Site icon Vistara News

Lakshmi Hebbalkar: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು? ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Minister Lakshmi Hebbalkar visit Anganawadi workers protest place

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನಡೆಸುತ್ತಿರುವ ಅನಿರ್ದಿಷ್ಟ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಂಗನವಾಡಿ ನೌಕರರಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: Lakshmi Hebbalkar: ಪೌಷ್ಟಿಕ ಆಹಾರ ತಯಾರಿಕೆ ಘಟಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ

ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಆರಂಭಿಸುವ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು ಮಾಡುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಸಚಿವರು ಹೇಳಿದರು.

ಕಳೆದ 48 ವರ್ಷಗಳಲ್ಲಿ ಈವರೆಗೂ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಒಂದು ಮಗುವೂ ಅನಾರೋಗ್ಯದಿಂದ ಬಳಲಿ ಅಥವಾ ಸಾವನ್ನಪ್ಪಿರುವ ಘಟನೆಗಳು ನಡೆದಿಲ್ಲ. ಗೃಹಲಕ್ಷ್ಮೀ ಸೇರಿದಂತೆ ನಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿ ಎಂದರು.

ಇದೇ ವೇಳೆ ಸಚಿವರು, ಅಂಗನವಾಡಿ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಸಿಡಿಲು ಬಡಿದು ಹಸು ಸಾವು; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ಹಿರಿಯ ನಾಗರಿಕರ ಹಾಗೂ ವಿಕಲಾಂಗ ಚೇತನರ ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version