Site icon Vistara News

Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Actor Darshan

Actor Darshan Arrested In Murder Case: Sanjana Galrani, Rakshita Prem Show Concern On Him

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿರುವ ಸುದ್ದಿಯು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಗೆಳತಿ ಪವಿತ್ರಾ ಗೌಡ (Pavitra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ್ದಕ್ಕೆ ರೇಣುಕಾಸ್ವಾಮಿ ಅವರನ್ನು ದರ್ಶನ್‌ ಹಾಗೂ ಅವರ ಸ್ನೇಹಿತರು ಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಜನರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ದರ್ಶನ್‌ ಬಂಧನದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್‌ ನಟಿಯರಾದ ಸಂಜನಾ ಗಲ್ರಾಣಿ (Sanjana Galrani) ಹಾಗೂ ರಕ್ಷಿತಾ ಪ್ರೇಮ್‌ (Rakshita Prem) ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸುತ್ತಲೇ ಸಂಜನಾ ಗಲ್ರಾಣಿ ಅವರು ವಿಡಿಯೊ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. “ನಟ ದರ್ಶನ್‌ ಅವರ ಬಂಧನದಿಂದ ನನಗೆ ಶಾಕ್‌ ಆಗಿದೆ. ಇದು ಬಂಧನ ಆಗಿರದೆ, ಕೇವಲ ವಿಚಾರಣೆ ಆಗಿರಲಿ. ಕೂಡಲೇ ದರ್ಶನ್‌ ಅವರು ಸಂಕಷ್ಟದಿಂದ ಪಾರಾಗಲಿ ಎಂದು ದೇವರಲ್ಲಿ ಪೂಜೆ, ಪ್ರಾರ್ಥನೆ ಮಾಡುತ್ತೇನೆ” ಎಂಬುದಾಗಿ ಸಂಜನಾ ಗಲ್ರಾಣಿ ಹೇಳಿದ್ದಾರೆ. ಇನ್ನು ರಕ್ಷಿತಾ ಪ್ರೇಮ್‌ ಅವರು, ಹಾರ್ಟ್‌ ಬ್ರೇಕ್‌ ಆಗಿರುವ ಎಮೋಜಿ ಪೋಸ್ಟ್‌ ಮಾಡಿದ್ದು, “ಹೇಳಲು ತುಂಬ ಇದೆ. ಆದರೆ, ಏನೂ ಹೇಳಲು ಆಗುತ್ತಿಲ್ಲ” ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ, ಅಭಿಮಾನಿಗಳ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾ ರಘು ದರ್ಶನ್‌ ಸೇರಿ 13 ಜನರನ್ನು ಬಂಧಿಸಿರುವ ಪೊಲೀಸರು ಇಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇದಕ್ಕಾಗಿ, ಪೊಲೀಸ್‌ ಠಾಣೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ತಪಾಸಣೆ ಮುಗಿದಿದೆ. ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಕೈಗೊಳ್ಳುತ್ತಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ: Actor Darshan : ದರ್ಶನ್​ಗೆ ಮರಣದಂಡನೆಯಾಗಲಿ; ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಒತ್ತಾಯ

Exit mobile version