Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ! - Vistara News

ಕರ್ನಾಟಕ

Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Actor Darshan: ನಟ ದರ್ಶನ್‌ ಅವರನ್ನು ಕೊಲೆ ಕೇಸ್‌ನಲ್ಲಿ ಬಂಧಿಸಿದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್‌ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಕ್ಷಿತಾ ಪ್ರೇಮ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ದರ್ಶನ್‌ ಅವರು ಸಂಕಷ್ಟದಿಂದ ಪಾರಾಗಲಿ ಎಂದು ದೇವರಲ್ಲಿ ಪೂಜೆ, ಪ್ರಾರ್ಥನೆ ಮಾಡುತ್ತೇನೆ ಎಂಬುದಾಗಿ ಸಂಜನಾ ಗಲ್ರಾಣಿ ಹೇಳಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿರುವ ಸುದ್ದಿಯು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಗೆಳತಿ ಪವಿತ್ರಾ ಗೌಡ (Pavitra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ್ದಕ್ಕೆ ರೇಣುಕಾಸ್ವಾಮಿ ಅವರನ್ನು ದರ್ಶನ್‌ ಹಾಗೂ ಅವರ ಸ್ನೇಹಿತರು ಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಜನರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ದರ್ಶನ್‌ ಬಂಧನದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್‌ ನಟಿಯರಾದ ಸಂಜನಾ ಗಲ್ರಾಣಿ (Sanjana Galrani) ಹಾಗೂ ರಕ್ಷಿತಾ ಪ್ರೇಮ್‌ (Rakshita Prem) ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸುತ್ತಲೇ ಸಂಜನಾ ಗಲ್ರಾಣಿ ಅವರು ವಿಡಿಯೊ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. “ನಟ ದರ್ಶನ್‌ ಅವರ ಬಂಧನದಿಂದ ನನಗೆ ಶಾಕ್‌ ಆಗಿದೆ. ಇದು ಬಂಧನ ಆಗಿರದೆ, ಕೇವಲ ವಿಚಾರಣೆ ಆಗಿರಲಿ. ಕೂಡಲೇ ದರ್ಶನ್‌ ಅವರು ಸಂಕಷ್ಟದಿಂದ ಪಾರಾಗಲಿ ಎಂದು ದೇವರಲ್ಲಿ ಪೂಜೆ, ಪ್ರಾರ್ಥನೆ ಮಾಡುತ್ತೇನೆ” ಎಂಬುದಾಗಿ ಸಂಜನಾ ಗಲ್ರಾಣಿ ಹೇಳಿದ್ದಾರೆ. ಇನ್ನು ರಕ್ಷಿತಾ ಪ್ರೇಮ್‌ ಅವರು, ಹಾರ್ಟ್‌ ಬ್ರೇಕ್‌ ಆಗಿರುವ ಎಮೋಜಿ ಪೋಸ್ಟ್‌ ಮಾಡಿದ್ದು, “ಹೇಳಲು ತುಂಬ ಇದೆ. ಆದರೆ, ಏನೂ ಹೇಳಲು ಆಗುತ್ತಿಲ್ಲ” ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ, ಅಭಿಮಾನಿಗಳ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾ ರಘು ದರ್ಶನ್‌ ಸೇರಿ 13 ಜನರನ್ನು ಬಂಧಿಸಿರುವ ಪೊಲೀಸರು ಇಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇದಕ್ಕಾಗಿ, ಪೊಲೀಸ್‌ ಠಾಣೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ತಪಾಸಣೆ ಮುಗಿದಿದೆ. ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಕೈಗೊಳ್ಳುತ್ತಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ: Actor Darshan : ದರ್ಶನ್​ಗೆ ಮರಣದಂಡನೆಯಾಗಲಿ; ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಒತ್ತಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

By Election: ಉಪಚುನಾವಣೆ ಗೆಲುವಿಗೆ ಮೈತ್ರಿ ಪಕ್ಷಗಳ ಲೆಕ್ಕಾಚಾರ; ಗೆಲುವಿನ ದಡ ಸೇರಿಸುತ್ತಾ 2+1 ಸೂತ್ರ?

By Election: ಬೈ ಎಲೆಕ್ಷನ್‌ ನಡೆಯಲಿರುವ ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಪಕ್ಷಗಳು ಗೆಲುವುಗಾಗಿ ಪಣ ತೊಟ್ಟಿದ್ದು, ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿವೆ. 2+1 ಸೂತ್ರದಂತೆ ಟಿಕೆಟ್‌ ಹಂಚಿಕೆಯಾಗಲಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸಿದರೆ ಶಿಗ್ಗಾಂವ್ ಮತ್ತು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

VISTARANEWS.COM


on

By Election
Koo

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಇದೀಗ ರಾಜ್ಯದಲ್ಲಿ ಉಪ ಚುನಾವಣೆಗೆ ಕಣ ರಂಗೇರಿದೆ (By Election). ಬೈ ಎಲೆಕ್ಷನ್‌ ನಡೆಯಲಿರುವ ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರಿನಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್‌ (JDS) ಮೈತ್ರಿ ಪಕ್ಷಗಳು ಗೆಲುವುಗಾಗಿ ಪಣ ತೊಟ್ಟಿದ್ದು, ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿವೆ. 2+1 ಸೂತ್ರದಂತೆ ಟಿಕೆಟ್‌ ಹಂಚಿಕೆಯಾಗಲಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸಿದರೆ ಶಿಗ್ಗಾಂವ್ ಮತ್ತು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಕುತೂಹಲ ಮೂಡಿಸಿದ ಚನ್ನಪಟ್ಟಣ ಕ್ಷೇತ್ರ

ಸದ್ಯ ಚನ್ನಪಟ್ಟಣ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಯಾರೆಲ್ಲ ಕಣಕ್ಕಿಳಿಯಲಿದ್ದಾರೆ ಎನ್ನುವ ವಿಚಾರವೇ ಕುತೂಹಲ ಮೂಡಿಸಿದೆ. ಚನ್ನಪಟ್ಟಣದಲ್ಲಿ ಮೊದಲಿಂದಲೂ ನೇರಾನೇರ ಪೈಪೋಟಿ ಇರೋದು ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ. ಇಲ್ಲಿ ಕಾಂಗ್ರೆಸ್‌ಗೆ ಯಾವಾಗಲೂ ಮೂರನೇ ಸ್ಥಾನ. 2023, 2018ರಲ್ಲಿ ಇಲ್ಲಿ ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಅದಕ್ಕೂ ಮೊದಲು 2013 ಮತ್ತು 2008ರಲ್ಲಿ ಸಿ.ಪಿ.ಯೋಗಿಶ್ವರ್ ಜಯ ದಾಖಲಿಸಿದ್ದರು.

ಮುಸ್ಲಿಂ ಹಾಗೂ ಹಿಂದುಳಿದ ಸಮುದಾಯದ ಮತಗಳು ಇಲ್ಲಿನ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯಕತ್ವದ ಕೊರತೆಯಿಂದ ಕಾಂಗ್ರೆಸ್‌ ಸಂಘಟನೆಯಲ್ಲಿ ಹಿಂದುಳಿದಿದೆ. ಹೀಗಾಗಿ ಈ ಬಾರಿ ಇಲ್ಲಿಂದ ಗೆಲ್ಲಲೇ ಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಸೋತ ಡಿ.ಕೆ.ಸುರೇಶ್ ಅಥವಾ ಡಿ.ಕೆ.ಶಿವಕುಮಾರ್ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಲೋಕಸಭೆಯಲ್ಲಿ ಸೋತ ಸಹೋದರನನ್ನ ಗೆಲ್ಲಿಸಿ ವಿಧಾನಸಭೆಗೆ ತರಲು ಶಿವಕುಮಾರ್ ಯೋಜನೆ ರೂಪಿಸಿದ್ದಾರೆ ಎನ್ನುವ ಮಾತೂ ಕೇಳಿ ಬಂದಿದೆ.

ಇತ್ತ ಮೈತ್ರಿ ಪಕ್ಷಗಳು ಜೆಡಿಎಸ್‌ನಿಂದ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲಿದೆ. ಅಥವಾ ಜೆಡಿಎಸ್‌ ಚಿಹ್ನೆಯಲ್ಲಿ ಸಿ.ಪಿ.ಯೋಗಿಶ್ವರ್ ಸ್ಪರ್ಧಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಈಗಾಗಲೇ ಎರಡು ಚುನಾವಣೆಗಳನ್ನ ಸೋತಿರುವ ನಿಖಿಲ್ ಅವರು ಉಪಚುನಾವಣೆಯಲ್ಲಿ ಕಣಕ್ಕಿಳಿಯುವುದು ಬೇಡ ಎಂದು ಕೆಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಸ್ವತಃ ಕುಮಾರಸ್ವಾಮಿ ಅವರಿಗೂ ಮಗ ಈಗ ಕಣಕ್ಕಿಳಿಯುವುದರಲ್ಲಿ ಆಸಕ್ತಿ ಇಲ್ಲ ಎನ್ನಲಾಗಿದೆ.

ಇನ್ನು ಜೆಡಿಎಸ್‌ನಿಂದ ಸಿ.ಪಿ.ಯೋಗಿಶ್ವರ್ ಅವರನ್ನು ಕಣಕ್ಕೆ ಇಳಿಸುವ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿದೆ. ಎಚ್‌ಡಿಕೆ ಕುಟುಂಬದಿಂದಲೇ ಅಭ್ಯರ್ಥಿ ಆಗಬೇಕು ಎಂದು ಕೆಲವು ಮುಖಂಡರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅನಿತಾ ಕುಮಾರಸ್ವಾಮಿ ಅವರ ಬಗ್ಗೆ ಚನ್ನಪಟ್ಟಣ ಜನರಿಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಹೀಗಾಗಿ ಎಚ್‌ಡಿಕೆ ಸೂಕ್ತ ಅಭ್ಯರ್ಥಿ ಹುಡುಕುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿವೆ. ಒಟ್ಟಿನಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಸೋಲಿಸಲು ದಳಪತಿಗಳ ಕಸರತ್ತು ಈಗಾಗಲೇ ಆರಂಭವಾಗಿದೆ.

ಇತ್ತ ಶಿಗ್ಗಾಂವ್ ಮತ್ತು ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಕಣಕ್ಕಿಳಿಯಲಿದ್ದಾರೆ. ಶಿಗ್ಗಾಂವ್ ಟಿಕೆಟ್ ತನ್ನ ಪುತ್ರ ಭರತ್‌ಗೆ ಕೊಡಿಸಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Channapatna By Election: ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸೈನಿಕ; ಬಿಜೆಪಿಯಿಂದಲಾ, ಜೆಡಿಎಸ್‌ನಿಂದಲಾ?

Continue Reading

ಕರ್ನಾಟಕ

Kamala Hampana: ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ಇನ್ನಿಲ್ಲ

Kamala Hampana: ನಾಡಿನ ಖ್ಯಾತ ಸಾಹಿತಿ, ನಾಡೋಜ ಪ್ರೊ. ಕಮಲಾ ಹಂಪನಾ (89) ಅವರು ಇಂದು (ಜೂನ್‌ 22) ನಿಧನ ಹೊಂದಿದರು. ಪತಿ, ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅನೇಕ ಬಂದು ಮಿತ್ರರು, ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Kamala Hampana
Koo

ಬೆಂಗಳೂರು: ನಾಡಿನ ಖ್ಯಾತ ಸಾಹಿತಿ, ನಾಡೋಜ ಪ್ರೊ. ಕಮಲಾ ಹಂಪನಾ (Kamala Hampana) (89) ಅವರು ಇಂದು (ಜೂನ್‌ 22) ನಿಧನ ಹೊಂದಿದರು. ಪತಿ, ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅನೇಕ ಬಂಧು ಮಿತ್ರರು, ಅಪಾರ ಸಾಹಿತ್ಯಾಭಿಮಾನಿಗಳನ್ನು ಅವರು ಅಗಲಿದ್ದಾರೆ. ಸಂಜೆಯ ತನಕ ರಾಜಾಜಿನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

60 ವರ್ಷಗಳ ಕಾಲ ಸಾಹಿತ್ಯ ಕೃಷಿ

ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ.

ಡಾ.ಕಮಲಾ ಹಂಪನಾ ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಸುಮಾರು 60ಕ್ಕೂ ಹೆಚ್ಚು ಕೃತಿಗಳು ಇದುವರೆಗೆ ಪ್ರಕಟವಾಗಿದ್ದು, ಇದರಲ್ಲಿ ಸೃಜನಕೃತಿಗಳೂ ಇವೆ. ʼಬಿಂದಲಿʼ, ʼಬುಗುಡಿʼ ಹಾಗೂ ʼಬಯಲುʼ ಇವು ಕಮಲಾ ಹಂಪನಾ ಅವರ ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ಬರೆದಿದ್ದಾರೆ.

ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸ್ಕೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವ ಕಮಲಾ ಹಂಪನಾ ಅವರ ಸಾಕ್ಷ್ಯಚಿತ್ರವನ್ನು ಕರ್ನಾಟಕ ಸರ್ಕಾರ ಸಿದ್ಧಪಡಿಸಿದೆ. ಜಗತ್ತಿನ ಅಯ್ದು ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತಾರಾಷ್ಟ್ರೀಯ ಸಾಕ್ಷ್ಯಚಿತ್ರಕ್ಕೆ ಇಡೀ ಭಾರತದಿಂದ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿದ್ದು ವಿಶೇಷ. ʼಬೇರು ಬೆಂಕಿ ಬಿಳಲುʼ ಎನ್ನುವುದು ಕಮಲಾ ಹಂಪನಾ ಅವರ ಜೀವನಯಾನದ ಹೃದಯಸ್ಪರ್ಶಿ ಸಂಕಥನ. ಕಮಲಾ ಹಂಪನಾ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Continue Reading

ಕ್ರೈಂ

Actor Darshan: ದರ್ಶನ್‌ಗೆ ಇಂದು ಮತ್ತೊಂದು ಅಗ್ನಿ ಪರೀಕ್ಷೆ; ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರುತ್ತಾರಾ ಚಾಲೆಂಜಿಂಗ್‌ ಸ್ಟಾರ್‌?

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌  ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಇಲ್ಲಿ ದರ್ಶನ್‌ ಭವಿಷ್ಯ ನಿರ್ಧಾರವಾಗಲಿದೆ.

ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

ಒಂದುವೇಳೆ ನ್ಯಾಯಾಂಗ ಬಂಧನವಾದರೆ ದರ್ಶನ್‌ ಬೆಂಗಳೂರಿನ‌ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈಗಾಗಲೇ ಪ್ರಕರಣದ ಎ1 ಆರೋಪಿ, ದರ್ಶನ್‌ ಸ್ನೇಹಿತೆ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮೀ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ‌ ದರ್ಶನ್ ಜೈಲು ಸೇರಿದ್ದರು. ಇಂದು ಮತ್ತೆ ನ್ಯಾಯಾಂಗ ಬಂಧನವಾದರೆ ಅವರು ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದಂತಾಗುತ್ತದೆ.

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Continue Reading

ಮಳೆ

Karnataka Weather :‌ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ರಣಮಳೆ ಫಿಕ್ಸ್!

Karnataka Weather Forecast : ಇಂದು ಕರಾವಳಿ, ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಜೂ.22ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಸಾಕಷ್ಟು ವ್ಯಾಪಕವಾದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇನ್ನೂ ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಪ್ರತ್ಯೇಕವಾಗಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಐಎಂಡಿ ರೆಡ್ ಹಾಗೂ ಆರೆಂಜ್‌ ಅಲರ್ಟ್ ಘೋಷಿಸಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಕಾರಣಕ್ಕೆ ಜೂನ್‌ 24ರವರೆಗೆ ಮೀನುಗಾರಿಕೆಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lokayukta Raid : ಹಲಸಿನ ಮರ ತೆರವಿಗೂ ಕೊಡಬೇಕು ಗರಿ ಗರಿ ನೋಟು; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಕೋರರು

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಸೀಬೆಕಾಯಿಗೆ ಸಾಮಾನ್ಯವಾಗಿ ಎರಡು ಋತುಗಳಿವೆ. ಅಂದರೆ ವರ್ಷಕ್ಕೆರಡು ಬಾರಿ ಇದು ದೊರೆಯುತ್ತದೆ. ಮಕ್ಕಳಿಂದ ವೃದ್ಧರಾದಿಯಾಗಿ ಕರೆದು ಕೊಟ್ಟರೂ, ಸೀಬೆಯನ್ನು ಕದ್ದು ತಿನ್ನುವುದೇ ಪ್ರಿಯವಾದ್ದರಿಂದ ಹೀಗೆ ಒಂದಕ್ಕಿಂತ ಹೆಚ್ಚಿನ ಬೆಳೆಗಳನ್ನು ಸೃಷ್ಟಿಯೇ ನೀಡಿರಬಹುದು ಇದಕ್ಕೆ. ಎಳೆ ಮಿಡಿ, ಕಾಯಿ, ಹಣ್ಣು ಮುಂತಾದ ಯಾವುದೇ ಭೇದವಿಲ್ಲದೆ ಇದನ್ನು ಖಾಲಿ ಮಾಡುವವರಿದ್ದಾರೆ. ಬಾಯಿ ರುಚಿಗಷ್ಟೇ ಇದನ್ನು ತಿನ್ನುವುದಲ್ಲ, ಸೀಬೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ (Benefits Of Eating Guava) ಪ್ರಯೋಜನಗಳಿವೆ.

Crop woman with halves of guava

ಸತ್ವಗಳು

ಇದರಲ್ಲಿ ವಿಟಮಿನ್‌ ಎ, ಸಿ, ನಾರು ಮತ್ತು ಪೊಟಾಶಿಯಂನಂಥ ಖನಿಜಗಳು ಸಾಕಷ್ಟಿವೆ. ಜೊತೆಗೆ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಇರುವುದರಿಂದ ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳನ್ನು ಒದಗಿಸಬಲ್ಲದು ಈ ಹಣ್ಣು. ಬಿಳಿ ಪೇರಲೆ, ಹಳದಿ ಬಣ್ಣದ್ದು, ಕೆಂಪು ಬಣ್ಣದ್ದು- ಹೀಗೆ ಯಾವುದೇ ಆದರೂ ಅವೆಲ್ಲವೂ ಆರೋಗ್ಯಕ್ಕೆ ಒಳ್ಳೆಯವೇ.

guava fruits

ವಿಟಮಿನ್‌ ಸಿ

ಒಂದು ದೊಡ್ಡ ಸೀಬೆ ಹಣ್ಣಿನಲ್ಲಿ ಎರಡು ಕಿತ್ತಳೆ ಹಣ್ಣುಗಳಲ್ಲಿ ಇರುವಷ್ಟು ಸಿ ಜೀವಸತ್ವ ಇದೆಯೆಂಬುದು ಗೊತ್ತೇ? ಇದರಿಂದ ರೋಗ ನಿರೋಧಕ ಶಕ್ತಿ ಬಲವಾಗುವುದಲ್ಲದೆ, ಕಬ್ಬಿಣದ ಅಂಶ ದೇಹದೊಳಗೆ ಚೆನ್ನಾಗಿ ಹೀರಲ್ಪಡುತ್ತದೆ. ಮಾತ್ರವಲ್ಲ, ಕೊಲಾಜಿನ್‌ ಉತ್ಪಾದನೆ ಹೆಚ್ಚಾಗಿ, ಕೂದಲು ಮತ್ತು ಚರ್ಮದ ಆರೋಗ್ಯವೂ ಸುಧಾರಿಸುತ್ತದೆ.

heart attack and Diabetes control

ಮಧುಮೇಹಿಗಳಿಗೆ ಸೂಕ್ತ

ಇದು ಹಣ್ಣಾದಾಗ ರುಚಿ ಸಿಹಿಯೇ ಇದ್ದರೂ, ಇದರ ಗ್ಲೈಸೆಮಿಕ್‌ ಸೂಚಿ ಕಡಿಮೆ. ಪೇರಲೆಯ ಎಲೆಯ ಕಷಾಯಗಳನ್ನು ಸಕ್ಕರೆ ಕಾಯಿಲೆಯ ನಿಯಂತ್ರಣಕ್ಕೆ ಬಳಸುವ ಪದ್ಧತಿ ಪರಂಪರಾಗತ ಔಷಧಕ್ರಮದಲ್ಲಿ ಇದೆ. ನಾರಿನಂಶ ಹೇರಳವಾಗಿ ಇರುವುದರಿಂದ, ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನೇ ನೀಡುತ್ತದೆ. ಜೊತೆಗೆ, ಗ್ಲೂಕೋಸ್‌ ಅಂಶ ದಿಢೀರನೆ ರಕ್ತ ಸೇರದಂತೆ ತಡೆಯುವ ಗುಣವಿದೆ ಇದಕ್ಕೆ.

fresh guava fruit

ಕ್ಯಾಲರಿ ಕಡಿಮೆ

ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುವ ಈ ಹಣ್ಣಿನಲ್ಲಿ ಕ್ಯಾಲರಿ ಕಡಿಮೆ, ಕೊಬ್ಬು ಬಹುತೇಕ ಇಲ್ಲವೇ ಇಲ್ಲ. ಇದರಲ್ಲಿ ಅಗತ್ಯ ಪ್ರಮಾಣದ ನಾರು ಇರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡಿ, ಕಳ್ಳ ಹಸಿವೆಯನ್ನು ನೀಗಿಸುತ್ತದೆ. ಹೆಚ್ಚು ಕಾಲದವರೆಗೆ ಹಸಿವಾಗದಂತೆ ತಡೆಯುತ್ತದೆ. ಬಾಯಾಡುವುದಕ್ಕೆ ಇನ್ನೇನಿದೆ ಎಂದು ತಡಕುವುದನ್ನು ತಡೆಯುತ್ತದೆ. ಜೊತೆಗೆ, ದೇಹಕ್ಕೆ ಅಗತ್ಯವಾದ ಖನಿಜಗಳು, ವಿಟಮಿನ್‌ ಸಿ ಮತ್ತಿತರ ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಹಾಗಾಗಿ ತೂಕ ಇಳಿಸುವ ಯೋಜನೆಯಿದ್ದರೆ ಪೇರಲೆ ಹಣ್ಣನ್ನು ಸಂತೋಷದಿಂದ ನಿಮ್ಮ ಆಹಾರಯೋಜನೆಯಲ್ಲಿ ಸೇರಿಸಿಕೊಳ್ಳಿ. ಆದರೆ ಇದನ್ನು ಆಹಾರದ ಭಾಗವಾಗಿ ಬಳಸಿಕೊಳ್ಳುವುದು ಹೇಗೆ? ಪೇರಲೆಯನ್ನು ಕಚ್ಚಿ ತಿನ್ನುವುದು ಮಾತ್ರವೇ ಎಲ್ಲರಿಗೂ ಪರಿಚಿತವಾದದ್ದು. ಹೀಗೆ ಎಷ್ಟು ತಿನ್ನಲು ಸಾಧ್ಯ? ದಿನವೂ ಅದನ್ನೇ ಮಾಡಿದರೆ ಬೋರಾಗುವುದಿಲ್ಲವೇ? ಇಲ್ಲಿದೆ ಪರಿಹಾರ.

Guava smoothie

ಸೀಬೆ ಸ್ಮೂದಿ

ತೂಕ ಇಳಿಸುವವರಿಗೆ ಸ್ಮೂದಿ ಉತ್ತಮ ಆಹಾರ. ಯಾವುದೇ ಹಣ್ಣುಗಳನ್ನು ಇಡಿಯಾಗಿ ಅಥವಾ ಉಳಿದೆಲ್ಲ ಹಣ್ಣುಗಳ ಜೊತೆಯಾಗಿ ಹಾಕಿ ಸ್ಮೂದಿ ಮಾಡಿಕೊಳ್ಳಬಹುದು. ಇದಕ್ಕೆ ಪೇರಲೆಯನ್ನೂ ಸೇರಿಸಿದರೆ ಉತ್ತಮ. ಇದು ಸ್ಮೂದಿಯ ರುಚಿ ಮತ್ತು ಘಮವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಪೌಷ್ಟಿಕಾಂಶವನ್ನೂ ಹೆಚ್ಚಿಸುತ್ತದೆ. ಬಾಳೆಹಣ್ಣು, ಬೆರ್ರಿಗಳು ಮುಂತಾದ ನಿಮ್ಮ ಆಯ್ಕೆಯ ಹಣ್ಣುಗಳ ಜೊತೆಗೆ ಸೀಬೆಯನ್ನೂ ಸೇರಿಸಿ. ಜೊತೆಗೆ ಹಾಲು ಅಥವಾ ಮೊಸರು- ಯಾವುದು ಸರಿ ಹೊಂದುತ್ತದೆ ಎಂಬುದೂ ನಿಮ್ಮದೇ ಆಯ್ಕೆ. ಇದರ ಮೇಲೆ ಚಿಯಾ, ಅಗಸೆ ಮುಂತಾದ ಬೀಜಗಳನ್ನು ಉದುರಿಸಿದರೆ ಸತ್ವಯುತ ಸ್ಮೂದಿ ಸಿದ್ಧ.

ಸೀಬೆ ಸಲಾಡ್

ತೂಕ ಇಳಿಸುವವರಿಗೆ ಸಲಾಡ್‌ ಇಲ್ಲದೆ ಮುಂದೆ ಹೋಗುವುದೇ ಇಲ್ಲ. ಕಡಿಮೆ ಕೊಬ್ಬಿರುವ ಅಗತ್ಯ ಸತ್ವಗಳನ್ನು ಹೊಂದಿರುವ ಸಲಾಡ್‌ಗಳು ದೇಹಕ್ಕೆ ಚೈತನ್ಯ ನೀಡುವುದರ ಜೊತೆಗೆ ಕೊಬ್ಬು ಕರಗಿಸಲು ನೆರವಾಗುತ್ತವೆ. ಇಂಥ ಯಾವುದೇ ಸಲಾಡ್‌ಗೂ ಪೇರಲೆಯನ್ನು ಸೇರಿಸಬಹುದು. ತರಕಾರಿ ಸಲಾಡ್‌, ಹಣ್ಣುಗಳ ಸಲಾಡ್‌ ಎರಡಕ್ಕೂ ಪೇರಲೆಯ ರುಚಿ ಮತ್ತು ಪರಿಮಳ ಹೊಂದಿಕೊಳ್ಳುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Nicholas Pooran
ಕ್ರಿಕೆಟ್6 mins ago

Nicholas Pooran: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮುರಿದ ನಿಕೋಲಸ್ ಪೂರನ್

Dolly Dhananjay Tittle War Case Has Been Registered Against TS Nagabharana
ಸ್ಯಾಂಡಲ್ ವುಡ್7 mins ago

Dolly Dhananjay: ʻನಾಡಪ್ರಭು ಕೆಂಪೇಗೌಡʼ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು

By Election
ಕರ್ನಾಟಕ11 mins ago

By Election: ಉಪಚುನಾವಣೆ ಗೆಲುವಿಗೆ ಮೈತ್ರಿ ಪಕ್ಷಗಳ ಲೆಕ್ಕಾಚಾರ; ಗೆಲುವಿನ ದಡ ಸೇರಿಸುತ್ತಾ 2+1 ಸೂತ್ರ?

WI vs USA
ಕ್ರಿಕೆಟ್32 mins ago

WI vs USA: ಹೋಪ್‌ ಬ್ಯಾಟಿಂಗ್​ ಆರ್ಭಟಕ್ಕೆ ತಲೆಬಾಗಿದ ಅಮೆರಿಕ; ವಿಂಡೀಸ್​ ಸೆಮಿ ಆಸೆ ಜೀವಂತ

Actor Darshan Karnataka Film Chamber Refuse To Register D Gang Movie Title
ಸ್ಯಾಂಡಲ್ ವುಡ್36 mins ago

Actor Darshan: ʻಡಿ ಗ್ಯಾಂಗ್’ ಟೈಟಲ್‌ಗೆ ಬೇಡಿಕೆ ; ನೋಂದಣಿಗೆ ಚೇಂಬರ್ ನಿರಾಕರಣೆ, ನಿರ್ಮಾಪಕರ ಬೇಸರ!

Kamala Hampana
ಕರ್ನಾಟಕ39 mins ago

Kamala Hampana: ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ಇನ್ನಿಲ್ಲ

Actor Darshan Devil gang gets life imprisonment What do legal experts say
ಸಿನಿಮಾ1 hour ago

Actor Darshan: ʻಡೆವಿಲ್ ಗ್ಯಾಂಗ್‌ʼಗೆ ಜೀವಾವಧಿ ಶಿಕ್ಷೆ ಆಗತ್ತಾ? ಕಾನೂನು ತಜ್ಞರು ಹೇಳೋದೇನು?

NEET-UG Row
ದೇಶ1 hour ago

NEET-UG Row: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೊಸ ಕಾನೂನು; ತಪ್ಪಿತಸ್ಥರಿಗೆ ಶಿಕ್ಷೆ, ದಂಡ ಪ್ರಮಾಣ ಎಷ್ಟು ಗೊತ್ತಾ?

IND vs BAN
ಕ್ರೀಡೆ1 hour ago

IND vs BAN: ಇಂದು ಭಾರತ-ಬಾಂಗ್ಲಾ ಸೂಪರ್​-8 ಸೆಣಸಾಟ; ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Elon Musk
ತಂತ್ರಜ್ಞಾನ2 hours ago

Elon Musk: ಕೆಲವೇ ವರ್ಷಗಳಲ್ಲಿ ಮೊಬೈಲ್‌ ಫೋನೇ ಇರುವುದಿಲ್ಲ; ಬರಲಿದೆ ಹೊಸ ತಂತ್ರಜ್ಞಾನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ21 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ7 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌