Site icon Vistara News

Udupi News: ಮಾಜಿ ಶಾಸಕ ರಘುಪತಿ ಭಟ್ ಪತ್ನಿ ನಾಪತ್ತೆ, ಆತ್ಮಹತ್ಯೆ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ

K Raghupati Bhat and wife Padmapriya

ಉಡುಪಿ: ಮಾಜಿ ಶಾಸಕ ರಘುಪತಿ ಭಟ್‌ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಉಡುಪಿ ಜಿಲ್ಲಾ (Udupi News) ಸಿಜೆಎಂ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಆರೋಪಿ ಅತುಲ್ ರಾವ್

ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪದ್ಮಪ್ರಿಯ ಪತ್ತೆಯಾಗಿದ್ದರು. 2008ರ ಜೂನ್ 10 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ ಆರೋಪದಡಿ ದೂರು ದಾಖಲಾಗಿತ್ತು. ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ರಾವ್ ಅನುಕೂಲ ಮಾಡಿಕೊಟ್ಟಿದ್ದ. ಪ್ರಕರಣದಲ್ಲಿ ಮಣಿಪಾಲ ಠಾಣಾ ಪೊಲೀಸ್ ಹಾಗೂ ಸಿಒಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.

2009ರಲ್ಲಿ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಪದ್ಮಪ್ರಿಯ ಅಪಹರಣವಾಗಿದೆ ಎಂಬಂತೆ ಬಿಂಬಿಸಿ ಆಕೆಯನ್ನು ಅತುಲ್ ದೆಹಲಿಗೆ ಕರೆದೊಯ್ದಿದ್ದ. ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ನಕಲಿ ದಾಖಲೆ ಸೃಷ್ಟಿಸಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪದ್ಮಪ್ರಿಯ ಪತ್ತೆಯಾಗಿದ್ದರು. ಇದೀಗ ಪ್ರಕರಣದಲ್ಲಿ ಆರೋಪಿಗೆ ಜೈಲು ಶಿಕ್ಷೆಯಾಗಿದೆ.

ಇದನ್ನೂ ಓದಿ | ಮಾಜಿ ಗೆಳತಿಯನ್ನು ರೇಪ್ ಮಾಡಿ, 111 ಬಾರಿ ಚಾಕು ಇರಿದು ಕೊಂದವನಿಗೆ ರಷ್ಯಾ ಅಧ್ಯಕ್ಷ ಪುಟಿನ್ ಕ್ಷಮಾದಾನ!

gang rape in Mandya

ಅಪ್ರಾಪ್ತೆ ಮೇಲೆ ದೌರ್ಜನ್ಯ ; ಅತ್ಯಾಚಾರ ಎಸಗಿ ವಿಡಿಯೊ ಮಾಡಿದ ಕಿರಾತಕರು!

ಮಂಡ್ಯ: ಅಪ್ರಾಪ್ತೆಯನ್ನು ಸಹಪಾಠಿಗಳೇ ಸೇರಿ ಸಾಮೂಹಿಕ ಅತ್ಯಾಚಾರ (Physical abuse) ಎಸಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. 17 ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದು ಸಹಪಾಠಿಗಳೇ ಕೃತ್ಯ ಎಸಗಿದ್ದಾರೆ. ಕಿರಾತಕರು ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದು, ಅದು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಪೋಷಕರ ದೂರಿನ ಆಧಾರದ ಮೇಲೆ ಎ1 ಪುನೀತ್, ಎ2 ಮಂಜುನಾಥ್, ಎ3 ಸಿದ್ದರಾಜು ಎಂಬುವವರನ್ನು ಬಂಧಿಸಲಾಗಿದೆ. ಮೂವರು ಕೂಡ ಮದ್ದೂರು ತಾಲೂಕಿನವರು ಎಂದು ತಿಳಿದು ಬಂದಿದೆ.

ಯುವ ದಸರಾದಲ್ಲಿ ಪರಿಚಯ

ಪುನೀತ್‌ ಎಂಬಾತ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಪರಿಚಯದ ಬಳಿಕ ಪ್ರೀತಿ ಮಾಡುವುದಾಗಿ ನಂಬಿಸಿ, ಸಲುಗೆಯನ್ನು ಬೆಳೆಸಿಕೊಂಡಿದ್ದ. ಈ ನಡುವೆ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿದ್ದ ಕಾಮುಕ, ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದ.

ಇದನ್ನೂ ಓದಿ: Viral Video: ಅರೆಬರೆ ಬಟ್ಟೆಯಲ್ಲೇ ರೈಲಿನಲ್ಲಿ ಡ್ಯಾನ್ಸ್‌ ಮಾಡಿದ ಯುವತಿ; ಛೀಮಾರಿ ಹಾಕಿದ ಜನ

ವಿಡಿಯೊ ಕಳುಹಿಸಿ ಬ್ಲ್ಯಾಕ್‌ ಮೇಲ್‌

ಅತ್ಯಾಚಾರದ ವಿಡಿಯೊ ಮಾಡಿಕೊಂಡ ಕಿರಾತಕರು ಆನಂತರ ಅಪ್ರಾಪ್ತೆ ಮೊಬೈಲ್‌ಗೆ ಕಳುಹಿಸಿ ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದಾರೆ. ಇವರ ಕಿರುಕುಳದಿಂದ ಕಂಗಲಾದ ಅಪ್ರಾಪ್ತೆ ನಡೆದಿದ್ದನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಅಪ್ರಾಪ್ತೆ ಪೋಷಕರಿಂದ ದೂರು ದಾಖಲಾದ ಬೆನ್ನಲ್ಲೇ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಮದ್ದೂರು ಪಟ್ಟಣ ಠಾಣೆಯಲ್ಲಿ ಅತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version