Site icon Vistara News

Bengaluru News: ಶೇಂಗಾ, ಸೋಯಾಬೀನ್ ಬೆಳೆಗಾರರಿಗೆ ಮಧ್ಯಂತರ ಬೆಳೆ ವಿಮೆ ಬಿಡುಗಡೆಗೆ ಕ್ರಮ: ಸಚಿವ ಪ್ರಹ್ಲಾದ್‌ ಜೋಶಿ

Action to release interim crop insurance for groundnut soybean growers says Minister Pralhad Joshi

ಬೆಂಗಳೂರು: ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ (Groundnut, Soybean) ಬೆಳೆಗಳಿಗೂ ಮಧ್ಯಂತರ ಬೆಳೆ ವಿಮೆ (Insurance) ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಅವರು, ಬೆಳೆ ಹಾನಿ ಸಮೀಕ್ಷೆಗೂ ಮೊದಲೇ ಶೇಂಗಾ ಹಾಗೂ ಸೋಯಾಬಿನ್ ಬೆಳೆ ಕಟವು ಆಗಿದ್ದರಿಂದ ಈ ಎರಡೂ ಬೆಳೆಗಳನ್ನು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ಪ್ರಕ್ರಿಯೆಯಿಂದ ವಿಮಾ ಕಂಪನಿ ಕೈ ಬಿಟ್ಟಿತ್ತು.

ಧಾರವಾಡ ಜಿಲ್ಲಾಡಳಿತ ಮಧ್ಯಂತರ ಬೆಳೆ ವಿಮೆ ಪರಿಹಾರಕ್ಕೆ ಸಲ್ಲಿಸಿದ ರಿಪೋರ್ಟ್‌ನಲ್ಲಿ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ಬೆಳೆಗಳನ್ನು ಎಸ್‌ಬಿಐ ವಿಮೆ ಕಂಪನಿ ಅಂಗೀಕರಿಸಿ ಮಧ್ಯಂತರ ವಿಮೆ ಹಣ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ: Business guide : ನೀವು ಮಾಸ್ಟರ್‌ ಆಗಬೇಕಿದ್ದರೆ, ಕಲಿಸುವ ಬದ್ಧತೆಯನ್ನು ಮರೆಯದಿರಿ

ಈ ವಿಚಾರ ಗಮನಕ್ಕೆ ಬರುತ್ತಲೇ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ವಿಮೆ ಕಂಪನಿಯನ್ನು ಸಂಪರ್ಕಿಸಿ, ಸಭೆ ನಡೆಸಿ ಮುಂಗಾರಿನ ಶೇಂಗಾ ಮತ್ತು ಸೋಯಾಬೀನ್ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಈ ಬೆಳೆಗಾರರ ಸಮಸ್ಯೆ ಅರಿತು ಕೇಂದ್ರ ಕೃಷಿ ಸಚಿವ ಅರ್ಜುನ್ ಅವರೊಂದಿಗೂ ಚರ್ಚೆ ನಡೆಸಿ, ಫಸಲ್ ಬಿಮಾ ಸಿಇಒ ರಿತೇಶ್ ಚೌಹಾನ್ ಮತ್ತು ಎಸ್‌ಬಿಐ ವಿಮೆ ಕಂಪನಿಯ ರಾಷ್ಟ್ರೀಯ ಮುಖ್ಯಸ್ಥ ಪಿಯೂಷ್ ಸಿಂಗ್ ಅವರ ಗಮನ ಸೆಳೆದು ಶೇಂಗಾ, ಸೋಯಾಬೀನ್ ಬೆಳೆಗಾರರಿಗೂ ಮಧ್ಯಂತರ ಬೆಳೆ ವಿಮೆ ಪರಿಹಾರ ಕೈ ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪಂದ್ಯ ಆಡಲು ಹೆಲಿಕಾಪ್ಟರ್ ಮೂಲಕ ನೇರವಾಗಿ ಮೈದಾನಕ್ಕಿಳಿದ ಡೇವಿಡ್​ ​ವಾರ್ನರ್​; ವಿಡಿಯೊ ವೈರಲ್​

ಧಾರವಾಡ ಜಿಲ್ಲೆಯ ಶೇಂಗಾ ಹಾಗೂ ಸೋಯಾಬೀನ್ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮಧ್ಯಂತರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪತ್ರ ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.

Exit mobile version