ್‌ ಅವರು 6,20,192 ಮತಗಳನ್ನು ಪಡೆದರೆ, ಮಲ್ಲಿಕಾರ್ಜುನ ಖರ್ಗೆ ಅವರು 5,24,740 ಮತಗಳನ್ನು ಪಡೆದು ಸೋಲನುಭವಿಸಿದರು. ಸೋಲಿನ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಪ್ರವೇಶಿಸಿಸಿದರು. ಇನ್ನು, 2014ರಲ್ಲಿ ಕಲಬುರಗಿಯಲ್ಲಿ ಬಿಜೆಪಿ ರೇವು ನಾಯಕ್‌ ಬೆಳಮಗಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

Continue Reading

ಪ್ರಮುಖ ಸುದ್ದಿ

Chamarajanagar Election Result 2024 : ಚಾಮರಾಜನಗರದಲ್ಲಿ ಸುನೀಲ್ ಬೋಸ್​ಗೆ ಗೆಲುವು

Chamarajanagar Election Result 2024: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

VISTARANEWS.COM


on

Chamarajanagar Election Result 2024
Koo

ಬೆಂಗಳೂರು: ಮೀಸಲು ಕ್ಷೇತ್ರವಾದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದ ಸುನೀಲ್​ ಬೋಸ್​​ ಗೆಲುವು ಸಾಧಿಸಿದ್ದಾರೆ (Chamarajanagar Election Result 2024). ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಬಾಲರಾಜ್​ ವಿರುದ್ಧ ಭಾರೀ ಮತಗಳ ಅಂತರದ ಅಂತರದ ವಿಜಯ ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು.

ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

Continue Reading
Advertisement
Bangalore Rural Election Result 2024
ಪ್ರಮುಖ ಸುದ್ದಿ2 mins ago

Bangalore Rural Election Result 2024 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ. ಮಂಜುನಾಥ್​ಗೆ ಗೆಲುವು

Election Results 2024
ದೇಶ2 mins ago

Election Results 2024: “ಪ್ರಧಾನಿ ಮೋದಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ”-ಕಾಂಗ್ರೆಸ್‌ ಮೊದಲ ರಿಯಾಕ್ಷನ್‌

Babar Azam
ಕ್ರೀಡೆ3 mins ago

Babar Azam: ಸಹ ಆಟಗಾರನನ್ನು ಘೇಂಡಾಮೃಗಕ್ಕೆ ಹೋಲಿಸಿದ ಬಾಬರ್​ ಅಜಂ; ವಿಡಿಯೊ ವೈರಲ್

Election Results 2024
Lok Sabha Election 20248 mins ago

Election Results 2024: ಧಾರವಾಡದ ಮತ ಎಣಿಕೆ ಕೇಂದ್ರಕ್ಕೆ ವಾಮಾಚಾರ! ಮರದಡಿ ಮೊಟ್ಟೆ ಇಟ್ಟ ಕಿಡಿಗೇಡಿಗಳು

Kalaburagi Election Result 2024
ಕಲಬುರಗಿ10 mins ago

Kalaburagi Election Result 2024: ಖರ್ಗೆ ಕೋಟೆಯಲ್ಲಿ ಅಳಿಯನ ದರ್ಬಾರ್;‌ ರಾಧಾಕೃಷ್ಣ ದೊಡ್ಡಮನಿಗೆ ಗೆಲುವು

Chamarajanagar Election Result 2024
ಪ್ರಮುಖ ಸುದ್ದಿ18 mins ago

Chamarajanagar Election Result 2024 : ಚಾಮರಾಜನಗರದಲ್ಲಿ ಸುನೀಲ್ ಬೋಸ್​ಗೆ ಗೆಲುವು

Election Results 2024
Lok Sabha Election 202434 mins ago

Election Results 2024: ಇಂದೋರ್‌ನಲ್ಲಿ NOTAಕ್ಕೆ ಲಭಿಸಿತು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತ; ಹಿಂದಿನ ದಾಖಲೆಗಳೆಲ್ಲ ಉಡೀಸ್‌

Karnataka election results 2024
ಕರ್ನಾಟಕ47 mins ago

Karnataka Election Results 2024: ಮೈಸೂರಿನಲ್ಲಿ ಮೈತ್ರಿ ಮುಂದೆ ಮಂಡಿಯೂರಿದ ಸಿದ್ದರಾಮಯ್ಯ ತಂತ್ರಗಾರಿಕೆ

Koppal Election Result 2024
ಕೊಪ್ಪಳ47 mins ago

Koppal Election Result 2024: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ್‌ ಹಿಟ್ನಾಳ್‌ ಜಯಭೇರಿ

Chikkodi Election Result 2024
ಚಿಕ್ಕೋಡಿ59 mins ago

Chikkodi Election Result 2024: ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿ’ಹೋಳಿ’; ಜೊಲ್ಲೆಗೆ ಸೋಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ8 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ23 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ24 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌