Site icon Vistara News

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

‌Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಲು ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ಹೀಗಾಗಿ ಅರ್ಜಿ ಹಿಂಪಡೆಯಲು ಅನುಮತಿ ನೀಡುವಂತೆ ಹೈಕೋರ್ಟ್‌ಗೆ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ‌ ಮನವಿ ಮಾಡಿದ್ದಾರೆ. ಹೀಗಾಗಿ
ಹೊಸದಾಗಿ ಅರ್ಜಿ ಸಲ್ಲಿಸಲು ನ್ಯಾ. ಹೇಮಂತ್ ಚಂದನ ಗೌಡರ್ ಅವರಿದ್ದ ಹೈಕೋರ್ಟ್ ಪೀಠ ಅವಕಾಶ ನೀಡಿದೆ.

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂದರ್ಭದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು. ಆದರೆ, ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್‌ ಪರ ವಕೀಲರು ಮುಂದಾಗಿದ್ದಾರೆ.

ದರ್ಶನ್‌ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan Jail And Gave vijayalakshmi Prasada To Husband

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Exit mobile version