Site icon Vistara News

Actor Darshan: ಇಂದೇ ಪರಪ್ಪನ ಅಗ್ರಹಾರ ಸೇರ್ತಾರ ದರ್ಶನ್‌, ಪವಿತ್ರಾ ಗೌಡ?

Actor Darshan

Actor Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ (Actor Darshan) ಮತ್ತು ಅವರ ಗೆಳತಿ ಪವಿತ್ರಾ ಗೌಡ ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗುವ ಸಾಧ್ಯತೆ ಇದೆ. ಹೌದು, ಕೊಲೆ ಪ್ರಕರಣದಲ್ಲಿ ಎ 1 ಮತ್ತು ಎ 2 ಆರೋಪಿಗಳಾಗಿರುವ ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ಇಂದು ಜಡ್ಜ್‌ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಹುತೇಕ ಶಿಕ್ಷೆ ಜಾರಿಯಾಗುವ ಸಾಧ್ಯತೆ ಇದೆ. ಹೀಗಾಗಿ ಸದ್ಯ ಇಬ್ಬರೂ ಆತಂಕದಲ್ಲಿಯೇ ಸಮಯ ದೂಡುತ್ತಿದ್ದಾರೆ.

ಜೂನ್‌ 11ರಿಂದ ಜೂನ್‌ 17ರ ವರೆಗೆ ಪೊಲೀಸರು ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಜೂನ್‌ 17ರಂದು ಸರ್ಕಾರಿ ರಜೆ ಇರುವುದರಿಂದ ಪೊಲೀಸರು ಎರಡು ದಿನಗಳ ಮೊದಲೇ ಕೋರಮಂಗಲದ ಜಡ್ಜ್​​​​ ನಿವಾಸಕ್ಕೆ ಇಬ್ಬರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪೊಲೀಸರು ದರ್ಶನ್‌ ಅವರ ಪ್ರಾಥಮಿಕ ವಿಚಾರಣೆಯನ್ನು ಮುಗಿಸಿದ್ದಾರೆ. ಹೀಗಾಗಿ ದರ್ಶನ್‌ ಮತ್ತು ಪವಿತ್ರಾ ಗೌಡ ಇಬ್ಬರನ್ನೂ ನ್ಯಾಯಾಧೀಶರು ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ಸಾಧ್ಯತೆಯೇ ಹೆಚ್ಚಿದೆ.

ಮಧ್ಯಾಹ್ನದ ವೇಳೆಗೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈಗಾಗಲೇ ಮಹಿಳಾ ಸಾಂತ್ವನ ಕೇಂದ್ರದಿಂದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ಬಟ್ಟೆ, ಬ್ಯಾಗ್ ಸಮೇತ ಠಾಣೆಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆಗಮಿಸಿದ್ದು, ಪ್ರಕರಣದ ಬಗ್ಗೆ ಕಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದರ್ಶನ್ ವಿರುದ್ಧ ತೆರಯಲಾಗುತ್ತಾ ರೌಡಿಶೀಟ್?

ಸದ್ಯ ಹೀಗೊಂದು ಸಾಧ್ಯತೆ ಇದೆ ಎನ್ನುವ ಚರ್ಚೆ ಆರಂಭವಾಗಿದೆ. ದರ್ಶನ್ ವಿರುದ್ಧ ರೌಡಿಶೀಟ್ ತೆರೆಯುವ ಬಗ್ಗೆ ಕಾನೂನು ತಜ್ಞರ ಜತೆ ಪೊಲೀಸರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪದೇ ಪದೆ ಕ್ರೈಂನಲ್ಲಿ ಭಾಗಿಯಾಗಿದ್ದರೆ ರೌಡಿಶೀಟ್‌ ತೆರೆಯಬಹುದು. ಆದರೆ 2011ರ ಬಳಿಕ ದರ್ಶನ್ ವಿರುದ್ಧ ಯಾವುದೇ ಕ್ರೈಂ ಪ್ರಕರಣ ದಾಖಲಾಗಿಲ್ಲ. ಈಗ ಕೊಲೆ ಅರೋಪದಲ್ಲಿ ಬಂಧಿತರಾಗಿದ್ದಾರೆ. ಹೀಗಾಗಿ ಈ ಬಗ್ಗೆ ಕಾನೂನು ತಜ್ಞರ ಬಳಿ ಪೊಲೀಸರ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್‌; ದುಃಖ ತೋಡಿಕೊಂಡ ಚಾಲೆಂಜಿಂಗ್‌ ಸ್ಟಾರ್‌ ಹೇಳಿದ್ದೇನು?

ದರ್ಶನ್‌ ಅವರ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ದರ್ಶನ್‌ ಸೂಚನೆ ಕೊಟ್ಟಿದ್ದರಿಂದಲೇ ಈ ಕೃತ್ಯ ಎಸಗಿರುವುದಾಗಿ ಆರಂಭದಲ್ಲಿ ಬಂಧಿತರು ಬಾಯ್ಬಿಟ್ಟಿದ್ದರು. ಹೀಗಾಗಿ ಜೂನ್‌ 11ರಂದು ದರ್ಶನ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್‌ ವಶದಲ್ಲಿರುವ ದರ್ಶನ್‌ ಈಗ ಕೃತ್ಯದ ಬಗ್ಗೆ ಪ್ರಾಯಶ್ಚಿತ ಪಡುತ್ತಿದ್ದಾರೆ ಎಂದು ಆಪ್ತಮೂಲಗಳು ತಿಳಿಸಿವೆ.

Exit mobile version