Site icon Vistara News

Actor Darshan: ಇಂದು ನಟ ದರ್ಶನ್‌ ಭವಿಷ್ಯ ನಿರ್ಧಾರ; ಕೋರ್ಟ್‌ ತೀರ್ಪು ಏನಿರಲಿದೆ?

Actor Darshan

Actor Darshan

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು (ಜೂನ್‌ 15) ನಿರ್ಧಾರವಾಗಲಿದೆ. ಕೊಲೆ ಪ್ರಕರಣದ ಆರೋಪದಲ್ಲಿ ಪೊಲೀಸರು ದರ್ಶನ್‌ ಮತ್ತು ಅವರ ಸಹಚರರನ್ನು ಜೂನ್ 11ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದಿದ್ದರು. ಇಂದು ಮಧ್ಯಾಹ್ನ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಕೋರ್ಟ್‌ ತೀರ್ಪು ನೀಡಲಿದೆ. ಹೀಗಾಗಿ ದರ್ಶನ್‌ ಅವರಿಗೆ ಇಂದಿನ ದಿನ ನಿರ್ಣಾಯಕವಾಗಲಿದೆ.

ಮಧ್ಯಾಹ್ನದ ವೇಳೆಗೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಹುತೇಕ ದರ್ಶನ್ ಮತ್ತು ಸಹಚರರು ಜೈಲು ಸೇರುವ ಸಾಧ್ಯತೆ ಎನ್ನಲಾಗಿದೆ.

ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈಗಾಗಲೇ ಮಹಿಳಾ ಸಾಂತ್ವನ ಕೇಂದ್ರದಿಂದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ಇವರನ್ನೂ ಇಂದೇ ಪರಪ್ಪನ ಅಗ್ರಹಾರಕ್ಕೆ ಇಂದೇ ಶಿಫ್ಟ್ ಸಾಧ್ಯತೆ ಇದ್ದು, ಬಟ್ಟೆ, ಬ್ಯಾಗ್ ಸಮೇತ ಠಾಣೆಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಬ್ಬ ವ್ಯಕ್ತಿ ಪೊಲೀಸ್‌ ವಶಕ್ಕೆ

ಈ ಮಧ್ಯೆ ಪೊಲೀಸರು ತಡರಾತ್ರಿ ದರ್ಶನ್‌ ಮತ್ತು ಸಹಚರರಿಗೆ ಸಹಾಯ ಮಾಡಿದ್ದ ಇನ್ನೋರ್ವ ವ್ಯಕ್ತಿಯನ್ನೂ ವಶಕ್ಕೆ ಪಡೆದಿದ್ದಾರೆ. ಈತ ಆರೋಪಿಗಳ ಮೊಬೈಲ್ ಡೇಟಾ ಡಿಲೀಟ್ ಮಾಡಲು ಸಹಾಯ ಮಾಡಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಏನಿದು ಪ್ರಕರಣ?

ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರ ಹೆಸರು ಕೇಳಿ ಬಂದಿದೆ. ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ಇದನ್ನೂ ಓದಿ: Actor Darshan : Boss ನಿಮ್ಮನ್ನ ಈ ರೀತಿ ನೋಡೊಕೆ ಆಗ್ತಿಲ್ಲ; ಬಿಕ್ಕಿ ಬಿಕ್ಕಿ ಅತ್ತ ದರ್ಶನ್​ ಮಹಿಳಾ ಅಭಿಮಾನಿ!

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಜೂನ್‌ 11ರಂದು ದರ್ಶನ್‌ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದರು.

Exit mobile version